More

    ಗ್ರಾಮ ಕೇಂದ್ರಿಕೃತವಾಗಿ ಕಾರ್ಯ ನಿರ್ವಹಿಸಿ

    ಧಾರವಾಡ: ರಾಜ್ಯದಲ್ಲಿ ಕೋವಿಡ್ ಸೋಂಕು ದಿನದಿಂದ ದಿನಕ್ಕೆ ನಿಯಂತ್ರಣಕ್ಕೆ ಬರುತ್ತಿದೆ. ಆದರೆ, ಗ್ರಾಮೀಣ ಪ್ರದೇಶಕ್ಕೆ ಹಬ್ಬುತ್ತಿದೆ. ಮುಂದಿನ 14 ದಿನ ಕರೊನಾ ನಿಯಂತ್ರಣಕ್ಕೆ ನಿರ್ಣಾಯಕವಾಗಿದೆ. ಜಿಲ್ಲಾಡಳಿತವು ನಗರಗಳ ಜತೆ ಗ್ರಾಮ ಕೇಂದ್ರಿಕೃತವಾಗಿ ಕಾರ್ಯ ನಿರ್ವಹಿಸಬೇಕು ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ ಸೂಚಿಸಿದರು.

    ನಗರದ ರ್ಸಟ್ ಹೌಸ್ ಹೊರಾಂಗಣದಲ್ಲಿ ಗುರುವಾರ ಜರುಗಿದ ಜಿಲ್ಲೆಯ ಹಿರಿಯ ಅಧಿಕಾರಿಗಳು, ನೋಡಲ್ ಅಧಿಕಾರಿಗಳೊಂದಿಗೆ ಜಿಲ್ಲೆಯಲ್ಲಿ ಕೋವಿಡ್ ನಿರ್ವಹಣೆ ಮತ್ತು ನಿಯಂತ್ರಣ, ಚಿಕಿತ್ಸೆ ಕುರಿತ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

    ಹಳ್ಳಿಗಳ ಜನರಿಗೆ ಸೋಂಕು ತಗುಲಿದಾಗ ಬಹುತೇಕರಿಗೆ ಪ್ರತ್ಯೇಕ ಕೋಣೆ, ಶೌಚಗೃಹಗಳ ತೊಂದರೆ ಆಗುತ್ತದೆ. ಆದ್ದರಿಂದ ಅವರನ್ನು ತಾಲೂಕು ಅಥವಾ ಹೋಬಳಿ ಮಟ್ಟದ ಕೋವಿಡ್ ಕಾಳಜಿ ಕೇಂದ್ರಗಳಿಗೆ ಸ್ಥಳಾಂತರಿಸಬೇಕು. ಈ ನಿಟ್ಟಿನಲ್ಲಿ ಗ್ರಾಮ ಮಟ್ಟದ ಕೋವಿಡ್ ಕಾರ್ಯಪಡೆಗಳು ಹೆಚ್ಚು ಕ್ರಿಯಾಶೀಲವಾಗಬೇಕು ಎಂದರು.

    ಕೇಂದ್ರ ಸರ್ಕಾರ ಗ್ರಾಮೀಣ ಪ್ರದೇಶದಲ್ಲಿ ಅನುಷ್ಠಾನಗೊಳಿಸಲು ಕೋವಿಡ್ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಅದನ್ನು ಪರಿಣಾಮಕಾರಿಯಾಗಿ ಅನುಸರಿಸಬೇಕು. ಹಳ್ಳಿಯಲ್ಲಿಯೇ ರ್ಯಾಟ್ (ರ್ಯಾಪಿಡ್ ಆಂಟಿಜೆನ್ ಟೆಸ್ಟ್) ಮಾಡಬೇಕು. ಪಾಸಿಟಿವ್ ಬಂದ ಕುಟುಂಬ ಸದಸ್ಯರು ಹಾಗೂ ಸಂರ್ಪತರಿಗೆ ಕೋವಿಡ್ ಪರೀಕ್ಷೆಯನ್ನು ಕಡ್ಡಾಯವಾಗಿ ಮಾಡಬೇಕು ಎಂದು ಸೂಚಿಸಿದರು.

    ಜಿಲ್ಲಾಧಿಕಾರಿ ನಿತೇಶ ಪಾಟೀಲ ಜಿಲ್ಲೆಯ ಕೋವಿಡ್ ನಿರ್ವಹಣೆ ಮಾಹಿತಿ ನೀಡಿದರು. ಬೆಳಗಾವಿ ಉತ್ತರ ವಲಯ ಪೊಲೀಸ್ ಮಹಾ ನಿರೀಕ್ಷಕ ರಾಘವೇಂದ್ರ ಸುಹಾಸ್, ಪೊಲೀಸ್ ಆಯುಕ್ತ ಲಾಭೂರಾಮ, ಜಿ.ಪಂ. ಸಿಇಒ ಡಾ. ಬಿ. ಸುಶೀಲಾ, ಕಿಮ್್ಸ ನಿರ್ದೇಶಕ ಡಾ. ರಾಮಲಿಂಗಪ್ಪ ಅಂಟರತಾನಿ, ಪಾಲಿಕೆ ಆಯುಕ್ತ ಡಾ. ಸುರೇಶ ಇಟ್ನಾಳ, ಡಿಮ್ಹಾನ್ಸ್ ನಿರ್ದೇಶಕ ಡಾ. ಮಹೇಶ ದೇಸಾಯಿ, ಉಪ ವಿಭಾಗಾಧಿಕಾರಿ ಡಾ. ಗೋಪಾಲಕೃಷ್ಣ ಬಿ., ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ಯಶವಂತ ಮದೀನಕರ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಶಿವಕುಮಾರ ಮಾನಕರ, ಜಿಲ್ಲಾ ಸಮೀಕ್ಷಣಾಧಿಕಾರಿ ಡಾ. ಸುಜಾತಾ ಹಸವಿಮಠ, ಕಿಮ್್ಸ ವೈದ್ಯರಾದ ಡಾ. ರಾಜಶೇಖರ ದ್ಯಾಬೇರಿ, ಡಾ. ರವೀಂದ್ರ ಗದಗ, ಡಾ. ಲಕ್ಷ್ಮೀಕಾಂತ ಲೋಕರೆ, ಕಿಮ್್ಸ ಪ್ರಾಚಾರ್ಯ ಡಾ. ಈಶ್ವರ ಹೊಸಮನಿ, ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts