More

    ಚಂದ್ರಗುತ್ತಿಯ ರೇಣುಕಾಂಬ ದೇವಸ್ಥಾನದ ಆವರಣದಲ್ಲಿ ಹಿಂದುಯೇತರರಿಗೆ ವ್ಯಾಪಾರಕ್ಕೆ ಅವಕಾಶ ನೀಡಬೇಡಿ; ಹಿಂದುಪರ ಸಂಘಟನೆಗಳ ಆಗ್ರಹ

    ಸೊರಬ: ಚಂದ್ರಗುತ್ತಿಯ ಶ್ರೀ ರೇಣುಕಾಂಬ ದೇವಸ್ಥಾನದಲ್ಲಿ ಭಕ್ತರಿಗೆ ದೇವಿಯ ದರ್ಶನಕ್ಕೆ ಸಮಯಾವಕಾಶ ವಿಸ್ತರಿಸಬೇಕು ಹಾಗೂ ದೇವಸ್ಥಾನದ ಆವರಣದಲ್ಲಿ ಹಿಂದುಯೇತರರಿಗೆ ವ್ಯಾಪಾರ ವಹಿವಾಟು ನಡೆಸಲು ಅವಕಾಶ ನೀಡಬಾರದು ಎಂದು ಒತ್ತಾಯಿಸಿ ವಿಶ್ವ ಹಿಂದು ಪರಿಷತ್, ಬಜರಂಗದಳ ಹಾಗೂ ಹಿಂದುಪರ ಸಂಘಟನೆಗಳ ಪದಾಧಿಕಾರಿಗಳು ಸೋಮವಾರ ತಹಸೀಲ್ದಾರ್ ಎಚ್.ಎಸ್.ಶೋಭಾಲಕ್ಷ್ಮೀ ಅವರಿಗೆ ಮನವಿ ಸಲ್ಲಿಸಿದರು.
    ದೇವಸ್ಥಾನಕ್ಕೆ ಉತ್ತರ ಕರ್ನಾಟಕ ಭಾಗದಲ್ಲಿ ಲಕ್ಷಾಂತರ ಭಕ್ತರಿದ್ದಾರೆ. ಹುಣ್ಣಿಮೆ, ಶುಕ್ರವಾರ, ಮಂಗಳವಾರ ಸೇರಿದಂತೆ ವಿಶೇಷ ದಿನಗಳಲ್ಲಿ ಸಾಗರೋಪದಿಯಲ್ಲಿ ಭಕ್ತ ಸಮೂಹ ಹರಿದುಬರುತ್ತದೆ. ಪ್ರಸ್ತುತ ದೇವಿಯ ದರ್ಶನಕ್ಕೆ ಬೆಳಗ್ಗೆ 10.30ರಿಂದ ಮಧ್ಯಾಹ್ನ 2 ಮತ್ತು ಸಂಜೆ 4ರಿಂದ 6.30ರ ವರೆಗೆ ಅವಕಾಶ ನೀಡಲಾಗಿದೆ. ಇದರಿಂದ ಭಕ್ತರಿಗೆ ಸಮಸ್ಯೆ ಆಗುತ್ತಿದೆ. ಪ್ರಸ್ತುತ ನಿಗದಿ ಮಾಡಿರುವ ಸಮಯವನ್ನು ಬದಲಿಸಿ ಬೆಳಗ್ಗೆ 8 ರಿಂದ ಸಂಜೆ 7 ಗಂಟೆಯ ವರೆಗೂ ಅವಕಾಶ ನೀಡಬೇಕು ಎಂದು ಹಿರಿಯ ವಕೀಲ ಎಂ.ಕೆ.ಯೋಗೇಶ್ ಒತ್ತಾಯಿಸಿದರು.
    ಹಿಂದು ಧಾರ್ಮಿಕ ಸಂಸ್ಥೆಗಳು ಮತ್ತು ದತ್ತಿ ಕಾಯ್ದೆ 2002ರ ಪ್ರಕಾರ ಹಿಂದುಯೇತರರು ಹಿಂದು ಧಾರ್ಮಿಕ ಕ್ಷೇತ್ರಗಳ ಆವರಣದಲ್ಲಿ ಮತ್ತು ಸುತ್ತಮುತ್ತ ವ್ಯಾಪಾರ ಮಾಡುವಂತಿಲ್ಲ. ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ದೇವಸ್ಥಾನದ ಆವರಣದಲ್ಲಿ ಹಿಂದುಯೇತರರಿಗೆ ವ್ಯಾಪಾರ-ವಹಿವಾಟು ನಡೆಸಲು ಅವಕಾಶ ನೀಡಬಾರದು. ಈ ನಿಟ್ಟಿನಲ್ಲಿ ತಾಲೂಕು ಆಡಳಿತ ಆದೇಶ ಹೊರಡಿಸಬೇಕು ಎಂದರು.

     

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts