More

    ಚೆಟ್ಟಳ್ಳಿಯಲ್ಲಿ ವಿವಾಹಿತ ಮಹಿಳೆಯರ ಕ್ರಿಕೆಟ್ ಪಂದ್ಯಾವಳಿ

    ಮಡಿಕೇರಿ: ಚೆಟ್ಟಳ್ಳಿಯ ಅವರ್ ಕ್ಲಬ್ ವತಿಯಿಂದ ನ.೪ ರಂದು ವಿವಾಹಿತ ಮಹಿಳೆಯರ ಮುಕ್ತ ನಾಕೌಟ್ ಕ್ರಿಕೆಟ್ ಪಂದ್ಯಾವಳಿ ನಡೆಯಲಿದೆ ಎಂದು ಕ್ಲಬ್ ನ ಅಧ್ಯಕ್ಷೆ ಐಚೆಟ್ಟಿರ ಸುನಿತಾ ಮಾಚಯ್ಯ ತಿಳಿಸಿದರು.


    ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚೆಟ್ಟಳ್ಳಿಯ ಪ್ರೌಢಶಾಲಾ ಮೈದಾನದಲ್ಲಿ ಬೆಳಗ್ಗೆ ೮.೩೦ ಗಂಟೆಗೆ ನಡೆಯಲಿರುವ ಪಂದ್ಯಾವಳಿಯನ್ನು ಮಡಿಕೇರಿಯ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜ್ ನ ನಿವೃತ್ತ ಪ್ರಾಂಶುಪಾಲರಾದ ಮಂಡೇಪಂಡ ಡಾ.ಪುಷ್ಪಾ ಕುಟ್ಟಣ್ಣ ಉದ್ಘಾಟಿಸಲಿದ್ದಾರೆ ಎಂದರು.


    ೬ ಓವರ್ ಗಳ ಪಂದ್ಯಾವಳಿ ನಡೆಯಲಿದ್ದು, ೨೫ ವರ್ಷ ಮೇಲ್ಪಟ್ಟ ವಿವಾಹಿತ ಮಹಿಳೆಯರಿಗೆ ಮಾತ್ರ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ. ಒಟ್ಟು ೧೫ ತಂಡಗಳು ಪಾಲ್ಗೊಳ್ಳಲಿವೆ. ವಿಜೇತ ತಂಡಕ್ಕೆ ರೂ.೨೧ ಸಾವಿರ ನಗದು ಮತ್ತು ಟ್ರೋಫಿ, ದ್ವಿತೀಯ ರೂ.೧೧ ಸಾವಿರ ನಗದು ಮತ್ತು ಟ್ರೋಫಿ, ತೃತೀಯ ರೂ.೬ ಸಾವಿರ ನಗದು ಮತ್ತು ಟ್ರೋಫಿ ನೀಡಲಾಗುವುದು.


    ಅಲ್ಲದೆ, ಬೆಸ್ಟ್ ಬೌಲರ್, ಬೆಸ್ಟ್ ಬ್ಯಾಟರ್ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಬಹುಮಾನ ವಿತರಿಸಲಾಗುವದು. ಇದರೊಂದಿಗೆ ಚಿಯರ್ ಲೀಡಿಂಗ್ ತಂಡಗಳಿಗೂ ಬಹುಮಾನವನ್ನು ನೀಡಲು ನಿರ್ಧರಿಸಲಾಗಿದೆ ಎಂದು ಹೇಳಿದರು.


    ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಕ್ರೀಡಾ ನಿರ್ದೇಶಕ ಪಿ.ಸಿ.ರಮೇಶ್ ಮಾತನಾಡಿ, ಮಹಿಳೆಯರಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ವಿವಾಹಿತ ಮಹಿಳೆಯರಿಗೆ ಪಂದ್ಯಾವಳಿಯನ್ನು ಆಯೋಜಿಸಲಾಗಿದ್ದು, ಕಳೆದ ವರ್ಷ ಕೂಡ ಯಶಸ್ವಿಯಾಗಿ ನಡೆಸಲಾಗಿದೆ. ಕೊಡಗು ಜಿಲ್ಲೆಯಲ್ಲಿ ಮೊದಲ ಬಾರಿಗೆ ನಾವು ಈ ಪ್ರಯತ್ನ ಮಾಡಿದ್ದು, ಐಸಿಸಿ ಮಾದರಿಯಲ್ಲಿ ಪಂದ್ಯಾವಳಿ ನಡೆಯಲಿದೆ ಎಂದು ತಿಳಿಸಿದರು.


    ಸುದ್ದಿಗೊಷ್ಠಿಯಲ್ಲಿ ಕ್ಲಬ್‌ನ ಉಪಾಧ್ಯಕ್ಷೆ ಮುಳ್ಳಂಡ ಶೋಭಾ ಚಂಗಪ್ಪ ಹಾಗೂ ಖಜಾಂಚಿ ಮುಳ್ಳಂಡ ಸುಶೀಲ ತಮ್ಮಯ್ಯ ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts