More

    ಚಟುವಟಿಕೆ ಮೂಲಕ ಮಕ್ಕಳ ಪ್ರತಿಭೆ ಗುರುತಿಸಿ


    ಯಾದಗಿರಿ: ಮಕ್ಕಳಲ್ಲಿ ಅಡಗಿರುವ ಪ್ರತಿಭೆ ಗುರುತಿಸುವ ಜವಾಬ್ದಾರಿ ಪಾಲಕರದ್ದಾಗಿದೆ ಎಂದು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಹಣಮಂತ್ರಾಯ ಕರಡಿ ಸಲಹೆ ನೀಡಿದರು.


    ನಗರದ ಲುಂಬಿನ ವನದಲ್ಲಿ ಬಾಲ ಭವನ ಸೊಸೈಟಿ ಬೆಂಗಳೂರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗಳ ಸಹಯೋಗದಲ್ಲಿ ಗಣರಾಜ್ಯೋತ್ಸವ ದಿನದ ಅಂಗವಾಗಿ ಆಯೋಜಿಸಿದ್ದ ಸಾಂಸ್ಕೃತಿಕ ಚಟುವಟಿಕೆಗಳ ಸ್ಪಧರ್ಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಚಿತ್ರಕಲೆ, ಛದ್ಮವೇಷ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ಮಕ್ಕಳಲ್ಲಿರುವ ಪ್ರತಿಭೆಗಳನ್ನು ಗುರುತಿಸುವ ಕಾರ್ಯ ಮಹತ್ವದ್ದಾಗಿದೆ. ಈ ಪರಿಕಲ್ಪನೆಯು ಮಕ್ಕಳ ಸವರ್ಾಂಗೀಣ ಬೆಳವಣಿಗೆಗೆ ಅನುಕೂಲವಾಗಲಿದೆ ಎಂದರು.

    ಮಗುವಿನ ಮನಸ್ಸು ಬಿಳಿಹಾಳೆ ಇದ್ದಂತೆ. ಪರೀಕ್ಷೆಯಲ್ಲಿ ಹೆಚ್ಚಿನ ಅಂಕ ಪಡೆದುಕೊಳ್ಳಲು ಮಕ್ಕಳ ಮೇಲೆ ಹೆಚ್ಚಿನ ಒತ್ತಡ ಹೇರದೆ, ಅವರಲ್ಲಿನ ಸೃಜನಶೀಲತೆ ಗುರುತಿಸಬೇಕು. ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಹೆಚ್ಚು ತೊಡಗಿಸಿಕೊಳ್ಳಲು ನಾವು ಪ್ರೋತ್ಸಾಹ ನೀಡಬೇಕು. ಇಲ್ಲಿ ವಿವಿಧ ಗ್ರಾಮಗಳಿಂದ ಮಕ್ಕಳು ಚಿತ್ರಕಲೆ, ಕಥೆ, ಕವನ, ಪ್ರಬಂಧ ಸ್ಪಧರ್ೆಗಳಲ್ಲಿ ಭಾಗವಹಿಸುತ್ತಿರುವುದು ಕಂಡು ಸಂತಸವಾಗಿದೆ ಎಂದು ಹೇಳಿದರು.

    ಇದೇ ವೇಳೆ ವಿವಿಧ ಸ್ಪಧರ್ೆಗಳಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು. ಶಿಶು ಅಭಿವೃದ್ಧಿ ಯೋಜನಾಕಾರಿ ಲಾಲಸಾಬ್, ಜಿಲ್ಲಾ ನಿರೂಪಣಾಕಾರಿ ಪ್ರೇಮ್ ಮೂತರ್ಿ, ಕಲ್ಯಾಣ ಸಮಿತಿ ಸದಸ್ಯರಾದ ಬಸವರಾಜ ಪಾಟೀಲ್, ಅನಿಲಕುಮಾರ ಪಾಟೀಲ್, ನಾಗಮ್ಮ, ಸತೀಶ ಜಮಾದಾರ, ಪ್ರಶಾಂತ್ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts