More

    ಚುನಾವಣಾಧಿಕಾರಿಗಳು ಜವಾಬ್ದಾರಿಯಿಂದ ಕೆಲಸ ಮಾಡಿ

    ರಾಯಚೂರು: ಲೋಕಸಭೆ ಚುನಾವಣೆ ಕಾರ್ಯಕ್ಕೆ ನಿಯೋಜನೆಗೊಂಡಿರುವ ಸಹಾಯಕ ಚುನಾವಣಾಧಿಕಾರಿಗಳು ಹಾಗೂ ಕಣ್ಗಾವಲು ತಂಡದ ಸದಸ್ಯರು ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಚಂದ್ರಶೇಖರ ನಾಯಕ ತಿಳಿಸಿದರು.
    ಸ್ಥಳೀಯ ಜಿಲ್ಲಾಧಿಕಾರಿ ಕಚೇರಿಯ ವಿಡಿಯೋ ಸಂವಾದ ಕೊಠಡಿಯಲ್ಲಿ ಗುರುವಾರ ಸಂಜೆ ಸಹಾಯಕ ಚುನಾವಣಾಧಿಕಾರಿಗಳ ಸಭೆಯಲ್ಲಿ ಮಾತನಾಡಿ, ಚುನಾವಣೆ ಅಕ್ರಮಗಳ ಬಗ್ಗೆ ನಿಗಾ ವಹಿಸಲು ನೇಮಕಗೊಂಡ ಸ್ಥಾಯಿ ಕಣ್ಗಾವಲು ತಂಡ ಎಲ್ಲ ಕಾರ್ಯ ಚಟುವಟಿಕೆಗಳ ಬಗ್ಗೆ ಗಮನ ಹರಿಸಬೇಕು ಎಂದರು.
    ಕಣ್ಗಾವಲು ತಂಡ ದಿನನಿತ್ಯ ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ ವೇಳೆ ಸಿಗುವ ದಾಖಲೆ ರಹಿತ ಹಣ, ಮದ್ಯ ಸಾಗಣೆ ಸೇರಿದಂತೆ ಇನ್ನಿತರ ಚಟುವಟಿಕೆಗಳ ವರದಿಯನ್ನು ಸರಿಯಾದ ರೀತಿಯಲ್ಲಿ ದಾಖಲಿಸಬೇಕು. ಆಯಾ ವ್ಯಾಪ್ತಿಯ ಸಹಾಯಕ ಚುನಾವಣಾಕಾರಿಗಳು ಈ ಬಗ್ಗೆ ಗಮನ ಹರಿಸಬೇಕು.
    ಮತಗಟ್ಟೆಗಳ್ಲಲಿ ಕುಡಿಯುವ ನೀರು, ಗಾಳಿ ಬೆಳಕಿನ ವ್ಯವಸ್ಥೆ, ನೆರಳಿನ ವ್ಯವಸ್ಥೆ ಸೇರಿದಂತೆ ಇನ್ನಿತರ ಮೂಲ ಸೌಲಭ್ಯಗಳ ಬಗ್ಗೆ ಗಮನ ಹರಿಸಿ ಸೂಕ್ತ ಕ್ರಮಕೈಗೊಳ್ಳಬೇಕು. ಮತದಾರರಿಗೆ ಮತದಾರರ ಮಾಹಿತಿ ಚೀಟಿಗಳನ್ನು ತಲುಪಿಸುವ ಕಾರ್ಯವನ್ನು ಚುರುಕುಗೊಳಿಸಬೇಕು. ಮತದಾನದ ದಿನದಂದು ಯಾವುದೇ ಲೋಪದೋಷಗಳಾಗದಂತೆ ನೋಡಿಕೊಳ್ಳಬೇಕು ಎಂದು ಚಂದ್ರಶೇಖರ ನಾಯಕ ಸೂಚಿಸಿದರು.
    ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ಸಹಾಯಕ ಆಯುಕ್ತ ಎಸ್.ಎಸ್.ಸಂಪಗಾವಿ, ತಹಸೀಲ್ದಾರ್ ಸುರೇಶ ವರ್ಮಾ, ನಗರಸಭೆ ಪೌರಾಯುಕ್ತ ಜಿ.ಎನ್.ಚಲಪತಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮಹೇಶ ಪೋತದಾರ ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts