More

    ಚಹಾ ಕುಡಿಯುತ್ತ, ಪತ್ರಿಕೆ ಓದಿದರೇ ಸಮಾಧಾನ

    ಯಾದಗಿರಿ: ಜಾಗತೀಕರಣದ ಇಂದಿನ ಭರಾಟೆಯಲ್ಲಿ ಸಾಮಾಜಿಕ ಜಾಲತಾಣಗಳ ಬರುವ ಸುದ್ದಿಗಳನ್ನು ನಂಬಲು ಸಾಧ್ಯವಿಲ್ಲ. ಆದರೆ, ಸ್ಪಧರ್ಾತ್ಮಕ ದಿನಗಳಲ್ಲಿ ದಿನಪತ್ರಿಕೆಗಳು ಇಂದಿಗೂ ತಮ್ಮ ಮೂಲ ಆಶಯಕ್ಕೆ ಧಕ್ಕೆ ಬರದಂತೆ ಎಚ್ಚರಿಕೆ ವಹಿಸುತ್ತಿವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ ತಿಳಿಸಿದರು.

    ನಗರದ ವೀರಶೈವ ಕಲ್ಯಾಣ ಮಂಪಟದಲ್ಲಿ ಜಿಲ್ಲಾ ಕಾರ್ಯನಿತರ ಪತ್ರಕರ್ತರ ಸಂಘದಿಂದ ಶನಿವಾರ ಆಯೋಜಿಸಿದ್ದ ಜಿಲ್ಲಾ ಮಟ್ಟದ ಪತ್ರಿಕಾ ದಿನ ಹಾಗೂ ಪ್ರಶಸ್ತಿ ವಿತರಣಾ ಸಮಾರಂಭ ಉದ್ಘಾಟಿಸಿ ಮಾತನಾಡಿ, ವಸ್ತುನಿಷ್ಠ ವರದಿ ಮಾಡುವಲ್ಲಿ ಇಂದಗೂ ಪತ್ರಿಕೆಗಳು ತಮ್ಮ ಗುಣಮಟ್ಟ ಕಾಪಾಡಿಕೊಂಡು ಬಂದಿವೆ. ದಿನ ಬೆಳಗಾದರೆ ನಮಗೆ ಚಹಾ ಕುಡಿಯುತ್ತ, ಪತ್ರಿಕೆ ಓದಿದರೇ ಸಮಾಧಾನವಾಗುತ್ತದೆ ಎಂದರು.

    ಜಿಲ್ಲಾಧ್ಯಕ್ಷ ಮಲ್ಲಪ್ಪ ಸಂಕೀನ್ ಮಾತನಾಡಿ, ವಡಗೇರಾ, ಹುಣಸಗಿ ಮತ್ತು ಶಹಾಪುರದಲ್ಲಿ ಪತ್ರಿಕಾ ಭವನ ನಿಮರ್ಾಣ ಮಾಡಲು ಅನುದಾನ ನೀಡಬೇಕು. ಇದಲ್ಲದೇ ಜಿಲ್ಲಾ ಪತ್ರಿಕಾ ಭವನದ ಮೊದಲ ಮಹಡಿಯಲ್ಲಿ 2 ಕೋಣೆ ನಿಮರ್ಾಣಕ್ಕೆ ಅನುದಾನ ಒದಗಿಸುವಂತೆ ಸಚಿವರಿಗೆ ಮನವಿ ಮಾಡಿದರು.

    ಇದೇ ವೇಳೆ ಜಿಲ್ಲಾ ಮಟ್ಟದ ಉತ್ತಮ ವರದಿಗಾರ ಹಾಗೂ ವಾಷರ್ಿಕ ಕ್ರೀಡಾಕೂಟದಲ್ಲಿ ವಿಜೇತ ಪತ್ರಕರ್ತರಿಗೆ ಬಹುಮಾನ ವಿತರಿಸಲಾಯಿತು. ಸಂಘದ ರಾಜ್ಯ ಉಪಾಧ್ಯಕ್ಷ ಭವಾನಿಸಿಂಗ್ ಠಾಕೂರು, ಸಂಘದ ರಾಜ್ಯ ಪರಿಷತ್ ಸದಸ್ಯ ರಾಘವೇಂದ್ರ ಕಾಮನಟಗಿ, ನಗರಸಭೆ ಪೌರಾಯುಕ್ತ ಸಂಗಪ್ಪ ಉಪಾಸೆ, ಕಸಾಪ ಜಿಲ್ಲಾಧ್ಯಕ್ಷ ಡಾ.ಸಿದ್ದಪ್ಪ ಹೊಟ್ಟಿ, ಅಖಿಲ ಭಾರತ ವೀರಶಯವ ಮಹಾಸಭಾ ಜಿಲ್ಲಾಧ್ಯಕ್ಷ ಸೋಮಶೇಖರ ಮಣ್ಣೂರು, ಡಿಸಿಸಿ ಬ್ಯಾಂಕ್ ನಿದರ್ೇಶಕ ಬಾಪುಗೌಡ ಪಾಟೀಲ ಇದ್ದರು. ಡಿ.ಸಿ. ಪಾಟೀಲ್ ಸ್ವಾಗತಿಸಿದರು. ಲಕ್ಷ್ಮೀಕಾಂತ್ ಕುಲಕಣರ್ಿ ನಿರೂಪಿಸಿದರು. ಮಹೇಶ ಕಲಾಲ್ ವಂದಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts