More

    ಚಾ.ನಗರದಲ್ಲಿ ಜು.26ರಂದು ಮಿನಿ ಉದ್ಯೋಗ ಮೇಳ

    ಚಾಮರಾಜನಗರ: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಮಿನಿ ಉದ್ಯೋಗ ಮೇಳವನ್ನು ಜುಲೈ 26ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಆಯೋಜಿಸಲಾಗಿದೆ.

    ಎಸ್.ಎಸ್.ಎಲ್.ಸಿ ಉತ್ತೀರ್ಣ ಹಾಗೂ ಅನುತ್ತೀರ್ಣರಾದವರು, ಪಿಯುಸಿ, ಯಾವುದೇ ಪದವಿ, ಐಟಿಐ, ಡಿಪ್ಲೊಮೊ ವಿದ್ಯಾರ್ಹತೆ ಹೊಂದಿರುವ 18 ರಿಂದ 30ರ ವಯೋಮಿತಿಯ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು.

    ಅಭ್ಯರ್ಥಿಗಳು ಸ್ವ ವಿವರ (ಬಯೋಡೇಟಾ), ಅಂಕಪಟ್ಟಿಗಳ ಜೆರಾಕ್ಸ್ ಪ್ರತಿಗಳೊಂದಿಗೆ ಹಾಜರಾಗಬೇಕು. ಹೆಚ್ಚಿನ ಮಾಹಿತಿಗಾಗಿ ನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಜಿಲ್ಲಾ ಉದ್ಯೋಗ ಅಧಿಕಾರಿಯವರನ್ನು ಸಂಪರ್ಕಿಸಬಹುದು. ಅಲ್ಲದೇ ದೂ.ಸಂ 08226-224430, ಮೊ.ಸಂ 8884865299 ಸಂಪರ್ಕಿಸಿ ಕೂಡ ವಿವರ ಪಡೆಯಬಹುದೆಂದು ಜಿಲ್ಲಾ ಉದ್ಯೋಗಾಧಿಕಾರಿ ಎ. ಮಹಮ್ಮದ್ ಅಕ್ಬರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts