More

    ಚಿಕಿತ್ಸೆಯ ಹೆಚ್ಚುವರಿ ಶುಲ್ಕ ಮರಳಿಸದಿದ್ದರೆ ಕ್ರಮ

    ಬೆಳಗಾವಿ: ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ಕುಂದು ಕೊರತೆ ಸಭೆಯಲ್ಲಿ ಅಧಿಕಾರಿಗಳಿಗೆ ಡಿಸಿ ನಿತೇಶ ಪಾಟೀಲ ನಿರ್ದೇಶನ ನೀಡಿದರು.ವಿಜಯವಾಣಿ ಸುದ್ದಿಜಾಲ ಬೆಳಗಾವಿ
    ಕೋವಿಡ್-19 ಚಿಕಿತ್ಸೆ ಹಾಗೂ ಇತರೆ ಕಾಯಿಲೆಗೆ ಸಂಬಂಧಿಸಿದಂತೆ ಸರ್ಕಾರಿ ಕೋಟಾದಡಿ ಹೆಚ್ಚುವರಿ ಶುಲ್ಕ ಪಡೆದ 7.10 ಲಕ್ಷ ರೂ. ಮರಳಿಸಲು ಆಸ್ಪತ್ರೆಗಳಿಗೆ ಜಿಲ್ಲಾಧಿಕಾರಿ ನಿತೇಶ ಪಾಟೀಲ ಸೂಚನೆ ನೀಡಿದ್ದಾರೆ.

    ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಸಂಯೋಜಿತ ಕಾರ್ಯಕ್ರಮದ ಕುಂದು ಕೊರತೆಗಳ ಪರಿಹಾರ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

    ಸರ್ಕಾರಿ ಕೋಟಾದಡಿ ವಿವಿಧ ಕಾಯಿಲೆಗಳ ಚಿಕಿತ್ಸೆಗಾಗಿ ನಿಯಮ ಮೀರಿ ಶುಲ್ಕ ಪಡೆದಿರುವ ಆಸ್ಪತ್ರೆಗಳು ಕೂಡಲೇ ಹೆಚ್ಚುವರಿ ಹಣ ಪಾವತಿಸಬೇಕು. ಇಲ್ಲದಿದ್ದರೆ ಕಠಿಣ ಕ್ರಮ ಜರುಗಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.

    ಸರ್ಕಾರಿ ಕೋಟಾದಡಿ ಹೆಚ್ಚುವರಿ ಶುಲ್ಕ ಪಾವತಿಸಿಕೊಂಡಿರುವ ಬಗ್ಗೆ ಸುವರ್ಣಾ ಆರೋಗ್ಯ ಟ್ರಸ್ಟ್ ಸಹಾಯವಾಣಿ ಕೇಂದ್ರಕ್ಕೆ 11 ಆಸ್ಪತ್ರೆಗಳ ವಿರುದ್ಧ 18 ಪ್ರಕರಣ ಕುರಿತು ಸಹಾಯವಾಣಿ ಮೂಲಕ ದೂರು ಬಂದಿವೆ. ಹೆಚ್ಚುವರಿಯಾಗಿ 7,10,000 ರೂ. ಶುಲ್ಕವನ್ನು ಪಡೆದುಕೊಂಡಿವೆ. ಅಲ್ಲದೆ, ಹೃದಯ ಶಸ್ತ್ರಚಿಕಿತ್ಸೆಗೆ ಹೆಚ್ಚುವರಿಯಾಗಿ 2,70,192 ರೂ. ಪಡೆದುಕೊಂಡಿವೆ.

    ಕೂಡಲೇ ಸಂಬಂಧಿಸಿದ ಆಸ್ಪತ್ರೆಗಳು ಹೆಚ್ಚುವರಿ ಶುಲ್ಕವನ್ನು ಆಸ್ಪತ್ರೆಗಳಿಂದ ಪಡೆದುಕೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು.
    ಜಿಲ್ಲೆಯಲ್ಲಿ ಯಾವುದೇ ಆಸ್ಪತ್ರೆಯವರು ರೋಗಿ, ಫಲಾನುಭವಿಯಿಂದ ಹೆಚ್ಚುವರಿ ಶುಲ್ಕ ಪಡೆಯುವುದು ಹಾಗೂ ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಯೋಜನೆಯಡಿ ಕೇಸ್‌ಗಳ ದಾಖಲಾತಿ ಮಾಡದೇ ಇರುವುದು ಕಂಡುಬಂದಲ್ಲಿ ಅವರ ಮೇಲೆ ಕೆ.ಪಿ.ಎಂ.ಇ. ಕಾಯ್ದೆ ಅಡಿ ಕ್ರಮಕೈಗೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಿಗೆ ಸೂಚಿಸಿದರು.

    ಜಿಲ್ಲೆಯಲ್ಲಿ ಉತ್ಪತ್ತಿಯಾಗುವ ಜೀವ ವೈದ್ಯಕೀಯ ತ್ಯಾಜ್ಯ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಬೇಕು. ಜಿಲ್ಲೆಯಲ್ಲಿ ಸೇವೆ ನೀಡಲು ಅವಕಾಶ ಕೋರಿರುವ ಜೀವ ವೈದ್ಯಕೀಯ ತ್ಯಾಜ್ಯ ನಿರ್ವಹಣಾ ಘಟಕಗಳ ಸ್ಥಾಪನೆ ಕುರಿತು ಚರ್ಚಿಸಿ ನಿರ್ಣಯ ಕೈಗೊಳ್ಳಬೇಕು. ಈ ವಿಷಯದಲ್ಲಿ ನಿರ್ಲಕ್ಷೃ ಮಾಡದೆ ಕ್ರಮ ವಹಿಸಬೇಕು ಎಂದರು.
    ಜಿಲ್ಲೆಯಲ್ಲಿ ಮೂರು ರಕ್ತ ಭಂಡಾರಗಳಾದ ರೋಟರಿ ರಕ್ತ ಭಂಡಾರ ನಿಪ್ಪಾಣಿ, ರೋಟರಿ ರಕ್ತ ಭಂಡಾರ ಗೋಕಾಕ ಹಾಗೂ ಕೆ.ಎಲ್.ಇ. ಸಂಸ್ಥೆಯ ರಕ್ತ ಭಂಡಾರಗಳಿಗೆ ನಿರಾಪೇಕ್ಷಣಾ ಪತ್ರಗಳನ್ನು ನೀಡಿ. ಜಿಲ್ಲೆಯ ಪ್ರತಿ ತಾಲೂಕಿನಲ್ಲಿ ರಕ್ತ ಕೇಂದ್ರ (ಭಂಡಾರ) ಗಳನ್ನು ಸ್ಥಾಪಿಸಬೇಕು. ಜಿಲ್ಲೆಯ ಎಲ್ಲ 16 ಸಮುದಾಯ ಆರೋಗ್ಯ ಕೇಂದ್ರಗಳಿಗೆ ರಕ್ತ ಸಂಗ್ರಹಣಾ ವ್ಯವಸ್ಥೆಗೆ ಬೇಕಾದ ಅಗತ್ಯತೆಗಳನ್ನು ಮಾಡಿಕೊಳ್ಳಬೇಕು ಎಂದು ಹೇಳಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts