More

     ಚಿಕ್ಕಬಳ್ಳಾಪುರ ಸ್ವಚ್ಛತೆಯಲ್ಲಿ ಕ್ರಾಂತಿಯಾಗಲಿ

     ಚಿಕ್ಕಬಳ್ಳಾಪುರ : ಸ್ವಚ್ಛ ಭಾರತ್ ಅಭಿಯಾನದಲ್ಲಿ ನೂರಕ್ಕೆ ನೂರು ಅನುಷ್ಠಾನದೊಂದಿಗೆ ಕ್ರಾಂತಿಯುಂಟು ಮಾಡಲು ಜಿಲ್ಲಾ ಉಸ್ತುವಾರಿ ಸಚಿವ ಡಾ ಕೆ.ಸುಧಾಕರ್ ಅಧಿಕಾರಿಗಳಿಗೆ ಸೂಚಿಸಿದರು.

    ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ತ್ರೈಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಕೇಂದ್ರದ ಸ್ವಚ್ಛ ಸರ್ವೇ ಕಾರ್ಯದಲ್ಲಿ ನಗರ, ಪಟ್ಟಣ ಪ್ರದೇಶಗಳು ಮೊದಲ 10 ಸ್ಥಾನದೊಳಗಿರಬೇಕು. ಪ್ರತಿ ಮನೆಯಿಂದ ಕಸ ಸಂಗ್ರಹ, ವೈಜ್ಞಾನಿಕ ವಿಲೇವಾರಿ, ವೈಯಕ್ತಿಕ ಮತ್ತು ಸಮುದಾಯ ಶೌಚಗೃಹ ನಿರ್ಮಾಣ ಸೇರಿ ಸ್ವಚ್ಛತಾ ಕಾರ್ಯದಲ್ಲಿ ಮುಂಚೂಣಿಯಲ್ಲಿರಬೇಕು. ಇಲ್ಲದಿದ್ದಲ್ಲಿ ಸ್ಥಳೀಯ ಆಡಳಿತ ಸಂಸ್ಥೆಗಳ ಅಧಿಕಾರಿಗಳು ಹೊಣೆ ಹೊರಬೇಕಾಗುತ್ತದೆ ಎಂದು ಎಚ್ಚರಿಸಿದರು.

    ಜಿಲ್ಲೆಯಲ್ಲಿ 255 ಅಂಬೇಡ್ಕರ್ ಭವನಗಳ ನಿರ್ಮಾಣವಾಗಬೇಕಾಗಿತ್ತು. ಆದರೆ, ಶೇ.50 ಪೂರ್ಣಗೊಂಡಿಲ್ಲ. ಅನುದಾನವನ್ನು ನಿರ್ಮಾಣ ಸಂಸ್ಥೆಗೆ ಹಸ್ತಾಂತರಿಸಿ ಕೈ ಕಟ್ಟಿ ಕೂರಲಾಗಿದೆ ಎಂದು ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಸಿ.ರಾಜಾಕಾಂತ್ ಆರೋಪಿಸಿದರು.

    ಜಿಪಂ ಅಧ್ಯಕ್ಷ ಎಂ.ಬಿ.ಚಿಕ್ಕನರಸಿಂಹಯ್ಯ, ಉಪಾಧ್ಯಕ್ಷೆ ನಿರ್ಮಲಾ ಮುನಿರಾಜು, ಸ್ಥಾಯಿ ಸಮಿತಿ ಅಧ್ಯಕ್ಷ, ಬಂಕ್ ಮುನಿಯಪ್ಪ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್, ಉಪ ವಿಭಾಗಾಧಿಕಾರಿ ಎ.ಎನ್.ರಘುನಂದನ್ ಮತ್ತಿತರರು ಇದ್ದರು.

    ಎರಡು ಪ್ರವಾಸಿ ತಾಣ ಅಭಿವೃದ್ಧಿ : ಜಿಲ್ಲೆಯ 5 ವಿಧಾನಸಭಾ ಕ್ಷೇತ್ರಗಳಲ್ಲಿ ತಲಾ 2 ಪ್ರವಾಸಿ ತಾಣಗಳನ್ನು ವಿಶೇಷ ಅನುದಾನದಲ್ಲಿ ಅಭಿವೃದ್ಧಿಪಡಿಸಲು ಆದ್ಯತೆ ನೀಡಬೇಕಾಗಿದೆ. ವಾರದೊಳಗೆ ಪ್ರವಾಸಿ ತಾಣಗಳ ಪಟ್ಟಿ ನೀಡಿದರೆ ಸರ್ಕಾರದಿಂದ ಅನುದಾನ ತಂದು ಅಭಿವೃದ್ಧಿಪಡಿಸಲಾಗುವುದು. ಆದಷ್ಟು ಬೇಗ ಪ್ರವಾಸೋದ್ಯಮ ಸಚಿವರೊಂದಿಗೆ ಚರ್ಚಿಸಲು ಸಭೆ ನಡೆಸುವುದಾಗಿ ಡಾ.ಕೆ.ಸುಧಾಕರ್ ಭರವಸೆ ನೀಡಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts