More

    ಚಿರತೆ ಸೆರೆಗೆ ಮುಂದಾದ ಅರಣ್ಯ ಇಲಾಖೆ

    ಸಾಗರ: ಶರಾವತಿ ಕಣಿವೆಯ ಭಾರಂಗಿ ಹೋಬಳಿಯ ಅರಳಗೋಡು ಗ್ರಾಪಂ ವ್ಯಾಪ್ತಿಯಲ್ಲಿ ಉಪಟಳ ನೀಡುತ್ತಿರುವ ಚಿರತೆ ಸೆರೆಗೆ ಅರಣ್ಯ ಇಲಾಖೆ ಮುಂದಾಗಿದೆ.

    ಕಳೆದೊಂದು ತಿಂಗಳ ಹಿಂದೆ ಸಸಿಚೌಕ ಎನ್ನುವ ಪ್ರದೇಶದಲ್ಲಿ ಮನೆ ಮುಂದೆ ಕಟ್ಟಿದ್ದ ನಾಯಿಯನ್ನು ಚಿರತೆ ಹೊತ್ತೊಯ್ದಿತ್ತು. 4 ದಿನಗಳ ಹಿಂದೆ ಬಿಲ್ಕಂದೂರಿನಲ್ಲೂ ಸಾಕು ನಾಯಿಯೊಂದನ್ನು ಹೊತ್ತೊಯ್ದಿದೆ. ಎರಡು ದಿನಗಳ ಹಿಂದೆ ಇದೇ ಗ್ರಾಮದ ನಾರಾಯಣಪ್ಪ ಎಂಬುವರ ಕೊಟ್ಟಿಗೆಯಲ್ಲಿದ್ದ ಕರುವನ್ನು ಗಾಯಗೊಳಿಸಿ ಕೊಂದಿತ್ತು.

    ಪ್ರಕರಣಕ್ಕೆ ಸಂಬಂಧಿಸಿ ‘ವಿಜಯವಾಣಿ’ಗೆ ಪ್ರತಿಕ್ರಿಯಿಸಿದ ವಲಯ ಅರಣ್ಯಾಧಿಕಾರಿ ಪ್ರೀತಿ ರಾಮದಾಸ ನಾಯ್ಕ, ಶರಾವತಿ ಕಣಿವೆ ಅಭಯಾರಣ್ಯದಲ್ಲಿ ಹತ್ತು ಕ್ಯಾಮರಾ ಅಳವಡಿಸಲಾಗಿದೆ. ಪ್ರಾಣಿಗಳು ಮತ್ತು ಬೇಟೆಗಾರರ ಚಲನವಲನ ದಾಖಲಾಗುತ್ತಿವೆ. ನಮ್ಮ 15 ಸಿಬ್ಬಂದಿ ತಂಡ ರಚಿಸಿಕೊಂಡು ಚಿರತೆಗಾಗಿ ಹುಡುಕಾಡುತ್ತಿದ್ದಾರೆ ಎಂದು ತಿಳಿಸಿದರು.

    ಬಿಲ್ಕಂದೂರು ಸೇರಿ ಎರಡು ಕಡೆಗಳಲ್ಲಿ ಬೋನು ಇರಿಸಲಾಗಿದೆ. ಚಿರತೆಯಿಂದ ಗಾಯಗೊಂಡು ಸಾವನ್ನಪ್ಪಿದ ಕರುವಿನ ಮಾಲೀಕರಿಗೆ ಅರಣ್ಯ ಇಲಾಖೆಯಿಂದ ಪರಿಹಾರ ಕೊಡಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts