More

    ಚೀನಾ ರೋಗಗಳ ಉಗಮ ಸ್ಥಾನ : ಕಂದಾಯ ಸಚಿವ ಆರ್.ಅಶೋಕ್

    ತುಮಕೂರು: ಚೀನಾ ಒಂದು ರೀತಿ ರೋಗಗಳ ಉಗಮ ಸ್ಥಾನ ಎಂದರೆ ತಪ್ಪಾಗಲಾರದು. ಕರೊನಾ ಯುದ್ಧಕ್ಕಿಂತ ಭೀಕರ ರೋಗವಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದರು.

    ಊರ್ಡಿಗೆರೆ ಗ್ರಾಮ ಪಂಚಾಯಿತಿಯಲ್ಲಿ ವ್ಯಾಪ್ತಿಯಲ್ಲಿ ಭಾನುವಾರ ಸಂಜೆ ಮಾಜಿ ಶಾಸಕ ಬಿ.ಸುರೇಶ್‌ಗೌಡರ ವತಿಯಿಂದ ಬಡ, ನಿರ್ಗತಿಕರಿಗೆ ತರಕಾರಿ, ಪಡಿತರ ವಿತರಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಈ ಹಿಂದೆ ಪ್ಲೇಗ್ ಕಾಣಿಸಿಕೊಂಡು ಜನರನ್ನು ಆತಂಕಕ್ಕೆ ದೂಡಿತ್ತು. ಈಗ ಕರೊನಾ ವೈರಸ್ ಸಾಂಕ್ರಾಮಿಕ ರೋಗದಿಂದ ಇಡೀ ವಿಶ್ವವೇ ತಲ್ಲಣಗೊಂಡಿದೆ. ಈ ಎರಡೂ ಚೀನಾದಿಂದಲೇ ಬಂದಂತಹ ರೋಗಗಳಾಗಿವೆ ಎಂದರು.

    ಅಮೆರಿಕಾದಲ್ಲಿ ಕರೊನಾ ಸೋಂಕಿಗೆ 30 ಸಾವಿರ ಜನ ಸಾವನ್ನಪ್ಪಿದ್ದಾರೆ. ನಮ್ಮ ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮುಂಜಾಗ್ರತೆ ತೆಗೆದುಕೊಂಡು ಲಾಕ್‌ಡೌನ್ ಘೋಷಣೆ ಮಾಡಿದ್ದರಿಂದ ಕರೊನಾ ವೈರಸ್‌ನಿಂದ ಆಗಬಹುದಾದ ದೊಡ್ಡ ಗಂಡಾಂತರ ತಪ್ಪಿಸಿದ್ದಾರೆ. ಕರೊನಾ ವಿರುದ್ಧದ ಸಮರದಲ್ಲಿ ರಾಜ್ಯದಲ್ಲಿಯೂ ಕೂಡ ಸಿಎಂ ಯಡಿಯೂರಪ್ಪ ದಿಟ್ಟ ನಿರ್ಧಾರ ಕೈಗೊಂಡಿದ್ದಾರೆ ಎಂದು ಹೇಳಿದರು.

    ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಗಳು, ಪೊಲೀಸ್ ಇಲಾಖೆ ಅಧಿಕಾರಿಗಳು, ಆರೋಗ್ಯ ಇಲಾಖೆ ಅಧಿಕಾರಿಗಳು ಶ್ರಮ ವಹಿಸಿ ಕೆಲಸ ನಿರ್ವಹಿಸಿದ್ದರಿಂದ ಕರೊನಾ ವೈರಸ್ ನಿಯಂತ್ರಣಕ್ಕೆ ಬಂದಿದೆ. ಇದಕ್ಕೆ ಸಾರ್ವಜನಿಕರೂ ಸಹಕರಿಸಿದ್ದಾರೆ. ಸಾರ್ವಜನಿಕರು ಹೊರಗೆ ಹೋಗದೆ ಮನೆಯಲ್ಲೇ ಇದ್ದು, ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಿ, ಹೊರಗೆ ಬಂದರೆ ಆರೋಗ್ಯಕ್ಕೆ ಹಾನಿಯಾಗುತ್ತದೆ. 60 ವರ್ಷ ಮೇಲ್ಪಟ್ಟ ಹಿರಿಯರ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದರ ಜತೆಗೆ ಮಕ್ಕಳನ್ನು ಬಹಳ ಎಚ್ಚರಿಕೆಯಿಂದ ನೋಡಿಕೊಳ್ಳುವಂತೆ ಸಲಹೆ ನೀಡಿದರು.

    ಕಾರ್ಯಕ್ರಮದಲ್ಲಿ ಮಾಜಿ ಸಚಿವ ಸೊಗಡುಶಿವಣ್ಣ, ಮಾಜಿ ಶಾಸಕ ಬಿ.ಸುರೇಶ್‌ಗೌಡ, ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್‌ಕುಮಾರ್, ಉಪವಿಭಾಗಾಧಿಕಾರಿ ಅಜಯ್, ಗ್ರಾಪಂ ಅಧ್ಯಕ್ಷೆ ತಾರಾದೇವಿ, ಬಿಜೆಪಿ ಮುಖಂಡ ಲಕ್ಷ್ಮೀಶ್, ತಹಸೀಲ್ದಾರ್ ಮೋಹನ್‌ಕುಮಾರ್, ರಂಗನಾಥ್, ಸದಸ್ಯ ಸುಧೀರ್, ತಾಪಂ ಸದಸ್ಯ ಎಸ್.ರವಿ, ಮಾಜಿ ಎಪಿಎಂಸಿ ಅಧ್ಯಕ್ಷ ಓಂ ನಮೋ ನಾರಾಯಣ, ನರಸಿಂಹಮೂರ್ತಿ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts