More

    ಚುನಾವಣಾ ಕಾರ‌್ಯದಲ್ಲಿ ಲೋಪಗಳಾಗಬಾರದು, ಡಿಸಿ ತಾಕೀತು

    ಚಿತ್ರದುರ್ಗ: ಮುಕ್ತ,ನ್ಯಾಯಸಮ್ಮತ ಮತ್ತು ಪಾರದರ್ಶಕವಾಗಿ ಲೋಕಸಭಾ ಚುನಾವಣೆ ನಡೆಸುವ ನಿಟ್ಟಿನಲ್ಲಿ ಯಾವುದೇ ರೀತಿಯ ಲೋಪಗಳಾಗದಂತೆ ಚುನಾವಣಾ ಕಾರ್ಯವನ್ನು ಅತ್ಯಂತ ಜವಾಬ್ದಾರಿಯಿಂದ ನಿರ್ವಹಿಸ ಬೇಕೆಂದು ಜಿಲ್ಲಾಧಿಕಾರಿ,ಜಿಲ್ಲಾ ಚುನಾವಣಾಧಿಕಾರಿ ಟಿ.ವೆಂಕಟೇಶ್ ಮತ ಗಟ್ಟೆ ಅಧಿಕಾರಿಗಳಿಗೆ ಸೂಚಿಸಿದರು.
    ನಗರದ ಸರ್ಕಾರಿ ಕಲಾ ಕಾಲೇಜಿನಲ್ಲಿ ಭಾನುವಾರ ಚುನಾವಣೆ ಸಂಬಂಧ ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಮತಗಟ್ಟೆ ಅಧಿಕಾರಿ ಹಾಗೂ ಸ ಹಾಯಕ ಮತಗಟ್ಟೆ ಅಧಿಕಾರಿಗಳಿಗೆ ಏರ್ಪಡಿಸಿದ್ದ ಚುನಾವಣೆ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು,ತಮಗೆ ವಹಿಸಿದ ಕರ್ತವ್ಯವನ್ನು ಅಚ್ಚುಕಟ್ಟಾಗಿ ಹಾಗೂ ಜವಾಬ್ದಾರಿಯಿಂದ ನಿರ್ವಹಿಸಿದರೆ ಚುನಾವಣೆ ಪ್ರಕ್ರಿಯೆ ಯಶಸ್ಸಿಯಾಗಲಿದೆ.
    ಚುನಾವಣೆ ಕೆಲಸಗಳೆಡೆ ತಮ್ಮಲ್ಲಿ ಏನಾದರೂ ಗೊಂದಲಗಳಿದ್ದರೆ ಅವುಗಳನ್ನು ಕಾರ‌್ಯಾಗಾರದಲ್ಲಿ ಬಗೆಹರಿಸಿಕೊಂಡು ಮತಗಟ್ಟೆಗಳಿಗೆ ತೆರಳುವಂತೆ ಸೂಚಿಸಿದರು. ಸಹಾಯಕ ಚುನಾವಣಾಧಿಕಾರಿ,ಎಡಿಸಿ ಬಿ.ಟಿ.ಕುಮಾರಸ್ವಾಮಿ,ಉಪವಿಭಾಗಾಧಿಕಾರಿ ಎಂ.ಕಾರ್ತಿಕ್, ತಹಸೀಲ್ದಾರ್ ಡಾ.ನಾಗ ವೇಣಿ,ಜಿಲ್ಲಾ ತರಬೇತಿ ನೋಡಲ್ ಅಧಿಕಾರಿ ಎಸ್.ನಾಗಭೂಷಣ್, ನಗರಸಭೆ ಪೌರಾಯುಕ್ತೆ ಎಂ.ರೇಣುಕಾ, ಸೆಕ್ಟರ್ ಅಧಿಕಾರಿಗಳು ಹಾಗೂ ಚುನಾವಣಾ ಸಿಬ್ಬಂದಿ ಇದ್ದರು.
    ಅಂಚೆ ಮತದಾನ ಕೇಂದ್ರ
    ಚಿತ್ರದುರ್ಗ ತಾಲೂಕು ಕಚೇರಿಯಲ್ಲಿ ಸೋಮವಾರ ಅಂಚೆ ಮತದಾನ ಕೇಂದ್ರ ಸ್ಥಾಪಿಸಲಾಗಿದೆ. ಲೋಕಸಭಾ ಚುನಾವಣೆ ಕರ್ತವ್ಯ ನಿರತಮತ ದಾರರು ಏ.19ರಿಂದ 21ರವರೆಗೆ ಬೆಳಗ್ಗೆ 9ರಿಂದ ಸಂಜೆ 5 ಗಂಟೆವೊಳಗೆ ಅಂಚೆಮತದಾನ ಕೇಂದ್ರಕ್ಕೆ ತೆರಳಿ ಮತ ಚಲಾಯಿಸಬಹುದೆಂದು ಡಿಸಿ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts