More

    ಚುನಾವಣೆಯಲ್ಲಿ ಜವಾಬ್ದಾರಿಯುತವಾಗಿ ಕರ್ತವ್ಯ ನಿರ್ವಹಿಸಿ

    ಹುಣಸೂರು: ಚುನಾವಣಾ ಕಾರ್ಯಗಳಲ್ಲಿ ಎಲ್ಲರೂ ಪಾರದರ್ಶಕತೆಯನ್ನು ಕಾಯ್ದುಕೊಳ್ಳುವ ಮೂಲಕ ಜವಾಬ್ದಾರಿಯುತವಾಗಿ ಕರ್ತವ್ಯ ನಿರ್ವಹಿಸಬೇಕು ಎಂದು ತಹಸೀಲ್ದಾರ್ ಡಾ.ಎಸ್.ಯು.ಅಶೋಕ್ ಸೂಚಿಸಿದರು.

    ಗ್ರಾಮ ಪಂಚಾಯಿತಿ ಮಟ್ಟದ ಸಿಬ್ಬಂದಿ ಮತ್ತು ಅಧಿಕಾರಿಗಳಿಗೆ ನಗರದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ಸ್ವೀಪ್ ಸಮಿತಿ ವತಿಯಿಂದ ಆಯೋಜಿಸಿದ್ದ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

    ತಾಲೂಕಿನ 63 ಮತಗಟ್ಟೆಯಲ್ಲಿ ಹೊಸ ಮತದಾರರ ನೋಂದಣಿ ಕಾರ್ಯದಲ್ಲಿ ಲಿಂಗ ತಾರತಮ್ಯದ ಪ್ರಮಾಣ ಅಧಿಕವಾಗಿ ಕಂಡು ಬರುತ್ತಿದೆ. ಇದರ ಕುರಿತು ಮತಗಟ್ಟೆ ಅಧಿಕಾರಿಗಳು ಪರಿಶೀಲಿಸಿ ಮಹಿಳಾ ಮತದಾರರನ್ನು ನೋಂದಾಯಿಸುವತ್ತ ಗಮನಹರಿಸಬೇಕು ಎಂದರು.

    ಕಳೆದ ಚುನಾವಣೆಯಲ್ಲಿ ತಾಲೂಕಿನ ಒಟ್ಟು 27 ಮತಗಟ್ಟೆಯಲ್ಲಿ ಅತಿ ಕಡಿಮೆ ಮತದಾನವಾಗಿದ್ದು, ಅದಕ್ಕೆ ಕಾರಣಗಳನ್ನು ಪತ್ತೆ ಹೆಚ್ಚಿ ಸರಿಪಡಿಸಬೇಕು. ಗ್ರಾಮೀಣ ಭಾಗಗಳಲ್ಲಿ ಮತದಾನದ ಮಹತ್ವದ ಕುರಿತು ಜಾಗೃತಿ ಮೂಡಿಸುವ ಕಾರ್ಯವನ್ನು ಗ್ರಾಪಂಗಳು ಕಡ್ಡಾಯವಾಗಿ ಮಾಡಬೇಕು ಎಂದರು.

    ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಬಿ.ಕೆ.ಮನು ಮಾತನಾಡಿ, ಗ್ರಾಮೀಣ ಭಾಗಗಳಲ್ಲಿ ಮತದಾನ ಶಾಂತಿಯುತ ಮತ್ತು ಶೇಕಡಾವಾರು ಪ್ರಮಾಣ ಹೆಚ್ಚಾಗುವ ನಿಟ್ಟಿನಲ್ಲಿ ಎಲ್ಲರ ಸಹಕಾರ ಅಗತ್ಯ ಎಂದರು.

    ತಾ.ಪಂ.ಸಹಾಯಕ ನಿರ್ದೇಶಕ ಎಚ್.ಡಿ.ಲೋಕೇಶ್, ವ್ಯವಸ್ಥಾಪಕ ರಾಜೇಶ್, ನರೇಗಾ ಸಹಾಯಕ ನಿರ್ದೇಶಕರು, ಪಂಚತಂತ್ರ ಸಹಾಯಕ ನಿರ್ದೇಶಕರು, ಪಿಡಿಒಗಳು ಹಾಜರಿದ್ದರು.

     

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts