More

    ಚುನಾವಣೆಯಲ್ಲಿ ನನ್ನ ಪರ ಕೆಲಸ ಮಾಡುತ್ತಾರೆ

    ಮದ್ದೂರು: ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷದಲ್ಲಿರುವ ಕೆಲವರು ನನ್ನ ಪ್ರಾಡೆಕ್ಟ್‌ಗಳೇ. ಈಗ ಅವರು ತಮ್ಮ ಕೆಲಸ ಕಾರ್ಯಗಳನ್ನು ಮಾಡಿಸಿಕೊಳ್ಳಲು ಅಲ್ಲಿಗೆ ಹೋಗಿದ್ದಾರೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ನನ್ನ ಪರವಾಗಿ ಕೆಲಸ ಮಾಡುತ್ತಾರೆ ಎಂದು ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡ ವಿಶ್ವಾಸ ವ್ಯಕ್ತಪಡಿಸಿದರು.
    ನಾಗಮಂಗಲ ವಿಧಾನಸಭಾ ಕ್ಷೇತ್ರದ ಕೊಪ್ಪ ಹೋಬಳಿಯ ಬಿದರಕೋಟೆ ಗ್ರಾಮದಲ್ಲಿ ಸೋಮವಾರ ಆಯೋಜಿಸಿದ್ದ ಜನಸಂಪರ್ಕ ಸಭೆಯಲ್ಲಿ ಮಾತನಾಡಿದ ಅವರು, ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷದ ಹಲವಾರು ಮುಖಂಡರು ನನ್ನ ಸಂಪರ್ಕದಲ್ಲಿದ್ದಾರೆ. ಈಗ ಬಂದರೆ ಅವರಿಗೆ ತೊಂದರೆಯಾಗುತ್ತದೆ. ಹೀಗಾಗಿ ಚುನಾವಣಾ ಸಂದರ್ಭದಲ್ಲಿ ಬಂದು ನನ್ನ ಪರವಾಗಿ ಕೆಲಸ ಮಾಡುತ್ತಾರೆ. ಇದರಲ್ಲಿ ಯಾವುದೇ ಅನುಮಾನವಿಲ್ಲ ಎಂದರು.
    ಕಳೆದ 10 ವರ್ಷಗಳಿಂದ ನಾಗಮಂಗಲ ವಿಧಾನಸಭಾ ಕ್ಷೇತ್ರದಲ್ಲಿ ನಡೆಯುತ್ತಿರುವಂತ ಭ್ರಷ್ಟಾಚಾರ ರಾಜ್ಯದ ಯಾವ ಕ್ಷೇತ್ರಗಳಲ್ಲೂ ನಡೆಯುತ್ತಿಲ್ಲ. ರಾಜ್ಯ ಸರ್ಕಾರ ಶೇ.40ರಷ್ಟು ಕಮಿಷನ್ ಪಡೆದರೆ, ನಾಗಮಂಗಲ ಕ್ಷೇತ್ರದಲ್ಲಿ ಶೇ.48ರಷ್ಟು ಕಮಿಷನ್ ದಂಧೆ ನಡೆಯುತ್ತಿದೆ. ತಾಲೂಕಿನ ಬಹುತೇಕ ಸರ್ಕಾರಿ ಕಚೇರಿಗಳಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
    ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಈಗಾಗಲೇ ಕ್ಷೇತ್ರ ಪ್ರವಾಸ ಕೈಗೊಂಡಿದ್ದೇನೆ. ನಾನು ಭೇಟಿ ನೀಡುತ್ತಿರುವ ಗ್ರಾಮಗಳಲ್ಲೂ ಉತ್ತಮ ಸ್ಪಂದನೆ ದೊರೆಯುತ್ತಿದೆ. ತಾಲೂಕಿನ ಜನತೆ ಬದಲಾವಣೆ ಬಯಸುತ್ತಿದ್ದಾರೆ ಎಂದು ಹೇಳಿದರು.
    ಬಳ್ಳೆಕೆರೆ, ಚೊಟ್ಟನಹಳ್ಳಿ, ಹುರಗಲವಾಡಿ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಜನ ಸಂಪರ್ಕ ಸಭೆ ನಡೆಸಿದರು. ಮುಖಂಡರಾದ ಚೇತನ್‌ಶಿವರಾಮೇಗೌಡ, ಮಂಜೇಶ್‌ಗೌಡ, ಚಂದ್ರಪ್ಪ, ರಮೇಶ್, ನಾಗಲಿಂಗಯ್ಯ, ಸಿದ್ದಲಿಂಗು, ಕೃಷ್ಣ, ಬೆಟ್ಟೇಗೌಡ, ಪಾಪಣ್ಣ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts