More

    ಚುನಾವಣೆ ಅಕ್ರಮ, ಆದೇಶ ಕಾಯ್ದಿರಿಸಿದ ಸುಪ್ರೀಂ : ಮುನಿರತ್ನ ವಿರುದ್ಧ ತುಳಸಿ ಮುನಿರಾಜು ಸಲ್ಲಿಸಿದ್ದ ಮೇಲ್ಮನವಿ

    ನವದೆಹಲಿ: ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಮುನಿರತ್ನ ಚುನಾವಣಾ ಅಕ್ರಮ ಎಸಗಿ ಗೆಲುವು ಸಾಧಿಸಿದ್ದಾರೆ. ಅದಕ್ಕೆ ಸಂಬಂಧಿಸಿದ ಅರ್ಜಿಯನ್ನು ರಾಜ್ಯ ಹೈಕೋರ್ಟ್ ಮೊದಲು ಇತ್ಯರ್ಥಪಡಿಸಲಿ. ಅಲ್ಲಿಯವರೆಗೆ ಚುನಾವಣೆ ನಡೆಸುವುದು ಬೇಡ ಎಂದು ಬಿಜೆಪಿ ಮುಖಂಡ ತುಳಸಿ ಮುನಿರಾಜುಗೌಡ ಸುಪ್ರೀಂಕೋರ್ಟ್​ಗೆ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ಕುರಿತ ಅದೇಶವನ್ನು ನ್ಯಾಯಾಲಯ ಕಾಯ್ದಿರಿಸಿದ್ದು, ಒಂದೆರಡು ದಿನಗಳಲ್ಲಿ ಆದೇಶ ಹೊರಬೀಳುವ ಸಾಧ್ಯತೆಯಿದೆ.

    ಚುನಾವಣೆ ಸಂದರ್ಭದಲ್ಲಿ ಆರ್.ಆರ್. ನಗರದಲ್ಲಿ ನಕಲಿ ವೋಟರ್ ಐಡಿಗಳು ಪತ್ತೆಯಾಗಿದ್ದವು ಮತ್ತು ಮುನಿರತ್ನ ಮೇಲೂ ಅಕ್ರಮದ ಆರೋಪವಿದೆ. ಹೀಗಾಗಿ ಈ ಕ್ಷೇತ್ರದ ಚುನಾವಣೆಯಲ್ಲಿ ಅತಿ ಹೆಚ್ಚು ಮತ ಪಡೆದ 2ನೇ ಅಭ್ಯರ್ಥಿಯಾಗಿರುವುದರಿಂದ ತಮ್ಮನ್ನು ವಿಜಯಿ ಎಂದು ಘೊಷಿಸಬೇಕು ಎಂದು ತುಳಸಿ ಮುನಿರಾಜು ಪರ ವಕೀಲರು ಸುಪ್ರೀಂಕೋರ್ಟ್ ಮುಂದೆ ಮನವಿ ಮಾಡಿಕೊಂಡಿದ್ದರು.

    ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯನಾಯಮೂರ್ತಿ ನೇತೃತ್ವದ ತ್ರಿಸದಸ್ಯ ಪೀಠ, ಪತ್ತೆಯಾಗಿರುವ ನಕಲಿ ಮತ ಗುರುತಿನ ಚೀಟಿಗಳಿಗೂ, ಗೆದ್ದ ಅಭ್ಯರ್ಥಿಗೆ ಮತ್ತು ನಿಮಗೆ ಸಿಕ್ಕ ಮತಗಳಿಗೆ ಸಾಕಷ್ಟು ಅಂತರವಿದೆ. ಅದಲ್ಲದೆ ಆ ಮತಗಳು ನಿಮಗೆ ಸಿಗುತ್ತಿದ್ದರೂ ಗೆಲ್ಲುವ ಸಾಧ್ಯತೆ ಇರುತ್ತಿತ್ತೆ ಎಂಬ ಪ್ರಶ್ನೆ ಉದ್ಭವಿಸುತ್ತದೆ. ಏಕೆಂದರೆ, ನಿಮ್ಮಂತೆ ಒಟ್ಟು 14 ಮಂದಿ ಕಣದಲ್ಲಿದ್ದರಲ್ಲವೇ ಎಂದು ಕೋರ್ಟ್ ವಿಚಾರಣೆ ವೇಳೆ ಪ್ರಶ್ನಿಸಿತು. ಅದೇನೇ ಇರಲಿ, ನಾವು ಈ ಅರ್ಜಿ ಬಗ್ಗೆ ನಮ್ಮ ಆದೇಶ ಪ್ರಕಟಿಸುತ್ತೇವೆ ಎಂದು ಅರ್ಜಿದಾರರಿಗೆ ತಿಳಿಸಿದ ನ್ಯಾಯಪೀಠ, ಪ್ರಕಾರಣದಲ್ಲಿ ಕೇಂದ್ರ ಚುನಾವಣಾ ಆಯೋಗ ಅಥವಾ ಪ್ರತಿವಾದಿಗಳ ಅಭಿಪ್ರಾಯ ಕೇಳಲು ಹೋಗಲಿಲ್ಲ.

    ಬಿಹಾರ ಚುನಾವಣೆ: 121 ಸ್ಥಾನಗಳಲ್ಲೂ ಬಿಜೆಪಿ ಸ್ಪರ್ಧೆ- ಮತ್ತೆ ಪಾಲು ಇಲ್ವೇ ಇಲ್ವಂತೆ- ಇನ್ಸಾನ್​ ಪಾರ್ಟಿಗೆ ನಿರಾಸೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts