More

    ಚುನಾವಣೆ ಘೊಷಣೆಯಾದ ಮೇಲೆ ಮೊದಲ ಪಟ್ಟಿ

    ಹುಬ್ಬಳ್ಳಿ: ಕರ್ನಾಟಕ ವಿಧಾನಸಭೆಗೆ ಚುನಾವಣೆ ಘೊಷಣೆಯಾದ ಬಳಿಕವೇ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಆಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

    ಹುಬ್ಬಳ್ಳಿಯಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆ ಪ್ರಕ್ರಿಯೆಯಿಂದ ಮಹದಾಯಿ ಯೋಜನೆ ಕಾಮಗಾರಿಗೆ ತೊಂದರೆ ಆಗುವುದಿಲ್ಲ. ನೀತಿ ಸಂಹಿತೆ ಜಾರಿಯಾದರೂ ಟೆಂಡರ್ ಪ್ರಕ್ರಿಯೆ ನಡೆಯಲಿದೆ. ಅಷ್ಟರೊಳಗೆ ಅರಣ್ಯ ಮತ್ತು ಪರಿಸರ ಸಂಬಂಧಿ ಅನುಮೋದನೆ ಸಿಗುವ ವಿಶ್ವಾಸವಿದೆ ಎಂದರು.

    ಒಳ ಮೀಸಲಾತಿ ವಿಚಾರ ಕಳೆದ 30 ವರ್ಷಗಳಿಂದ ಬಾಕಿ ಇತ್ತು. ಕಾಂಗ್ರೆಸ್ಸಿನವರು ಎಸ್​ಸಿ ಎಸ್​ಟಿ ಸಮುದಾಯವನ್ನು ಯಾಮಾರಿಸಿಕೊಂಡು ಬಂದಿದ್ದರು. ನಾವು ಇದರ ಬಗ್ಗೆ ಅಧ್ಯಯನ ಮಾಡಿ ಸಚಿವ ಸಂಪುಟ ಉಪ ಸಮಿತಿ ರಚಿಸಿ ಕಾನೂನು ಪ್ರಕಾರ ಒಳ ಮೀಸಲಾತಿ ಜಾರಿ ಮಾಡಿದ್ದೇವೆ. ಇದರಿಂದ ಹತಾಶರಾಗಿ ಕಾಂಗ್ರೆಸ್ಸಿಗರು ಏನೇನೋ ಮಾತನಾಡುತ್ತಿದ್ದಾರೆ ಎಂದು ಹೇಳಿದರು.

    ಮುಸ್ಲಿಂರನ್ನು ಇಡಬ್ಲ್ಯುಎಸ್ (ಆರ್ಥಿಕವಾಗಿ ಹಿಂದುಳಿದ ವರ್ಗ) ಗೆ ಸೇರ್ಪಡೆ ಮಾಡಿದರೆ ಹೇಗೆ ಅನ್ಯಾಯ ಆಗುತ್ತೆ? ಅಲ್ಪಸಂಖ್ಯಾತರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ನಿರ್ಧಾರ ಕೈಗೊಂಡಿದ್ದೇವೆ. ಮೊದಲು ಮುಸ್ಲಿಂರಿಗೆ ಶೇ. 4ರಷ್ಟು ಮೀಸಲಾತಿ ಇತ್ತು. ಈಗ ಶೇ. 10ರಷ್ಟು ಮೀಸಲಾತಿ ಇರುವ ಕಡೆ ಸೇರಿಸಿದ್ದೇವೆ ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts