More

    ಚುನಾವಣೆ ನಡೆಸಲು ಬಿಡಲ್ಲ

    ಮುಂಡರಗಿ: ಗುಮ್ಮಗೋಳ ಗ್ರಾಮಸ್ಥರು ಗ್ರಾಪಂ ಚುನಾವಣೆ ಬಹಿಷ್ಕರಿಸಲು ನಿರ್ಧರಿಸಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳು ಗ್ರಾಮಸ್ಥರ ಜತೆ ಮಾತುಕತೆ ನಡೆಸಲು ಶನಿವಾರ ಮುಂದಾಗಿದ್ದರು. ಆದರೆ, ಗ್ರಾಮಸ್ಥರು ತಮ್ಮ ವಿವಿಧ ಬೇಡಿಕೆ ಈಡೇರಿಸುವವರೆಗೂ ಚುನಾವಣೆ ನಡೆಸಲು ಬಿಡುವುದಿಲ್ಲ ಎಂದು ಪಟ್ಟು ಹಿಡಿದರು.

    ತಹಸೀಲ್ದಾರ್ ಆಶಪ್ಪ ಪೂಜಾರಿ, ತಾಪಂ ಇಒ ಸಂತೋಷ ಪಾಟೀಲ, ನೀರಾವರಿ ಇಲಾಖೆ ಪುನರ್ವಸತಿ ಪುನರ್ ನಿರ್ಮಾಣ ವಿಭಾಗದ ಎಇಇ ವಿನಯ ಬಿ.ಎಂ. ಸೇರಿ ವಿವಿಧ ಇಲಾಖೆಗಳ ಅಧಿಕಾರಿಗಳು, ಗುಮ್ಮಗೋಳ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಗ್ರಾಮಸ್ಥರ ಮನವೊಲಿಸಲು ಯತ್ನಿಸಿದರು.

    ಶಿಂಗಟಾಲೂರ ಏತ ನೀರಾವರಿ ಬ್ಯಾರೇಜ್ ಮುಳುಗಡೆ ಪ್ರದೇಶದಲ್ಲಿರುವ ಗ್ರಾಮಕ್ಕೆ ಕಲ್ಪಿಸಿರುವ ಪುನರ್ವಸತಿ ಗ್ರಾಮದಲ್ಲಿ ಮೂಲಸೌಕರ್ಯ ಕಲ್ಪಿಸಬೇಕು. ಗ್ರಾಮಸ್ಥರಿಗೆ ಸಮರ್ಪಕವಾಗಿ ಮನೆ ಹಂಚಿಕೆ ಮಾಡಬೇಕು. ಅಲ್ಲಿಯವರೆಗೆ ಈಗಿರುವ ಗ್ರಾಮದಲ್ಲಿ ಮೂಲಸೌಕರ್ಯ ಒದಗಿಸುವುದು ಸೇರಿ ವಿವಿಧ ಬೇಡಿಕೆ ಈಡೇರಿಸಬೇಕು. ಅಲ್ಲಿಯವರೆಗೂ ಗ್ರಾಪಂ ಸೇರಿದಂತೆ ಮುಂಬರುವ ಎಲ್ಲ ಚುನಾವಣೆಗಳನ್ನು ಬಹಿಷ್ಕರಿಸಲಾಗುವುದು ಎಂದು ಗ್ರಾಮಸ್ಥರು ತಿಳಿಸಿದರು.

    ಈ ಕುರಿತು ಪ್ರತಿಕ್ರಿಯಿಸಿದ ತಹಸೀಲ್ದಾರ್ ಆಶಪ್ಪ ಪೂಜಾರಿ ಅವರು, ಚುನಾವಣೆ ಬಹಿಷ್ಕರಿಸುವುದು ಸರಿಯಲ್ಲ. ಪ್ರಜಾಪ್ರಭುತ್ವದ ಪ್ರಕ್ರಿಯೆಯಲ್ಲಿ ಎಲ್ಲರೂ ಭಾಗವಹಿಸಬೇಕು ಎಂದು ಮನವಿ ಮಾಡಿಕೊಂಡರು.

    ಹಲವು ವರ್ಷಗಳಿಂದ ಸಮಸ್ಯೆಗಳನ್ನು ಹೇಳಿಕೊಂಡು ಬಂದರೂ ಎಲ್ಲ ಜನಪ್ರತಿನಿಧಿಗಳು, ಅಧಿಕಾರಿಗಳು ಸ್ಪಂದಿಸಿಲ್ಲ. ಬೇಡಿಕೆ ಈಡೇರಿಸುವವರೆಗೂ ಚುನಾವಣೆಗಳನ್ನು ಬಹಿಷ್ಕರಿಸುತ್ತೇವೆ ಎಂದು ಗ್ರಾಮಸ್ಥರು ಪಟ್ಟು ಮುಂದುವರಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts