More

    ಚುನಾವಣೆ ಬಹಿಷ್ಕರಿಸಲು ನೇರಳೆ ಗ್ರಾಮಸ್ಥರ ತೀರ್ಮಾನ

    ಸೋಮವಾರಪೇಟೆ: ಮೀಸಲು ಅರಣ್ಯದಂಚಿನ ನೇರಳೆ ಗ್ರಾಮಕ್ಕೆ ಸರ್ಕಾರ ಮೂಲಸೌಕರ್ಯ ಕಲ್ಪಿಸಿಲ್ಲ ಎಂದು ಆರೋಪಿಸಿ ಮುಂಬರುವ ವಿಧಾನಸಭಾ ಚುನಾವಣೆ ಬಹಿಷ್ಕರಿಸಲು ಗ್ರಾಮಸ್ಥರು ತೀರ್ಮಾನಿಸಿದ್ದಾರೆ.
    ಗ್ರಾಮದ ಪ್ರವೇಶ ದ್ವಾರದಲ್ಲೇ ಚುನಾವಣೆ ಬಹಿಷ್ಕಾರದ ಫ್ಲೆಕ್ಸ್ ಅಳವಡಿಸಿದ್ದಾರೆ. ನೇರಳೆ ಗ್ರಾಮದಲ್ಲಿ 30 ಕುಟುಂಬಗಳು ವಾಸಿಸುತ್ತಿವೆ. ಕಳೆದ 20 ವರ್ಷಗಳಿಂದ ಗ್ರಾಮಕ್ಕೆ ಮೂಲಸೌಕರ್ಯ ಕಲ್ಪಿಸದೆ ಅನ್ಯಾಯ ಮಾಡಲಾಗಿದೆ. ಬಹುತೇಕ ಕುಟುಂಬಗಳು ಕೂಲಿ ಕೆಲಸ ಮಾಡಿ ಬದುಕುವಂತಹ ಪರಿಸ್ಥಿತಿ ಇದೆ. ಕೃಷಿ ಫಸಲನ್ನು ಕಾಡಾನೆ ತಿಂದು ಉಳಿಸಿದ ಫಸಲನ್ನು ತೆಗೆದುಕೊಳ್ಳವಂತ ಪರಿಸ್ಥಿತಿ ಇದೆ ಎಂದು ಗ್ರಾಮಸ್ಥರು ನೀಡಿರುವ ಪತ್ರಿಕಾ ಹೇಳಿಕೆಯಲ್ಲಿ ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.
    ಕಾಡಂಚಿನಲ್ಲಿ ಸೋಲಾರ್ ಬೇಲಿ ಅಳವಡಿಸಿದ್ದರೂ ನಿರ್ವಹಣೆಯಿಲ್ಲದೆ ಪಾಳು ಬಿದ್ದಿದೆ. ಕಾಡಾನೆ ನಿಯಂತ್ರಣಕ್ಕೆ ಶಾಶ್ವತ ಪರಿಹಾರ ಕಲ್ಪಿಸಿಲ್ಲ ಎಂದು ಗ್ರಾಮಾಭಿವೃದ್ಧಿ ಮಂಡಳಿ ಅಧ್ಯಕ್ಷ ಉಲ್ಲಾಸ ದೂರಿದ್ದಾರೆ.
    ಗ್ರಾಮದ ರಸ್ತೆ ಹಾಳಾಗಿದ್ದು, ಜನಪ್ರತಿನಿಧಿಗಳಿಗೆ ಎಷ್ಟೇ ಮನವಿ ಮಾಡಿದರೂ ಅನುದಾನ ಕಲ್ಪಿಸಿಲ್ಲ. ಭರವಸೆ ಕೇಳಿ ಕೇಳಿ ಸಾಕಾಗಿದೆ. ಈ ಕಾರಣದಿಂದ ಚುನಾವಣೆಯ ಬಹಿಷ್ಕಾರ ತೀರ್ಮಾನ ತೆಗೆದುಕೊಂಡಿದ್ದೇವೆ ಎಂದು ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts