More

    ಚುನಾವಣೆ ಸಿದ್ಧತೆ ಖುದ್ದು ಪರಿಶೀಲಿಸಿ

    ಚಿತ್ರದುರ್ಗ: ಶೀಘ್ರದಲ್ಲೇ ಲೋಕಸಭೆ ಚುನಾವಣೆ ದಿನಾಂಕ ಘೋಷಣೆಯಾಗಲಿದ್ದು, ವೇಳಾಪಟ್ಟಿ ಪ್ರಕಟವಾದ ತಕ್ಷಣದಿಂದ ನೀತಿಸಂಹಿತೆ ಜಾರಿಗೆ ಬರಲಿದೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹೇಳಿದರು.
    ಡಿಸಿ ಕಚೇರಿಯಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ತಹಸೀಲ್ದಾರ್‌ಗಳ ಸಭೆಯಲ್ಲಿ ಮಾತನಾಡಿ, ಚುನಾವಣೆಗೆ ಕೈಗೊಂಡಿರುವ ಸಿದ್ಧತೆಗಳನ್ನು ಖುದ್ದು ಪರಿಶೀಲಿಸುವಂತೆ ತಹಸೀಲ್ದಾರ್‌ಗಳಿಗೆ ಸೂಚಿಸಿದರು.
    ಮುಕ್ತ ಹಾಗೂ ನ್ಯಾಯ ಸಮ್ಮತ ಚುನಾವಣೆ ನಡೆಸುವ ನಿಟ್ಟಿನಲ್ಲಿ ತಹಸೀಲ್ದಾರ್‌ಗಳ ಪಾತ್ರ ಹಿರಿದಾಗಿದೆ. ಮಾದರಿ ನೀತಿ ಸಂಹಿತೆ ಪಾಲನೆ ನಿಟ್ಟಿನಲ್ಲೂ ತಮ್ಮ ಜವಾಬ್ದಾರಿ ಅಧಿಕವಿದೆ ಎಂದರು.
    ನೀತಿ ಸಂಹಿತೆ ಜಾರಿಯಾದ ತಕ್ಷಣದಿಂದ 24 ಗಂಟೆಯೊಳಗೆ ಎಲ್ಲ ಫ್ಲೆಕ್ಸ್‌ಗಳು, ಸರ್ಕಾರಿ ಜಾಹೀರಾತುಗಳನ್ನು ತೆರವುಗೊಳಿಸಬೇಕು.ಗೋಡೆ ಬರಹಗಳನ್ನು ಅಳಿಸಬೇಕು ಎಂದು ಸೂಚಿಸಿದರು.
    ಮತಗಟ್ಟೆಗಳಿಗೆ ತಹಸೀಲ್ದಾರ್‌ಗಳು ಭೇಟಿ ಕಡ್ಡಾಯ. ರ‌್ಯಾಂಪ್ ಮತ್ತಿತರ ಮೂಲ ಸೌಕರ್ಯಗಳನ್ನು ಖಚಿತಪಡಿಸಿಕೊಂಡು ವರದಿ ಸಲ್ಲಿಸಬೇಕು ಎಂದು ಹೇಳಿದರು.
    ಮೊಳಕಾಲ್ಮೂರು, ಚಳ್ಳಕೆರೆ, ಹಿರಿಯೂರು ತಾಲೂಕುಗಳ ಕೆಲವು ಮತಗಟ್ಟೆಗಳ ವ್ಯಾಪ್ತಿ ನೆಟ್‌ವರ್ಕ್ ತೊಂದರೆ ಇದ್ದು, ಈ ನಿಟ್ಟಿನಲ್ಲಿ ಟೆಲಿಕಾಂ ಕಂಪನಿ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿ ನೆಟ್‌ವರ್ಕ್ ಸಮರ್ಪಕಗೊಳಿಸಲು ಸೂಚಿಸಲಾಗಿತ್ತು. ಇದನ್ನು ಪರಿಶೀಲಿಸಿ ವರದಿ ಕೊಡಬೇಕೆಂದು ಸೂಚಿಸಿದ ಜಿಲ್ಲಾಧಿಕಾರಿ, ಚುನಾವಣೆ ಕರ್ತವ್ಯಕ್ಕೆ ಅಧಿಕಾರಿ, ಸಿಬ್ಬಂದಿ ನೇಮಕ ಪ್ರಕ್ರಿಕೆಯ ಅಂತಿಮ ಹಂತದಲ್ಲಿದೆ ಎಂದರು.
    ಎಡಿಸಿ ಬಿ.ಟಿ.ಕುಮಾರಸ್ವಾಮಿ ಮಾತನಾಡಿ, ಚುನಾವಣಾ ಅಕ್ರಮ ಚಟುವಟಿಕೆಗಳ ತಡೆಗಾಗಿ ಚೆಕ್‌ಪೋಸ್ಟ್ ಸ್ಥಾಪಿಸುವ ಸ್ಥಳಗಳನ್ನು ಗುರುತಿಸಲಾಗಿದೆ. ನೀತಿ ಸಂಹಿತೆ ಜಾರಿಯಾದ ಕೂಡಲೇ ಚೆಕ್‌ಪೋಸ್ಟ್ ಗಳು ಕಾರ್ಯಾರಂಭ ಮಾಡಬೇಕಾಗುತ್ತದೆ. ಹೀಗಾಗಿ ತಹಸಿಲ್ದಾರ್‌ಗಳು ಚೆಕ್‌ಪೋಸ್ಟ್ ಸ್ಥಾಪಿಸುವ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲಿಸಬೇಕು ಎಂದು ತಿಳಿಸಿದರು.
    ಉಪವಿಭಾಗಾಧಿಕಾರಿ ಎಂ.ಕಾರ್ತಿಕ್, ಜಿಲ್ಲಾ ಎನ್‌ಐಸಿ ಅಧಿಕಾರಿ ಕೆ.ಶಾಸ್ತ್ರಿ ಮತ್ತಿತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts