More

    ಚೆಕ್‌ಪೋಸ್ಟ್‌ನಲ್ಲಿ ಮುಲಾಜಿಲ್ಲದೆ ವಾಹನ ಪರಿಶೀಲಿಸಿ

    ಮೋರಟಗಿ: ಈ ಭಾಗದಲ್ಲಿ ಸಂಚರಿಸುವ ಎಲ್ಲ ವಾಹನಗಳನ್ನು ಮುಲಾಜಿಲ್ಲದೆ ಪರಿಶೀಲಿಸಿ ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಹೇಳಿದರು.
    ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಗ್ರಾಮದ ಬಳಿ ಗಡಿಭಾಗದಲ್ಲಿ ನಿರ್ಮಿಸಲಾದ ಚೆಕ್‌ಪೋಸ್ಟ್‌ಗೆ ಗುರುವಾರ ಭೇಟಿ ನೀಡಿ ದಾಖಲೆ ಪರಿಶೀಲಿಸಿ ಅವರು ಮಾತನಾಡಿದರು.

    ಜಿಲ್ಲೆಯ ಗಡಿ ಭಾಗದಲ್ಲಿ ಕಟ್ಟಕಡೆಯ ಚೆಕ್‌ಪೋಸ್ಟ್ ಇದಾಗಿದೆ. ಸಿಬ್ಬಂದಿ ಕಟ್ಟೆಚ್ಚರ ವಹಿಸಿ ವಾಹನಗಳನ್ನು ಪರಿಶೀಲಿಸಬೇಕು. ಚುನಾವಣೆ ಸಮೀಪಿಸಿದಾಗ ದಾಖಲೆ ರಹಿತ ಹಣ, ಮದ್ಯ ಮತ್ತಿತರ ವಸ್ತುಗಳ ಸಾಗಣೆ ಹೆಚ್ಚಾಗುವ ಸಾಧ್ಯತೆಗಳಿರುತ್ತವೆ. ಚಾಲಕರು ನೆಪ ಹೇಳಿ ಅಥವಾ ದೊಡ್ಡ ದೊಡ್ಡ ವ್ಯಕ್ತಿಗಳ ಹೆಸರು ಹೇಳಿ ಪಾರಾಗಲು ಯತ್ನಿಸುತ್ತಾರೆ.

    ರಾತ್ರಿ ವೇಳೆ ಸಿಬ್ಬಂದಿ ಎಚ್ಚರಿಕೆಯಿಂದ ಇರಬೇಕು. ಪ್ರತಿ ವಾಹನದ ನಂಬರ್ ಪ್ಲೇಟ್ ಪರಿಶೀಲಿಸಿ, ವಾಹನ ಎಲ್ಲಿಂದ ಎಲ್ಲಿಗೆ ಹೋಗುತ್ತಿದೆ ಎಂಬುದನ್ನು ಕಡ್ಡಾಯವಾಗಿ ಬರೆದುಕೊಳ್ಳಬೇಕು. ಕರ್ತವ್ಯದಲ್ಲಿ ಲೋಪ ಕಂಡು ಬಂದರೆ ಕ್ರಮ ಜರುಗಿಸುವುದು ಅನಿವಾರ್ಯವಾಗುತ್ತದೆ. ದಾಖಲೆ ಇಲ್ಲದ ಯಾವುದೇ ಬೆಲೆ ಬಾಳುವ ವಸ್ತು ಸಿಕ್ಕರೂ ಕೂಡಲೇ ಮೇಲಧಿಕಾರಿಗಳ ಗಮನಕ್ಕೆ ತಂದು ಮುಂದಿನ ಕ್ರಮ ಕೈಗೊಳ್ಳಬೇಕು ಎಂದು ಚೆಕ್ ಪೋಸ್ಟ್ ಅಧಿಕಾರಿಗಳಿಗೆ ಸೂಚಿಸಿದರು.

    ಚೆಕ್‌ಪೋಸ್ಟ್‌ಗಳಲ್ಲಿ ಅಳವಡಿಸಲಾದ ಸಿಸಿ ಟಿವಿ ಕ್ಯಾಮರಾಗಳ ಕಾರ್ಯವೈಖರಿ ಹಾಗೂ ಸಿಬ್ಬಂದಿ ಮೂಲ ಸೌಕರ್ಯ ಪರಿಶೀಲಿಸಿದರು. ಪೊಲೀಸ್ ವರಿಷ್ಠಾಧಿಕಾರಿ ಎಸ್‌ಪಿ ಋಷಿಕೇಶ ಸೋನಾವಣೆ, ಡಿವೈಎಸ್ಪಿ ಎಚ್.ಜಗದೀಶ, ಚುನಾವಣೆ ಅಧಿಕಾರಿ ವಿನಯಕುಮಾರ ಪಾಟೀಲ, ಸಿಂದಗಿ ತಹಸೀಲ್ದಾರ್ ಪ್ರದೀಪಕುಮಾರ ಹಿರೇಮಠ, ಆಲಮೇಲ ತಹಸೀಲ್ದಾರ್ ಮಹಾದೇವ ಸಣಮುರಿ, ಸಿಪಿಐ ನಾನಾಗೌಡ ಪೊಲೀಸ್ ಪಾಟೀಲ, ಕಂದಾಯ ನಿರೀಕ್ಷಕ ಆರ್.ಐ.ಮಕಾನದಾರ, ಗ್ರಾಮ ಲೆಕ್ಕಾಧಿಕಾರಿ ಎಂ.ಎಸ್.ಸಾಳುಂಕೆ, ಪಿಡಿಒ ಸೈನಸಾಬ ಸಿಂದಗಿ, ವಿಶ್ವನಾಥ ವಾಲಿಕಾರ, ದವಲತ್ರಾಯ ರಮಗಾ, ಪೊಲೀಸ್ ಸಿಬ್ಬಂದಿ ನಿಂಗಣ್ಣ ಪೂಜಾರಿ, ಭೀಮು ಲಮಾಣಿ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts