More

    ಚೇತನ ಬಿಜಿನೆಸ್ ಸ್ಕೂಲ್​ನಲ್ಲಿ ರಾಷ್ಟ್ರೀಯ ಸಮ್ಮೇಳನ

    ಹುಬ್ಬಳ್ಳಿ: ನಗರದ ಚೇತನ ಬಿಜಿನೆಸ್ ಸ್ಕೂಲ್​ನಲ್ಲಿ ಶನಿವಾರ ಆಯೋಜಿಸಿದ್ದ ರಾಷ್ಟ್ರೀಯ ಸಮ್ಮೇಳನದಲ್ಲಿ ಮಾರ್ಕೆಟಿಂಗ್, ಹಣಕಾಸು ಹಾಗೂ ಮಾನವ ಸಂಪನ್ಮೂಲ ವಿಭಾಗಗಳಲ್ಲಿ 60ಕ್ಕೂ ಹೆಚ್ಚು ಪ್ರಬಂಧಗಳು ಮಂಡನೆಯಾದವು. ಮಹಾರಾಷ್ಟ್ರ, ಗೋವಾ, ಪಂಜಾಬ್, ಆಂಧ್ರ ಹಾಗೂ ಕರ್ನಾಟಕದ ಉದ್ಯಮಿ ಪ್ರಬಂಧಗಳನ್ನು ಮಂಡಿಸಿದರು.

    ಆನ್​ಲೈನ್ ಮತ್ತು ಆಫ್ ಲೈನ್ ಮೂಲಕ ಪ್ರಬಂಧ ಮಂಡಿಸುವ ವ್ಯವಸ್ಥೆ ಮಾಡಲಾಗಿತ್ತು. ಕರ್ನಾಟಕ ಉನ್ನತ ಶಿಕ್ಷಣ ಅಕಾಡೆಮಿ ಅಧ್ಯಕ್ಷ ಡಾ.ಎಸ್. ಎಂ. ಶಿವಪ್ರಸಾದ ಸಮ್ಮೇಳನಕ್ಕೆ ಚಾಲನೆ ನೀಡಿದರು. ಅಹಮದಾಬಾದ್​ನ ಇಂಡಿಯನ್ ಇನ್​ಸ್ಟಿಟ್ಯೂಟ್​ನ ನಿವೃತ್ತ ಪ್ರಾಧ್ಯಾಪಕ ಡಾ. ಮುಕುಂದ ದೀಕ್ಷಿತ ಮುಖ್ಯ ಭಾಷಣ ಮಾಡಿದರು.

    ಸೇರಮ್ ಇನ್​ಸ್ಟಿಟ್ಯೂಟ್ ಆಫ್ ಇಂಡಿಯಾ ಪ್ರೖೆವೇಟ್ ಲಿಮಿಟೆಡ್ ನಿರ್ದೇಶಕ ಡಾ. ರವಿ ಶಾಕರ್ಕರ್, ಕರ್ನಾಟಕ ಗಾಂಧಿ ಸ್ಮಾರಕ ನಿಧಿಯ ಅಧ್ಯಕ್ಷ ಡಾ. ವೋಡಿ ಪಿ. ಕೃಷ್ಣ ಪಾಲ್ಗೊಂಡಿದ್ದರು. ಚೇತನ ಬಿಸಿನೆಸ್ ಸ್ಕೂಲ್ ನಿರ್ದೇಶಕ ಡಾ. ವಿ.ಎಂ. ಕೊರವಿ ಅಧ್ಯಕ್ಷತೆ ವಹಿಸಿದ್ದರು. ಸಮಾರೋಪ ಸಮಾರಂಭದಲ್ಲಿ ಕೌಸಾಳಿ ಇನ್​ಸ್ಟಿಟ್ಯೂಟ್ ಆಫ್ ಮ್ಯಾನೇಜಮೆಂಟ್ ಸ್ಟಡೀಸ್ ನಿರ್ದೇಶಕ ಡಾ.ಎ.ಎಂ. ಕಡಕೋಳ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts