More

    ಚ.ಪಟ್ಟಣದಲ್ಲಿ ಪಂಚರತ್ನ ಯಾತ್ರೆ ಇಂದು

    ಚನ್ನರಾಯಪಟ್ಟಣ: ರಾಜ್ಯಾದ್ಯಂತ್ಯ ಕೈಗೊಂಡಿರುವ ಪಂಚರತ್ನ ರಥಯಾತ್ರೆ ಕಾರ್ಯಕ್ರಮಗಳು ರೈತರು, ಬಡವರು, ವಿದ್ಯಾರ್ಥಿಗಳು ಹಾಗೂ ಮಹಿಳೆಯರಿಗೆ ವರದಾನವಾಗಿದೆ ಎಂದು ಶಾಸಕ ಸಿ.ಎನ್.ಬಾಲಕೃಷ್ಣ ತಿಳಿಸಿದರು.

    ಪಟ್ಟಣದಲ್ಲಿ ಮಾ.13ರಂದು ನಡೆಯಲಿರುವ ಪಂಚರತ್ನ ರಥಯಾತ್ರೆ ಹಾಗೂ ಬಹಿರಂಗ ಸಭೆ ಹಿನ್ನೆಲೆಯಲ್ಲಿ ವೇದಿಕೆ ನಿರ್ಮಾಣ ಪರಿಶೀಲಿಸಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಚ್.ಡಿ.ಕುಮಾರಸ್ವಾಮಿ ಅವರು ಎರಡು ಬಾರಿ ಮುಖ್ಯಮಂತ್ರಿ ಆಗಿದ್ದಾಗ ನಾಡಿನ ರೈತರು, ಬಡವರ ಪರವಾಗಿ ಎಲ್ಲ ವರ್ಗದವರ ಕಲ್ಯಾಣಕ್ಕಾಗಿ ಹಲವಾರು ಅಭಿವೃದ್ಧಿ ಕಾರ್ಯಕ್ರಮಗಳನ್ನು ಕೊಟ್ಟು ನುಡಿದಂತೆ ನಡೆದಿದ್ದಾರೆ. ರಾಜ್ಯಾದ್ಯಂತ 79 ವಿಧಾನಸಭಾ ಕ್ಷೇತ್ರಗಳಲ್ಲಿ ಪಂಚರತ್ನ ಯಾತ್ರೆ ಯಶಸ್ವಿಯಾಗಿದೆ. 13ರಂದು ಪಟ್ಟಣಕ್ಕೆ ಆಗಮಿಸಲಿದ್ದು ಅದ್ದೂರಿ ಸ್ವಾಗತ ಕೋರಲಾಗುವುದು ಎಂದರು.

    ಬೆಳಗ್ಗೆ 10.30ಕ್ಕೆ ಹಿರೀಸಾವೆ ಗಡಿಗೆ ಪಂಚರತ್ನ ಯಾತ್ರೆ ಆಗಮಿಸಲಿದ್ದು, ಅಲ್ಲಿಂದ ಮೆರವಣಿಗೆ ಮೂಲಕ ಹಿರೀಸಾವೆ ಚೌಡೇಶ್ವರಿ ಸರ್ಕಲ್ನಲ್ಲಿ ಮುಖಂಡರು ಅದ್ದೂರಿ ಸ್ವಾಗತ ಕೋರಲಿದ್ದಾರೆ. ನಂತರ ರಸ್ತೆ ಮೂಲಕ ಚನ್ನರಾಯಪಟ್ಟಣಕ್ಕೆ ಆಗಮಿಸುವ ಮಾರ್ಗದ ಗ್ರಾಮಗಳಲ್ಲಿ ಪಕ್ಷದ ಕಾರ್ಯಕರ್ತರು ಸ್ವಾಗತ ಕೋರಲಿದ್ದಾರೆ. ಪಟ್ಟಣದ ಧನಲಕ್ಷ್ಮೀ ಟಾಕೀಸ್ ಬಳಿಯಿಂದ 30 ಸಾವಿರ ಕಾರ್ಯಕರ್ತರೊಂದಿಗೆ ಬೃಹತ್ ಮೆರವಣಿಗೆ ನಡೆಯಲಿದೆ. ನುಗ್ಗೆಹಳ್ಳಿಯ ಕಾರ್ಯಕರ್ತರು ಪ್ರತಿ ಮನೆ ಮನೆಯಲ್ಲೂ ಕೊಬ್ಬರಿ ಸಂಗ್ರಹಿಸಿ ಬೃಹತ್ ಹಾರವನ್ನು ಎಚ್.ಡಿ.ಕುಮಾರಸ್ವಾಮಿಗೆ ಮುತ್ತತ್ತಿರಾಯನ ದೇವಸ್ಥಾನದ ಬಳಿ ಹಾಕಲಿದ್ದಾರೆ. ಹೇಮಾವತಿ ವಿದ್ಯಾ ಶಾಲಾ ಆವರಣದಲ್ಲಿ ಸಾರ್ವಜನಿಕ ಸಭೆ ನಡೆಯಲಿದೆ.

    ಪರೀಕ್ಷೆ ಸಮಯವಾಗಿರುವುದರಿಂದ ಪಟ್ಟಣದೊಳಗೆ ಜನದಟ್ಟಣೆಯಿಂದ ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ತೊಂದರೆಯಾಗಬಾರದೆಂಬ ಉದ್ದೇಶದಿಂದ ರಿಲಯನ್ಸ್ ಬಂಕ್ ಪಕ್ಕದಲ್ಲಿರುವ ಹೇಮಾವತಿ ಶಾಲೆಯ ಆವರಣದಲ್ಲಿ ಬಹಿರಂಗ ಸಭೆ ಆಯೋಜಿಸಲಾಗಿದೆ. 15 ಸಾವಿರ ಆಸನದ ವ್ಯವಸ್ಥೆ ಮಾಡಲಾಗಿದ್ದು, ಆವರಣದ ಸುತ್ತಲೂ ವಿಡಿಯೋ ಪರದೆ ಅಳವಡಿಸಲಾಗಿದೆ ಎಂದು ತಿಳಿಸಿದರು.

    ಕಾರ್ಯಕ್ರಮಕ್ಕೆ ಮಾಜಿ ಸಚಿವ ಎಚ್.ಡಿ.ರೇವಣ್ಣ, ಸಂಸದ ಪ್ರಜ್ವಲ್ ರೇವಣ್ಣ, ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ, ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ, ಶಾಸಕ ಎಚ್.ಕೆ ಕುಮಾರಸ್ವಾಮಿ, ಜಿಲ್ಲಾ ಅಧ್ಯಕ್ಷ ಲಿಂಗೇಶ್ ಭಾಗವಹಿಸಲಿದ್ದಾರೆ ಎಂದು ಶಾಸಕ ಸಿ.ಎನ್.ಬಾಲಕೃಷ್ಣ ಮಾಹಿತಿ ನೀಡಿದರು.

    ರಾಜ್ಯ ಮಾರಾಟ ಮಹಾಮಂಡಳದ ನಿರ್ದೇಶಕ ಸಿ.ಎನ್.ಪುಟ್ಟಸ್ವಾಮಿಗೌಡ, ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕು ಅಧ್ಯಕ್ಷ ಹಾಡೇನಹಳ್ಳಿ ಲೋಕೇಶ್, ಟಿಎಪಿಸಿಎಂಎಸ್ ಅಧ್ಯಕ್ಷ ರಮೇಶ್ ಕುಂಬಾರಹಳ್ಳಿ, ನಿರ್ದೇಶಕ ಅನಿಲ್ ಮರಗೂರು, ನವೋದಯ ವಿದ್ಯಾ ಸಂಸ್ಥೆಯ ನಿರ್ದೇಶಕ ಕಿರಣ್, ವೆಂಕಟೇಶ್, ಪುರಸಭಾ ಸದಸ್ಯ ನವೀನ್, ಶಾಮಿಯಾನ ರಘು ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts