More

    ಜಗತ್ತಿಗೆ ಮಾದರಿಯಾದ ಬೃಹತ್ ಲಿಖಿತ ಸಂವಿಧಾನ

    ಹಾವೇರಿ: ಆಧುನಿಕ ಭಾರತದಲ್ಲಿ ಸಮಾನತೆಯನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಸಂವಿಧಾನ ಒಂದು ಮಹತ್ವದ ಮೈಲುಗಲ್ಲಾಗಿದೆ. ಸಮಾನತೆ, ಸೋದರತೆ, ಸಾಮಾಜಿಕ ನ್ಯಾಯ, ಆರ್ಥಿಕ ನ್ಯಾಯ ಮತ್ತು ರಾಜಕೀಯ ನ್ಯಾಯವನ್ನು ದೊರಕಿಸಿಕೊಡುವುದು ನಮ್ಮ ಸಂವಿಧಾನದ ಮುಖ್ಯಗುರಿಯಾಗಿದೆ. ಉಸ್ತುವಾರಿ ಸಚಿವನಾಗಿ ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗೆ ಪ್ರಮಾಣಿಕವಾಗಿ ಶ್ರಮಿಸುತ್ತೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ ಭರವಸೆ ನೀಡಿದರು.

    ನಗರದ ಹೊಸಮನಿ ಸಿದ್ದಪ್ಪ ಜಿಲ್ಲಾ ಕ್ರೀಡಾಂಗಣದಲ್ಲಿ ಬುಧವಾರ ಆಯೋಜಿಸಿದ್ದ 73ನೇ ಗಣರಾಜ್ಯೋತ್ಸವದ ರಾಷ್ಟ್ರಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

    ಗಣರಾಜ್ಯದ ಇಂದಿನ ಅಸ್ತಿತ್ವಕ್ಕೆ ನಮ್ಮ ಸಂವಿಧಾನವೇ ತಳಹದಿ. ವಿಶ್ವ ಮಾನ್ಯತೆಯನ್ನು ಪಡೆದ ನಮ್ಮ ಸಂವಿಧಾನ ರಚನೆಯಲ್ಲಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಪಾತ್ರ ಅವಿಸ್ಮರಣೀಯವಾಗಿದೆ. ಸಂವಿಧಾನ ರಚನಾ ಸಮಿತಿಯ ಅವಿರತ ಪ್ರಯತ್ನದ ಫಲವಾಗಿ ಜಗತ್ತಿಗೆ ಮಾದರಿಯಾಗಿರುವ ಬೃಹತ್ ಲಿಖಿತ ಸಂವಿಧಾನ ಹೊಂದಿದ ಹೆಗ್ಗಳಿಕೆಗೆ ನಮ್ಮ ದೇಶ ಪಾತ್ರವಾಗಿದೆ ಎಂದರು.

    ಸಶಸ್ತ್ರ ಮೀಸಲುಪಡೆ ಸೇರಿದಂತೆ ವಿವಿಧ ವಲಯದ ನಾಲ್ಕು ಪೊಲೀಸ್ ತುಕಡಿಗಳಿಂದ ಆಕರ್ಷಕ ಪಥಸಂಚಲನ, ಸಚಿವರಿಂದ ಗೌರವ ವಂದನೆ ಸ್ವೀಕಾರ ನಡೆಯಿತು.

    ಶಾಸಕ ನೆಹರು ಓಲೇಕಾರ, ನಗರಸಭೆ ಅಧ್ಯಕ್ಷ ಸಂಜೀವಕುಮಾರ ನೀರಲಗಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶಿವಕುಮಾರ ಸಂಗೂರ, ಜಿಪಂ ಸಿಇಒ ಮಹಮ್ಮದ ರೋಷನ್, ಎಸ್​ಪಿ ಹನುಮಂತರಾಯ, ಅಪರ ಜಿಲ್ಲಾಧಿಕಾರಿ ಡಾ. ಎನ್. ತಿಪ್ಪೇಸ್ವಾಮಿ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts