More

    ಜನಪರ ಯೋಜನೆಗಳಿಗೆ ಒತ್ತು

    ಹನೂರು: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಮಾತ್ರ ಜನಪರ ಯೋಜನೆಗಳನ್ನು ಜಾರಿಗೆ ತರಲು ಸಾಧ್ಯವಾಗುತ್ತದೆ ಎಂದು ಶಾಸಕ ಆರ್. ನರೇಂದ್ರ ತಿಳಿಸಿದರು.

    ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಚಂಗವಾಡಿ ಗ್ರಾಮದಲ್ಲಿ ಭಾನುವಾರ ಕಾರ್ಯಕರ್ತರು ಹಾಗೂ ಮುಖಂಡರೊಂದಿಗೆ ಮತಯಾಚಿಸಿದ ನಂತರ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದರು.

    ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಉತ್ತಮ ಅಡಳಿತವನ್ನು ನೀಡುವುದರ ಮೂಲಕ ಬಡವರ ಪರ ಅನೇಕ ಯೋಜನೆಗಳು ಜಾರಿಗೊಳಿಸಲಾಗಿತ್ತು. ಇದರ ಪ್ರಯೋಜನವನ್ನು ಜನರು ಇಂದಿಗೂ ಪಡೆಯುತ್ತಿದ್ದಾರೆ. ಆದರೆ ಬಿಜೆಪಿ ಸರ್ಕಾರ ಉತ್ತಮ ಆಡಳಿತವನ್ನೂ ನೀಡಲಿಲ್ಲ. ಇತ್ತ ಜನಪರ ಯೋಜನೆಗಳನ್ನೂ ರೂಪಿಸಲಿಲ್ಲ ಎಂದವರು ಟೀಕಿಸಿದರು.

    ಪ್ರಧಾನಿ ನರೇಂದ್ರ ಮೋದಿ ಅವರು ಬಡವರ ಖಾತೆಗಳಿಗೆ 15 ಲಕ್ಷ ರೂ. ನೀಡುತ್ತೇವೆ ಎಂದು ಭರವಸೆ ನೀಡಿ ಬ್ಯಾಂಕ್‌ಗಳಲ್ಲಿ ಖಾತೆ ತೆರೆಯುವಂತೆ ತಿಳಿಸಿದರು. 9 ವರ್ಷ ಕಳೆಯುತ್ತಾ ಬಂದರೂ ಒಂದು ರೂಪಾಯಿ ಹಣ ಖಾತೆಗಳಿಗೆ ಬಂದಿಲ್ಲ. ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಸಲಾಗುವುದು ಎಂದು ನೀಡಿದ್ದ ಭರವಸೆಯೂ ಹುಸಿಯಾಗಿದೆ . ಇದರಿಂದ ಜನರಿಗೆ ಅನ್ಯಾಯವಾಗಿದೆ ಎಂದರು. ಈ ಬಗ್ಗೆ ಪ್ರತಿಯೊಬ್ಬರೂ ಮನದಟ್ಟು ಮಾಡಿಕೊಳ್ಳುವುದರ ಮೂಲಕ ಉತ್ತಮ ಆಡಳಿತಕ್ಕಾಗಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಬೇಕು ಎಂದು ತಿಳಿಸಿದರು.

    ನಾನು ಕಾಂಗ್ರೆಸ್ ಶಾಸಕ ಎಂಬುದಕ್ಕಾಗಿ ಬಿಜೆಪಿ ಸರ್ಕಾರ ಕಳೆದ 4 ವರ್ಷದ ಅವಧಿಯಲ್ಲಿ ಅಭಿವೃದ್ಧಿಗೆ ಯಾವುದೇ ಅನುದಾನವನ್ನು ನೀಡಲಿಲ್ಲ. ಅಡುಗೆ ಅನಿಲದ ಬೆಲೆ ಏರಿಕೆಯಿಂದ ಗಿರಿಜನರ ಪೋಡುಗಳಲ್ಲಿ ಜನರು ಸೌದೆ ಒಲೆ ಮೊರೆ ಹೋಗಿದ್ದಾರೆ. ಇಂತಹ ಸರ್ಕಾರ ಬೇಕಾ ಎಂದು ಶಾಸಕ ಆರ್. ನರೇಂದ್ರ ಪ್ರಶ್ನಿಸಿದರು. ಪಪಂ ಉಪಾಧ್ಯಕ್ಷ ಗಿರೀಶ್, ಸದಸ್ಯ ಹರೀಶ್‌ಕುಮಾರ್, ಗ್ರಾಪಂ ಮಾಜಿ ಅಧ್ಯಕ್ಷ ಮಹದೇವ, ರಾಜ್ಯ ಯೂತ್ ಕಾಂಗ್ರೆಸ್ ಕಾರ್ಯದರ್ಶಿ ಚೇತನ್ ದೊರೆರಾಜು, ಮುಖಂಡರಾದ ಕರಿಯಪ್ಪ, ರಾಜಣ್ಣ, ಗಂಗಣ್ಣ, ಮಹೇಶ್, ರಾಜು, ಸತೀಶ್, ನಟರಾಜು, ಶಿವಣ್ಣ, ಉದ್ದನೂರು ಸಿದ್ದರಾಜು ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts