More

    ಜನರ ಅನುಕೂಲಕ್ಕಾಗಿ ಸರ್ಕಾರದ ಕ್ರಮ

    ಬೈಲಹೊಂಗಲ: ಆರ್ಥಿಕವಾಗಿ ಹಿಂದುಳಿದ ಬಡ ಜನರ ಅನುಕೂಲಕ್ಕಾಗಿ ನಮ್ಮ ಕ್ಲಿನಿಕ್ ನೂತನ ಆಸ್ಪತ್ರೆಯನ್ನು ಸರ್ಕಾರ ಪ್ರಾರಂಭಿಸಿದೆ. ಸಾರ್ವಜನಿಕರು ಸದುಪಯೋಗ ಪಡೆದುಕೊಳ್ಳಬೇಕು. ಸ್ಥಳೀಯರು ವೈದ್ಯರೊಂದಿಗೆ ಸಹಕರಿಸಬೇಕು ಎಂದು ಶಾಸಕ ಮಹಾಂತೇಶ ಕೌಜಲಗಿ ಹೇಳಿದರು.

    ಪಟ್ಟಣದ ಅಂಬೇಡ್ಕರ್ ನಗರದಲ್ಲಿರುವ ಹಳೆಯ ಆಸ್ಪತ್ರೆಯಲ್ಲಿ ಬುಧವಾರ ರಾಜ್ಯ ಸರ್ಕಾರದ ನೂತನ ಯೋಜನೆಯಾದ ನಮ್ಮ ಕ್ಲಿನಿಕ್ ಉದ್ಘಾಟಿಸಿ ಅವರು ಮಾತನಾಡಿದರು. ಕಾಡಾ ಅಧ್ಯಕ್ಷ ಡಾ. ವಿಶ್ವನಾಥ ಪಾಟೀಲ ಮಾತನಾಡಿ, ಸರ್ಕಾರ ಜನರ ಆರೋಗ್ಯ ರಕ್ಷಣೆಗೆ ಹೆಚ್ಚಿನ ಮಹತ್ವ ನೀಡುತ್ತಿದೆ. ಜನತೆ ಯಾವುದೇ ರೋಗದ ಲಕ್ಷಣಗಳಿಗೆ ತಪಾಸಣೆಗೊಳಗಾಗಿ ತಮ್ಮ ಆರೋಗ್ಯ ಕಾಪಾಡಲು ಮುಂದಾಗಬೇಕು ಎಂದರು. ಪುರಸಭೆ ಅಧ್ಯಕ್ಷ ಬಸವರಾಜ ಜನ್ಮಟ್ಟಿ ಮಾತನಾಡಿ, ಇಲ್ಲಿ ರಕ್ತ ಮತ್ತು ಮೂತ್ರ ತಪಾಸಣೆ ಸೌಲಭ್ಯದ ಜತೆಗೆ ಸಾಂಕ್ರಾಮಿಕ ಮತ್ತು ಅಸಾಂಕ್ರಾಮಿಕ ರೋಗಗಳಿಗೆ ಚಿಕಿತ್ಸೆ ಲಭ್ಯವಿದೆ ಎಂದರು. ತಾಲೂಕು ಆರೋಗ್ಯ ಅಧಿಕಾರಿ ಡಾ. ಸಂಜಯ ಸಿದ್ದಣ್ಣವರ ಮಾತನಾಡಿದರು. ಎಲ್ಲ ರೀತಿಯ ರೋಗಗಳನ್ನು ತಪಾಸಣೆ ಮಾಡಿ ಉಚಿತ ಔಷಧಿ ಕೊಡಲಾಗುವುದು ಎಂದರು.

    ಶಾಸಕ ಮಹಾಂತೇಶ ದೊಡಗೌಡರ, ತಹಸೀಲ್ದಾರ್ ಬಸವರಾಜ ನಾಗರಾಳ, ಪುರಸಭೆ ಮಾಜಿ ಅಧ್ಯಕ್ಷ ಬಾಬು ಕುಡಸೋಮನ್ನವರ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಸುಭಾಷ ಸಂಪಗಾಂವಿ, ಸಾರ್ವಜನಿಕ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ. ನಿರ್ಮಲಾ ಮಹಾಂತಶೆಟ್ಟಿ, ಸಿಡಿಪಿಒ ಕಮಲಾ ಬಸರಗಿ, ಡಾ.ಮಹಾಂತೇಶ ಕಳ್ಳಿಬಡ್ಡಿ, ಶಿವಯೋಗಿ ಹುಲೆನ್ನವರ, ದಿಲಶಾದ ನದಾಫ್ ಬಿ.ಎಚ್.ಇ.ಒ ಎಸ್.ಎಸ್ ಮುತ್ನಾಳ, ಪ್ರಕಾಶ ಮಾನೆ, ಎನ್.ಡಿ. ಖಾಡೆ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts