More

    ಜನರ ಆಶೋತ್ತರಗಳಿಗೆ ಸ್ಪಂದಿಸದ ಸರ್ಕಾರ

    ನಂಜನಗೂಡು: ಕಾಂಗ್ರೆಸ್ ಬಲಪಡಿಸುವ ಸಲುವಾಗಿ ಪಕ್ಷದ ಕಾರ್ಯಕರ್ತರ ಒತ್ತಾಯದ ಮೇರೆಗೆ ಮುಂಬರುವ ದಿನಗಳಲ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪ್ರವಾಸ ಕೈಗೊಳ್ಳುವುದಾಗಿ ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಹೇಳಿದರು.


    ನಗರದ ಹೌಸಿಂಗ್ ಬೋರ್ಡ್ ಕಾಲನಿಯಲ್ಲಿರುವ ಗೃಹ ಕಚೇರಿಯಲ್ಲಿ ಶುಕ್ರವಾರ ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡಿದರು. ಕೇಂದ್ರ ಮತ್ತು ರಾಜ್ಯದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರ ಜನರ ಆಶೋತ್ತರಗಳಿಗೆ ಸ್ಪಂದಿಸುತ್ತಿಲ್ಲ. ಇದರಿಂದ ಮತದಾರರು ಬೇಸತ್ತಿದ್ದಾರೆ. ಮುಂಬರುವ 2023ರ ಚುನಾವಣೆ ಬಳಿಕ ರಾಜ್ಯದಲ್ಲಿ ಮತ್ತೊಮ್ಮೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವ ಮುನ್ಸೂಚನೆಯಿದ್ದು, ಕಾರ್ಯಕರ್ತರು ಈಗಿನಿಂದಲೇ ಮುಂಬರುವ ಚುನಾವಣೆಗೆ ತಯಾರಾಗಬೇಕು. ಈ ನಿಟ್ಟಿನಲ್ಲಿ ಪಕ್ಷವನ್ನು ಬಲಗೊಳಿಸಲು ಸೆಪ್ಟೆಂಬರ್‌ನಲ್ಲಿ ಕ್ಷೇತ್ರ ವ್ಯಾಪ್ತಿಯ ಗ್ರಾಮೀಣ ಪ್ರದೇಶದ ಹಳ್ಳಿಗಳಿಗೆ ಪ್ರವಾಸ ಕೈಗೊಳ್ಳುವುದಾಗಿ ತಿಳಿಸಿದರು.


    2017ರ ನಂಜನಗೂಡು ಉಪ ಚುನಾವಣೆ ಸಮಯದಲ್ಲಿ ಕ್ಷೇತ್ರದ ಅಭಿವೃದ್ಧಿಗೆ ನೂರಾರು ಕೋಟಿ ರೂ.ಗಳ ಅನುದಾನವನ್ನು ತರುವ ಮೂಲಕ ಕ್ಷೇತ್ರದ ಪ್ರಗತಿಗೆ ನೆರವಾಗಿದ್ದೇನೆ. ಇದನ್ನು ಇಂದಿಗೂ ಜನರು ಸ್ಮರಿಸುತ್ತಿದ್ದಾರೆ ಎಂದು ಹೇಳಿದರು.


    ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷರಾದ ಎಚ್.ಎಸ್.ಮೂಗಶೆಟ್ಟಿ, ಪಿ.ಶ್ರೀನಿವಾಸ್, ತಾ.ಪಂ. ಮಾಜಿ ಅಧ್ಯಕ್ಷ ಚಾಮರಾಜು, ಜಿ.ಪಂ. ಮಾಜಿ ಸದಸ್ಯ ಕೆ.ಬಿ.ಸ್ವಾಮಿ, ಶ್ರೀಕಂಠೇಶ್ವರಸ್ವಾಮಿ ದೇವಾಲಯದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಆರ್.ಇಂಧನ್‌ಬಾಬು, ದೇವನೂರು ಮಹದೇವಪ್ಪ, ಕುರುಬರ ಸಂಘದ ಅಧ್ಯಕ್ಷ ಕೆಂಪಣ್ಣ ಇತರರು ಉದ್ದರು.


    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts