More

    ಜನರ ಸಹಭಾಗಿತ್ವದಿಂದ ಉತ್ತಮ ಸಮಾಜ ಸಾಧ್ಯ

    ದಾವಣಗೆರೆ

    ಆಡಳಿತ ವಲಯ ಮತ್ತು ಜನಸಾಮಾನ್ಯರ ಸಹಭಾಗಿತ್ವದಿಂದ ಉತ್ತಮ ಸಮಾಜ ನಿರ್ಮಿಸಬಹುದು ಎಂದು ಜಿಲ್ಲಾಧಿಕಾರಿ ಶಿವಾನಂದ ಕಪಾಶಿ ಹೇಳಿದರು.
    ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ ಸಹಯೋಗದಲ್ಲಿ ಬುಳ್ಳಾಪುರ ಗ್ರಾಮದಲ್ಲಿ
    ಹಮ್ಮಿಕೊಂಡಿದ್ದ ಜಿಲ್ಲಾಧಿಕಾರಿ ನಡೆ-ಹಳ್ಳಿಯ ಕಡೆ, ಗ್ರಾಮ ವಾಸ್ತವ್ಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
    ಜನರಿಗಾಗಿ ಸರ್ಕಾರವಿದೆ. ಇಲಾಖೆ, ನಿಗಮಗಳಡಿ ಅನುದಾನ ಸದ್ಬಳಕೆ ಮಾಡಿಕೊಂಡು ಗ್ರಾಮದ ರಸ್ತೆ, ಚರಂಡಿ, ಒಳ ಚರಂಡಿ ಇತರೆ ಸೌಲಭ್ಯಗಳನ್ನು ಒದಗಿಸಲು ಒತ್ತು ನೀಡಲಾಗುವುದು. ಗ್ರಾಮದ ಶಾಲಾ ಕೊಠಡಿ, ಶೌಚಗೃಹ, ಇತರೆ ಮೂಲ ಸೌಕರ್ಯ ಒದಗಿಸಲಾಗುವುದು. ಸ್ಮಶಾನ ಜಾಗದ ವಿಷಯದಲ್ಲಿ ಕಾನೂನು ತೊಡಕುಗಳಿದ್ದು ಬಗೆಹರಿಸಲು ಶ್ರಮಿಸಲಾಗುವುದು ಎಂದರು.
    ಉಪವಿಭಾಗಾಧಿಕಾರಿ ದುರ್ಗಾಶ್ರೀ ಮಾತನಾಡಿ, ಜಿಲ್ಲಾ ಮಟ್ಟದ ಅಧಿಕಾರಿಗಳು ಗ್ರಾಮದ ಮನೆ ಬಾಗಿಲ ಮುಂದೆ ಬಂದು ಸಮಸ್ಯೆಗಳನ್ನು ಕೇಳಿ ಪರಿಹರಿಸುವ ಈ ಕಾರ್ಯಕ್ರಮ ವಿಶಿಷ್ಟವಾಗಿದೆ. ಎಲ್ಲರೂ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.
    ಕಾರ್ಯಕ್ರಮಕ್ಕೂ ಮುನ್ನ ಪೂರ್ಣ ಕುಂಭ, ಕಲಾ ತಂಡಗಳೊಂದಿಗೆ ಅಧಿಕಾರಿಗಳನ್ನು ಜನರು ಬರಮಾಡಿಕೊಂಡರು. ನಂತರ ಡಿಸಿ ವಿವಿಧೆಡೆ ಭೇಟಿ ನೀಡಿ ಸಮಸ್ಯೆಗಳ ಬಗ್ಗೆ ಅಹವಾಲು ಪಡೆದರು. ಗರ್ಭಿಣಿಯರಿಗೆ ಸೀಮಂತ, ಆರು ತಿಂಗಳು ತುಂಬಿದ ಮಕ್ಕಳಿಗೆ ಅನ್ನಪ್ರಾಶನ, ಅಂಗನವಾಡಿಗಳಿಗೆ ತರಕಾರಿ ಬೀಜ ಕಿಟ್ ವಿತರಿಸಲಾಯಿತು.
    ಕಾರ್ಯಕ್ರಮದಲ್ಲಿ ಜಿಪಂ ಮಾಜಿ ಸದಸ್ಯ ಕೆ.ಎಸ್.ಬಸವಂತಪ್ಪ, ಗ್ರಾಮ ಪಂಚಾಯಿತಿ ಅಧ್ಯಕ್ಷ ಮಾದಪ್ಪ, ಉಪಾಧ್ಯಕ್ಷ ಸುರೇಶ್, ಸದಸ್ಯ ಕರಿಬಸಪ್ಪ, ತಹಸೀಲ್ದಾರ್ ಬಸನಗೌಡ ಕೋಟೂರ, ತಾಪಂ ಇಒ ಆನಂದ್, ಮಹಿಳಾ ಮಕ್ಕಳ ಅಭಿವೃದ್ಧಿ ಇಲಾಖೆ ಡಿಡಿ ವಾಸಂತಿ ಉಪ್ಪಾರ್, ವಿಕಲಾಂಗರ ಅಧಿಕಾರಿ ಕೆ.ಕೆ.ಪ್ರಕಾಶ್ ಹಾಗೂ ಇತರೆ ಅಧಿಕಾರಿಗಳಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts