More

    ಜನವರಿ 2ನೇ ವಾರದಲ್ಲಿ ಸಾಗರಕ್ಕೆ ಸಿಎಂ ಬೊಮ್ಮಾಯಿ; ವಿವಿಧ ಕಾಮಗಾರಿಗಳಿಗೆ ಚಾಲನೆ

    ಸಾಗರ: ಮಿನಿ ವಿಧಾನಸೌಧ ನಿರ್ಮಾಣ ಕಾಮಗಾರಿ ವೇಗವಾಗಿ ಸಾಗಿದ್ದು ಜನವರಿ 14ರೊಳಗೆ ಲೋಕಾರ್ಪಣೆಗೊಳ್ಳಲಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನೂತನ ಕಟ್ಟಡವನ್ನು ಉದ್ಘಾಟನೆ ಸೇರಿದಂತೆ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ ಎಂದು ಶಾಸಕ ಹರತಾಳು ಹಾಲಪ್ಪ ತಿಳಿಸಿದರು.
    ಮಿನಿ ವಿಧಾನಸೌಧ ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕಟ್ಟಡ ನಿರ್ಮಾಣ ಕಾಮಗಾರಿಯನ್ನು ಶುಕ್ರವಾರ ವೀಕ್ಷಣೆ ಮಾಡಿ ಅವರು ಸುದ್ದಿಗಾರರ ಜತೆ ಮಾತನಾಡಿ, ಜನವರಿ ಎರಡನೇ ವಾರದಲ್ಲಿ ಮುಖ್ಯಮಂತ್ರಿಗಳು, ಬೇರೆಬೇರೆ ಇಲಾಖೆ ಸಚಿವರು ಹಾಗೂ ಸಂಸದರು ಸಾಗರಕ್ಕೆ ಆಗಮಿಸಲಿದ್ದು ಮಿನಿ ವಿಧಾನಸೌಧ ಸೇರಿದಂತೆ ವಿವಿಧ ಕಾಮಗಾರಿಗಳನ್ನು ಲೋಕಾರ್ಪಣೆಗೊಳಿಸಲಿದ್ದಾರೆ. 9.65 ಕೋಟಿ ರೂ. ವೆಚ್ಚದಲ್ಲಿ ಮಿನಿ ವಿಧಾನಸೌಧ ನಿರ್ಮಾಣವಾಗುತ್ತಿದೆ. ಮತ್ತೊಂದು ಅಂತಸ್ತು ನಿರ್ಮಾಣಕ್ಕಾಗಿ 4 ಕೋಟಿ ರೂ. ಅನುದಾನ ಶೀಘ್ರ ಬಿಡುಗಡೆಯಾಗಲಿದೆ. ಸರ್ಕಾರಿ ಪದವಿ ಪೂರ್ವ ಕಾಲೇಜಿನ ಹೊಸ ಕಟ್ಟಡ 2 ಕೋಟಿ ರೂ. ವೆಚ್ಚದಲ್ಲಿ ನಿಮಾರ್ಣವಾಗುತ್ತಿದ್ದು ಕಾಮಗಾರಿ ಅಂತಿಮ ಹಂತಕ್ಕೆ ಬಂದಿದೆ ಎಂದರು.
    ಮುಖ್ಯಮಂತ್ರಿಗಳು 133 ಕೋಟಿ ರೂ. ವೆಚ್ಚದ ಕುಡಿಯುವ ನೀರಿನ ಯೋಜನೆ, ಇಂದಿರಾಗಾಂಧಿ ಕಾಲೇಜಿನ 4 ಕೋಟಿ ರೂ. ವೆಚ್ಚದ ಗ್ರಂಥಾಲಯ ಕಟ್ಟಡ, ಠ್ಯಾಗೋರ್ ಕಲ್ಚರಲ್ ಕಾಂಪ್ಲೆಕ್ಸ್‌ಗೆ ಗುದ್ದಲಿ ಪೂಜೆ ಸೇರಿದಂತೆ ವಿವಿಧ ಕಾಮಗಾರಿಗೆ ಚಾಲನೆ ನೀಡಲಿದ್ದಾರೆ. ಜತೆಗೆ ಸೊರಬ ರಸ್ತೆ ಅಗಲೀಕರಣಕ್ಕೆ ಸಹ ಗುದ್ದಲಿಪೂಜೆ ನೆರವೇರಿಸಲಿದ್ದಾರೆ. 400 ಕೋಟಿ ರೂ. ವೆಚ್ಚದ ವಿವಿಧ ಕಾಮಗಾರಿಗಳು ತಾಲೂಕು ವ್ಯಾಪ್ತಿಯಲ್ಲಿ ನಡೆಯುತ್ತಿವೆ. ಕಾಮಗಾರಿಗಳನ್ನು ಇನ್ನಷ್ಟು ಚುರುಕುಗೊಳಿಸುಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts