More

    ಜನವಿರೋಧಿ ಕಾಂಗ್ರೆಸ್‌ಗೆ ಭವಿಷ್ಯ ಇಲ್ಲ

    ಬೆಳಗಾವಿ: ದೇಶದಲ್ಲಿ ಜನ, ಅಭಿವೃದ್ಧಿ ವಿರೋಧಿಯಾಗಿರುವ ಕಾಂಗ್ರೆಸ್ ಪಕ್ಷಕ್ಕೆ ರಾಜಕೀಯ ಭವಿಷ್ಯ ಇಲ್ಲ. ಈ ಬಾರಿ ಕರ್ನಾಟಕ ವಿಧಾನಸಭೆ ಚುನಾವಣೆ ಬಳಿಕ ತನ್ನ ಅಸ್ತಿತ್ವ ಕಳೆದುಕೊಳ್ಳಲಿದೆ ಎಂದು ಉತ್ತರಪ್ರದೇಶ ಉಪಮುಖ್ಯಮಂತ್ರಿ ಕೇಶವ ಪ್ರಸಾದ ಮೌರ್ಯ ಹೇಳಿದರು.

    ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾ ಡಿದ ಅವರು, ಜನರಿಗೆ ಸುಳ್ಳು ಭರವಸೆ ನೀಡುತ್ತ ಅಧಿಕಾರಕ್ಕೆ ಬಂದಿದ್ದ ಕಾಂಗ್ರೆಸ್ ಪಕ್ಷವನ್ನು ಜನರು ತಿರಸ್ಕರಿಸಿದ್ದಾರೆ. ಜನಕಲ್ಯಾಣ, ಅಭಿವೃದ್ಧಿ ವಿರೋಧಿಯೇ ಕಾಂಗ್ರೆಸ್‌ನ ರಾಜನೀತಿಯಾಗಿದೆ. ಹಾಗಾಗಿ, ಪ್ರತಿ ಚುನಾವಣೆಯುಲ್ಲಿ ಕಾಂಗ್ರೆಸ್ ಸೋಲುತ್ತಿದೆ.

    ಕರ್ನಾಟಕ ಚುನಾವಣೆ ಬಳಿಕ ಕಾಂಗ್ರೆಸ್ ಸಂಪೂರ್ಣ ಅಳಿವಿನ ಅಂಚಿಗೆ ತಲುಪಲಿದೆ. ಆ ಪಕ್ಷಕ್ಕೆ ಮತ ಹಾಕಿದರೆ ಭ್ರಷ್ಟಾಚಾರ ಬೆಳೆಸಿದಂತೆ ಎಂದು ಟೀಕಿಸಿದರು. ಕೇಂದ್ರ ಮತ್ತು ರಾಜ್ಯಗಳಲ್ಲಿ ಬಿಜೆಪಿ ಡಬಲ್ ಇಂಜಿನ್ ಸರ್ಕಾರದಿಂದಾಗಿ ಕೃಷಿ, ಉತ್ಪಾದನೆ, ಕೈಗಾರಿಕೆ, ಆಹಾರ, ಶಿಕ್ಷಣ,ಆರೋಗ್ಯ ಸೇರಿದಂತೆ ಎಲ್ಲ ಕ್ಷೇತ್ರಗಳು ಸಮಗ್ರ ಅಭಿವೃದ್ಧಿ ಹೊಂದಿವೆ. ನಮ್ಮ ಬಿಜೆಪಿ ಸರ್ಕಾರ ಎಲ್ಲ ಕ್ಷೇತ್ರಗಳ ಸಮಗ್ರ ಅಭಿವೃದ್ಧಿಗೆ ಶ್ರಮಿಸುತ್ತಿದೆ.

    ವಿನಃ ಕಾಂಗ್ರೆಸ್‌ನಂತೆ ಅಧಿಕಾರಕ್ಕಾಗಿ ಧರ್ಮ ಆಧಾರಿತ ಮೀಸಲಾತಿ, ಸೌಲಭ್ಯ ಕಲ್ಪಿಸುತ್ತಿಲ್ಲ. ನಮ್ಮದು ನಿಜವಾದ ಜಾತ್ಯಾತೀತ ಸರ್ಕಾರ ಎಂದು ಹೇಳಿದರು. ಕರ್ನಾಟಕದಲ್ಲಿ ಬಿಜೆಪಿ ಸರ್ಕಾರವು ನೇಕಾರರ ಕುಟುಂಬಗಳನ್ನು ಆರ್ಥಿಕವಾಗಿ ಸದೃಢಗೊಳಿಸುವ ಉದ್ದೇಶದಿಂದ ಪ್ರತಿ ಕುಟುಂಬಕ್ಕೆ 5 ಸಾವಿರ ರೂ. ಸಹಾಯಧನ ಸೌಲಭ್ಯ ಕಲ್ಪಿಸಿದೆ. ಅಲ್ಲದೆ, ವೃತ್ತಿ ಆಧಾರಿತ ಕುಟುಂಬಗಳಿಗೆ ಆರ್ಥಿಕ ಸಹಾಯಧನ ಸೌಲಭ್ಯ ನೀಡುತ್ತಿದೆ. ಡಬಲ್ ಇಂಜಿನ್ ಸರ್ಕಾರದಿಂದಾಗಿ ಕರ್ನಾಟಕದಲ್ಲಿ 224 ಕ್ಷೇತ್ರಗಳ ಪೈಕಿ 150 ಸ್ಥಾನಗಳಲ್ಲಿ ಬಿಜೆಪಿ ಗೆಲುವಿ ಸಾಧಿಸಲಿದೆ ಎಂದರು. ಶಾಸಕ ಅಭಯ ಪಾಟೀಲ, ನೇಕಾರರ ಮುಖಂಡ ಗಜಾನನ ಕೆ.ಇತರರಿದ್ದರು.

    ಯುಪಿ ಜೈಲಿನಲ್ಲಿ 12 ಸಾವಿರ ಜನರು: ಉತ್ತರ ಪ್ರದೇಶದಲ್ಲಿ ಸರ್ಕಾರಿ, ಬಡವರ ಭೂಮಿ ಕಬಳಿಕೆ ಸೇರಿ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾದ ಸುಮಾರು 12 ಸಾವಿರ ಜನರು ವಿವಿಧ ಜೈಲುಗಳಿದ್ದಾರೆ. ಅವರೆಲ್ಲರ ಆಸ್ತಿಗಳನ್ನು ಸರ್ಕಾರ ಮುಟ್ಟುಗೋಲು ಹಾಕಿಕೊಳ್ಳಲಿದೆ. ಉತ್ತರ ಪ್ರದೇಶದಲ್ಲಿ ಮಾಫಿಯಾ ದೊಡ್ಡ ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಅದನ್ನು ತಡೆಗಟ್ಟಲು ಸರ್ಕಾರ ಕಠಿಣ ಕ್ರಮ ಕೈಗೊಂಡಿದೆ. ಪಾತಕಿ ಅತೀಕ್ ಅಹ್ಮದ್ ಹತ್ಯೆ ಪ್ರಕರಣ ತನಿಖೆ ನಡೆಸಲು ಆಯೋಗ ರಚನೆ ಮಾಡಲಾಗಿದೆ. ಅಪರಾಧ ಪ್ರಕರಣಗಳಿಗೆ ಸಂಪೂರ್ಣ ಕಡಿವಾಣ ಹಾಕಲಾಗಿದೆ ಎಂದು ಉಪಮುಖ್ಯಮಂತ್ರಿ ಕೇಶವ ಪ್ರಸಾದ ಮೌರ್ಯ ತಿಳಿಸಿದರು.

    ಉದ್ಯಮಿ, ವ್ಯಾಪಾರಿಗಳೊಂದಿಗೆ ಸಂವಾದ: ಬೆಳಗಾವಿ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಸಣ್ಣ ಮತ್ತು ಅತಿ ಸಣ್ಣ ಉದ್ಯಮಿಗಳು, ವ್ಯಾಪಾರಿಗಳೊಂದಿಗೆ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ ಪ್ರಸಾದ ಮೌರ್ಯ ಸಂವಾದ ನಡೆಸಿದರು. ಜೆಎಸ್‌ಟಿ ಸೇರಿ ವಿವಿಧ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವುದಾಗಿ ಭರವಸೆ ನೀಡಿದರು. ಬೀದಿ ಬದಿ ವ್ಯಾಪಾರಿಗಳು ಸರ್ಕಾರದ ಯೋಜನೆಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ತಿಳಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts