More

    ಜನಸಂಖ್ಯೆ ಹೆಚ್ಚಳದಿಂದ ಸಮಸ್ಯೆಗಳು ಉಲ್ಬಣ

    ಪಾಂಡವಪುರ: ಜನಸಂಖ್ಯಾ ನಿಯಂತ್ರಣಕ್ಕೆ ಅಗತ್ಯವಾದ ಕ್ರಮಗಳನ್ನು ಅನುಸರಿಸುವ ಮೂಲಕ ಜನಸಂಖ್ಯಾ ಸ್ಫೋಟಕ್ಕೆ ತಡೆಯೊಡ್ಡಬೇಕಾದ ಅನಿವಾರ್ಯತೆ ಇದೆ ಎಂದು ಉಪವಿಭಾಗೀಯ ಆಸ್ಪತ್ರೆ ಆಡಳಿತಾಧಿಕಾರಿ ಡಾ.ಸಿ.ಎ.ಅರವಿಂದ್ ಹೇಳಿದರು.
    ಪಟ್ಟಣದ ಉಪವಿಭಾಗೀಯ ಆಸ್ಪತ್ರೆ ಆವರಣದಲ್ಲಿ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ಸಹಯೋಗದಲ್ಲಿ ಜನಸಂಖ್ಯಾ ನಿಯಂತ್ರಣ ದಿನಾಚರಣೆ-2023 ಪ್ರಯುಕ್ತ ಜನಸಂಖ್ಯೆ ಜಾಗೃತಿ ರಥಕ್ಕೆ ಗುರುವಾರ ಚಾಲಕ್ಕೆ ನೀಡಿ ಮಾತನಾಡಿದರು.
    ದೇಶದಲ್ಲಿ ದಿನೇ ದಿನೆ ಹೆಚ್ಚುತ್ತಿರುವ ಜನಸಂಖ್ಯೆಯಿಂದ ಅನೇಕ ಸಮಸ್ಯೆಗಳು ಉಲ್ಬಣಿಸುತ್ತಿವೆ. ಹೀಗಾಗಿ, ಸರ್ಕಾರ ಜನಸಂಖ್ಯೆ ನಿಯಂತ್ರಣಕ್ಕೆ ಅಗತ್ಯವಾಗಿ ಕೈಗೊಳ್ಳಬೇಕಾದ ಕ್ರಮಗಳು ಮತ್ತು ಅರಿವು ಮೂಡಿಸುವ ಕಾರ್ಯಕ್ರಮ ರೂಪಿಸಿದೆ ಎಂದರು.
    ಜಾಗೃತಿ ವಾಹನ ತಾಲೂಕಿನ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರ, ಸಾರ್ವಜನಿಕ ಸ್ಥಳಗಳು ಹಾಗೂ ಪ್ರಮುಖ ವೃತ್ತಗಳಿಗೆ ತೆರಳಿ ಜನರಿಗೆ ಜನಸಂಖ್ಯೆ ನಿಯಂತ್ರಣ ಬಗ್ಗೆ ಅರಿವು ಮೂಡಿಸಲಿದೆ. ಒಂದು ಮಗುವಿಗೂ ಮತ್ತೊಂದು ಮಗುವಿಗೂ ಇರಬೇಕಾದ ಅಂತರ, ನಿಯಂತ್ರಣಕ್ಕೆ ತೆಗೆದುಕೊಳ್ಳಬೇಕಾದ ತಾತ್ಕಾಲಿಕ ಮತ್ತು ಶಾಶ್ವತ ವಿಧಾನಗಳ ಆಯ್ಕೆ ಬಗ್ಗೆ ಕಾರ್ಯಕ್ರಮದಲ್ಲಿ ಜನರಿಗೆ ಅರಿವು ಮೂಡಿಲಾಗುವುದು ಎಂದು ತಿಳಿಸಿದರು. ಆರೋಗ್ಯ ಇಲಾಖೆಯ ಪುಟ್ಟಸ್ವಾಮಿ, ರಾಮೇಗೌಡ, ಎಲೆಕೆರೆ ಈರೇಗೌಡ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts