More

    ಜನಸ್ಪಂದನ ಯಾತ್ರೆಗೆ ಕೇಂದ್ರ ಸಚಿವ ಷಾ

    ಎಂ.ಕೆ.ಹುಬ್ಬಳ್ಳಿ: ಪಟ್ಟಣದಲ್ಲಿ ಜ.28ರಂದು ಹಮ್ಮಿಕೊಂಡಿ ರುವ ಬಿಜೆಪಿ ಜನಸ್ಪಂದನ ಯಾತ್ರೆಯನ್ನು ಕೇಂದ್ರ ಗೃಹ ಸಚಿವ ಅಮಿತ್ ಷಾ ಉದ್ಘಾಟಿಸಲಿದ್ದಾರೆ ಎಂದು ಕಿತ್ತೂರು ಶಾಸಕ ಮಹಾಂತೇಶ ದೊಡಗೌಡರ ಹೇಳಿದರು.

    ಪಟ್ಟಣದಲ್ಲಿ ಗುರುವಾರ ಹಮ್ಮಿಕೊಂಡಿರುವ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಮುಖ್ಯ ಅತಿಥಿಗಳಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನಕುಮಾರ ಕಟೀಲ್, ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಸೇರಿ ಗಣ್ಯರು ಪಾಲ್ಗೊಳ್ಳಲಿದ್ದಾರೆ. ಕಿತ್ತೂರು, ಖಾನಾಪುರ, ಬೈಲಹೊಂಗಲ ಹಾಗೂ ಬೆಳಗಾವಿ ಗ್ರಾಮೀಣ ವಿಧಾನಸಭಾ ಮತಕ್ಷೇತ್ರದಿಂದ ಪಕ್ಷದ ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರು ಸೇರಿ ಸುಮಾರು ಒಂದು ಲಕ್ಷಕ್ಕೂ ಅಧಿಕ ಜನರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು.
    ಸುಮಾರು 50 ಸಾವಿರ ಜನರಿಗೆ ಆಸನದ ವ್ಯವಸ್ಥೆ, ಊಟ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ. ಮಧ್ಯಾಹ್ನ 1 ಗಂಟೆಯೊಳಗೆ ಎಲ್ಲ ಜನರು ಕಾರ್ಯಕ್ರಮ ನಡೆಯುವ ಸ್ಥಳ ತಲುಪಬೇಕು.
    ಹೆಚ್ಚಿನ ಸಂಖ್ಯೆಯಲ್ಲಿ ಜನರು ಪಾಲ್ಗೊಳ್ಳುವ ಮೂಲಕ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.

    ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಹಾಗೂ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರ ಕೈಗೊಂಡ ಅಭಿವೃದ್ಧಿಪರ ಕಾರ್ಯಗಳನ್ನು ಜನರಿಗೆ ತಿಳಿಸುವ ಉದ್ದೇಶ ಈ ಕಾರ್ಯಕ್ರಮದ್ದಾಗಿದೆ ಎಂದರು.

    ಕಿತ್ತೂರು ಮಂಡಳ ಬಿಜೆಪಿ ಅಧ್ಯಕ್ಷ ಡಾ. ಬಸವರಾಜ ಪರವಣ್ಣವರ, ಬಿಜೆಪಿ ಗ್ರಾಮಾಂತರ ಜಿಲ್ಲೆಯ ಮಾಧ್ಯಮ ಸಂಚಾಲಕ ಎಫ್.ಎಸ್.ಸಿದ್ಧನಗೌಡರ ಮಾತನಾಡಿದರು. ಪ್ರಮುಖರಾದ ಪ್ರಕಾಶ ಮೂಗಬಸವ, ಮಹಾಂತೇಶ ಶೀಲವಂತರ, ಉಳವಪ್ಪ ಉಳಾಗಡ್ಡಿ, ಬಸನಗೌಡ ಶಿದ್ರಾಮನಿ, ಯಲ್ಲಪ್ಪ ವಕ್ಕುಂದ, ಶಿದ್ರಾಮಯ್ಯ ಹಿರೇಮಠ, ಸಕ್ಕರಗೌಡ ಪಾಟೀಲ, ಶಿವಾನಂದ ಹನುಮಸಾಗರ, ಈರಣ್ಣ ವಾರದ, ಬಿ.ಎಫ್.ಕೊಳದೂರ, ಸಂದೀಪ ದೇಶಪಾಂಡೆ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts