More

    ಜನಾಶೀರ್ವಾದ ಯಾತ್ರೆಯಲ್ಲಿ ಕೇಂದ್ರ ಸಚಿವರಿಗೆ ಅದ್ದೂರಿ ಸ್ವಾಗತ ; ಸಿದ್ಧಗಂಗಾ ಮಠಕ್ಕೆ ಸಚಿವ ನಾರಾಯಣಸ್ವಾಮಿ ಭೇಟಿ ; ಸರ್ಕಾರ, ಜನರ ನಡುವಿನ ಕೊಂಡಿಯಾಗಿ ಕೆಲಸ ಮಾಡುವ ಸಂಕಲ್ಪ

    ತುಮಕೂರು ; ಜಿಲ್ಲೆಯಲ್ಲಿ ಜನಾಶೀರ್ವಾದ ಯಾತ್ರೆ ಕೈಗೊಂಡಿರುವ ಸಚಿವ ಎ.ನಾರಾಯಣಸ್ವಾಮಿ ಅವರಿಗೆ ಮಂಗಳವಾರ ಬಿಜೆಪಿ ಜಿಲ್ಲಾ ಘಟಕದಿಂದ ಅದ್ದೂರಿ ಸ್ವಾಗತ ಕೋರಲಾಯಿತು. ಕ್ಯಾತಸಂದ್ರ ಜಾಸ್‌ಟೋಲ್ ಬಳಿ ಪಕ್ಷದ ನೂರಾರು ಪದಾಧಿಕಾರಿಗಳು, ಕಾರ್ಯಕರ್ತರು ಬರಮಾಡಿಕೊಂಡರು.
    ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಶಿವಕುಮಾರ ಶ್ರೀಗಳ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಮಠಾಧ್ಯಕ್ಷ ಸಿದ್ದಲಿಂಗ ಶ್ರೀಗಳ ಆಶೀರ್ವಾದ ಪಡೆದ ನಾರಾಯಣಸ್ವಾಮಿ, ಈ ನೆಲಕ್ಕೆ ಬಂದಾಗ ಸಂಸ್ಕೃತಿ ಹಾಗೂ ಸಾಮಾಜಿಕ ಪ್ರಜ್ಞೆ ಜಾಗೃತವಾಗಲಿದೆ, ಜಿಲ್ಲೆಯ ಜನರ ಪ್ರೀತಿ ಖುಷಿ ನೀಡಿದೆ ಎಂದರು.

    ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ಹಾಗೂ ಜನರ ನಡುವಿನ ಕೊಂಡಿಯಾಗಿ ಕೆಲಸ ಮಾಡುವ ಸಂಕಲ್ಪ ಮಾಡಿದ್ದೇನೆ ಎಂದು ಹೇಳಿದರು.
    30 ವರ್ಷದಿಂದ ಬಿಜೆಪಿ ಸಿದ್ಧಾಂತವನ್ನು ಮರೆತಿಲ್ಲ, ಬದ್ಧತೆ ಹಾಗೂ ಮೌಲ್ಯ ಉಳಿಸಿಕೊಂಡಿದ್ದಕ್ಕೆ ಸಚಿವ ಸ್ಥಾನ ಲಭಿಸಿದೆ. ನನಗೆ ಕೇಂದ್ರ ಮಂತ್ರಿ ಸ್ಥಾನ ಲಭಿಸಿರುವುದು ಆಶ್ಚರ್ಯ ಎನಿಸಿದರೂ ಸಿಕ್ಕ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿರ್ವಹಿಸುವೆ ಎಂದು ಹೇಳಿದರು.

    ಹಿರಿಯ ಕಾರ್ಯಕರ್ತನ ಮನೆಗೆ ಭೇಟಿ: ತುರ್ತು ಪರಿಸ್ಥಿತಿಯಲ್ಲಿ ಹೋರಾಟ ಮಾಡಿ ಕಾರಾಗೃಹ ವಾಸ ಅನುಭವಿಸಿದ್ದ ಹಿರಿಯ ಕಾರ್ಯಕರ್ತ ಸೈಕಲ್ ಶಾಪ್ ನರಸಿಂಹಯ್ಯ ಅವರ ನಿವಾಸಕ್ಕೆ ಭೇಟಿ ನೀಡಿ ಅವರ ಜತೆ ನಾರಾಯಣಸ್ವಾಮಿ ಕೆಲಕಾಲ ಮಾತುಕತೆ ನಡೆಸಿದರು. ನಂತರ ಎಸ್‌ಐಟಿ ಬಡಾವಣೆಯ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ ಪಡಿತರ ವಿತರಣೆ ಮಾಹಿತಿ ಪಡೆದರಲ್ಲದೆ, ಸಾಂಕೇತಿಕವಾಗಿ ಪಡಿತರ ಕೂಡ ವಿತರಿಸಿದರು. ಇದಾದ ಬಳಿಕ ಜಿಲ್ಲಾ ಆಸ್ಪತ್ರೆಯಲ್ಲಿ ಲಸಿಕಾ ಕೇಂದ್ರದಲ್ಲಿ ಕರೊನಾ ಲಸಿಕಾ ಕಾರ್ಯಕ್ರಮ ಪರಿಶೀಲಿಸಿದರು.

    ತೆರೆದ ವಾಹನದಲ್ಲಿ ಸಚಿವ ನಾರಾಯಣಸ್ವಾಮಿ ಅವರನ್ನು ಮೆರವಣಿಗೆ ಮಾಡಲಾಯಿತು. ಬಳಿಕ ಅವರನ್ನು ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನಿಸಿ ಸಭಾ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಯಾತ್ರೆಯಲ್ಲಿ ಸಚಿವರಾದ ಜೆ.ಸಿ.ಮಾಧುಸ್ವಾಮಿ, ಬಿ.ಸಿ.ನಾಗೇಶ್, ಸಂಸದ ಜಿ.ಎಸ್.ಬಸವರಾಜು, ಶಾಸಕರಾದ ಮಸಾಲಜಯರಾಮ್, ಜಿ.ಬಿ.ಜ್ಯೋತಿಗಣೇಶ್, ಡಾ.ಸಿಎಂ.ರಾಜೇಶ್‌ಗೌಡ, ಚಿದಾನಂದ ಎಂ.ಗೌಡ, ಬಿಜೆಪಿ ಜಿಲ್ಲಾಧ್ಯಕ್ಷ ಬಿ.ಸುರೇಶ್‌ಗೌಡ, ಮಾಜಿ ಸಚಿವ ಸೊಗಡು ಶಿವಣ್ಣ, ಮಾಜಿ ಶಾಸಕರಾದ ಕೆ.ಎಸ್.ಕಿರಣ್‌ಕುಮಾರ್, ಡಾ.ಎಂ.ಆರ್.ಹುಲಿನಾಯ್ಕರ್, ಮುಖಂಡರಾದ ಎಂ.ಬಿ.ನಂದೀಶ್, ಬಿ.ಕೆ.ಮಂಜುನಾಥ್, ಎಸ್.ಆರ್.ಗೌಡ, ಲಕ್ಷ್ಮೀಶ್, ಮೇಯರ್ ಬಿ.ಜಿ.ಕೃಷ್ಣಪ್ಪ ಉಪಸ್ಥಿತರಿದ್ದರು.

    ಅದ್ದೂರಿ ಸ್ವಾಗತ ಸಿಕ್ಕಿದೆ: ಸಂಸತ್‌ನಲ್ಲಿ ನೂತನ ಸಚಿವರನ್ನು ಪರಿಚಯಿಸಲು ವಿಪಕ್ಷಗಳು ಅವಕಾಶ ನೀಡದ ಹಿನ್ನೆಲೆಯಲ್ಲಿ ದೇಶದೆಲ್ಲೆಡೆ ಜನಾರ್ಶೀವಾದ ಯಾತ್ರೆ ಕೈಗೊಳ್ಳಲಾಗಿದೆ, ನನಗೆ ಅದ್ದೂರಿ ಸ್ವಾಗತ ಸಿಕ್ಕಿದೆ. ಪ್ರಸ್ತುತ ಕೇಂದ್ರ ಕ್ಯಾಬಿನೆಟ್‌ನಲ್ಲಿ ದಲಿತರು, ಹಿಂದುಳಿದವರು ಹಾಗೂ ಮಹಿಳೆಯರಿಗೆ ಸ್ಥಾನಮಾನ ನೀಡಿರುವುದು ದೇಶದ ಜನರಿಗೆ ಖುಷಿ ನೀಡಿದೆ ಎಂದು ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಹೇಳಿದರು.

    ಒಳಮೀಸಲಾತಿಗೆ ಆಗ್ರಹಿಸಿ ಶಾಸಕನಾಗಿದ್ದಾಗ ಹಾಗೂ ಸಂಸದನಾಗಿದ್ದಾಗಲೂ ಆಗ್ರಹ ಮಾಡಿದ್ದೇನೆ. ಕೇಂದ್ರ ಸರ್ಕಾರದ ಸಚಿವನಾಗಿರುವ ಹಿನ್ನೆಲೆಯಲ್ಲಿ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ವರದಿ ಜಾರಿಗೆ ಶ್ರಮಿಸುತ್ತೇನೆ.
    ಎ.ನಾರಾಯಣಸ್ವಾಮಿ ಕೇಂದ್ರ ಸಚಿವ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts