More

    ಜಾಗತಿಕ ಸಮಸ್ಯೆಗಳಿಗೆ ಸಂವಿಧಾನವೇ ಉತ್ತರ- ನ್ಯಾಯಾಧೀಶೆ ರಾಜೇಶ್ವರಿ ಎನ್.ಹೆಗಡೆ – ವಕೀಲರ ಭವನದಲ್ಲಿ ಪ್ರಜಾಪ್ರಭುತ್ವ ದಿನಾಚರಣೆ

    ದಾವಣಗೆರೆ: ಭಾರತದ ಸಂವಿಧಾನ, ಇಡೀ ಪ್ರಪಂಚದಲ್ಲಿಯೇ ಅತ್ಯಂತ ದೊಡ್ಡದು. ಮಾನವ ಹಕ್ಕುಗಳು, ಸಮಾನತೆ ಮತ್ತು ಸಂಘರ್ಷ ಅಲ್ಲದೆ ಇತರ ಜಾಗತಿಕ ಸಮಸ್ಯೆಗಳಿಗೂ ಸಮರ್ಥ ಉತ್ತರ ನೀಡಲಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ರಾಜೇಶ್ವರಿ ಎನ್.ಹೆಗಡೆ ತಿಳಿಸಿದರು.
    ಜಿಲ್ಲಾ ವಕೀಲರ ಭವನದಲ್ಲಿ ಹಮ್ಮಿಕೊಂಡಿದ್ದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಹಾಗೂ ಲೋಕ ಅದಾಲತ್ ಯಶಸ್ಸಿನ ಅಭಿನಂದನಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
    ಪ್ರಜಾಪ್ರಭುತ್ವ ದಿನವು ಅಭಿವ್ಯಕ್ತಿ ಸ್ವಾತಂತ್ರ್ಯ ಪ್ರತಿಬಿಂಬಿಸಲು ಇರುವ ಸದಾವಕಾಶದ ದಿನವಾಗಿದೆ. ಕಾನೂನಿನ ದೃಷ್ಟಿಯಲ್ಲಿ ಎಲ್ಲ ಜನರ ಸಮಾನತೆ ರಕ್ಷಿಸುವ ಮತ್ತು ದೇಶದ ಶಾಂತಿ ಕಾಪಾಡುವ ಅಂಶಗಳು ಭಾರತದ ಸಂವಿಧಾನದಲ್ಲಿವೆ ಎಂದರು.
    ಸುಶಿಕ್ಷಿತ ಸಮಾಜ, ಪ್ರಜ್ಞಾವಂತ ವಕೀಲರ ಸಮುದಾಯವು ಬಲಿಷ್ಠ ಪ್ರಜಾಸತ್ತಾತ್ಮಕ ಸಮಾಜಗಳ ಹೃದಯ ಭಾಗವಾಗಿದೆ ಎಂದು ತಿಳಿಸಿದರು.
    ಹಿರಿಯ ಸಿವಿಲ್ ನ್ಯಾಯಾಧೀಶ ಮಹಾವೀರ ಮ ಕರೆಣ್ಣವರ ಮಾತನಾಡಿ, ಲೋಕ ಅದಾಲತ್ ನಲ್ಲಿ ದಾಖಲೆ ಪ್ರಮಾಣದ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ. ಇದಕ್ಕೆಲ್ಲ ವಕೀಲರ ಸಹಕಾರವೇ ಕಾರಣ. ರಾಜ್ಯ ಉಚ್ಚ ನ್ಯಾಯಾಲಯದ ನ್ಯಾಯಾಧೀಶರು ಪ್ರಶಂಸೆ ವ್ಯಕಪಡಿಸಿದ್ದಾರೆ. ಇನ್ನೂ ಹೆಚ್ಚಿನ ಪ್ರಕರಣಗಳನ್ನು ಬಗೆಹರಿಸಿ ಈ ದಾಖಲೆಯನ್ನು ಮುರಿಯಬೇಕು ಎಂದು ಆಶಿಸಿದರು
    ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಲ್.ಎಚ್. ಅರುಣ್ ಕುಮಾರ್ ಮಾತನಾಡಿ, ಎಲ್ಲರೂ ಸಂವಿಧಾನದ ಆಶಯಗಳನ್ನು ಅರಿತು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿಹಿಡಿಯುವ ಕೆಲಸ ಮಾಡಬೇಕಿದೆ. ದೇಶದ ಆಗುಹೋಗುಗಳಲ್ಲಿ ಸಾರ್ವಜನಿಕರ ಭಾಗವಹಿಸುವಿಕೆಯ ಮಹತ್ವವನ್ನು ತಿಳಿಸುವ ಮತ್ತು ಆರೋಗ್ಯಪೂರ್ಣ ಪ್ರಜಾಪ್ರಭುತ್ವವನ್ನು ಮುನ್ನಡೆಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಹೇಳಿದರು.
    ಕಾರ್ಯಕ್ರಮದಲ್ಲಿ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಜಿ.ವಿ.ವಿಜಯಾನಂದ, 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಆರ್.ಎನ್.ಪ್ರವೀಣ್ ಕುಮಾರ್, ಕೌಟುಂಬಿಕ ನ್ಯಾಯಾಲಯದ ನ್ಯಾಯಾಧೀಶ ದಶರಥ, ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಎನ್.ಶ್ರೀಪಾದ್, ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶ ಶಿವಪ್ಪ ಗಂಗಪ್ಪ ಸಲಗರೆ ಇದ್ದರು.
    ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘದ ಸಹಯೋಗದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts