More

    ಜಾತ್ರೆಗಳು ನಾಡಿನ ಸಂಸ್ಕೃತಿಯ ಪ್ರತೀಕ; ಮಾಜಿ ಶಾಸಕ ಜೆ.ನರಸಿಂಹಸ್ವಾಮಿ ಅಭಿಮತ

    ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರದಲ್ಲಿ ದಶಕಗಳಿಂದ ನಡೆದುಕೊಂಡು ಬಂದಿರುವ ನಾಟಕೋತ್ಸವಗಳಲ್ಲಿ ಅಸಂಖ್ಯಾತ ಕಲಾವಿದರು ಹೊರಹೊಮ್ಮಿದ್ದಾರೆ. ಜಾತ್ರೆಗಳು ನಾಡಿನ ಸಂಸ್ಕೃತಿಯ ಪ್ರತೀಕಗಳಾಗಿವೆ ಎಂದು ಮಾಜಿ ಶಾಸಕ ಜೆ.ನರಸಿಂಹಸ್ವಾಮಿ ಹೇಳಿದರು.

    ಪ್ರಸನ್ನ ವೆಂಕಟರಮಣಸ್ವಾಮಿ ಜಾತ್ರಾ ಸಾಂಸ್ಕೃತಿಕ ಸಮಿತಿ, ಕರ್ನಾಟಕ ಯಕ್ಷಗಾನ ಅಕಾಡೆಮಿ, ಕನ್ನಡ ಜಾಗೃತ ಪರಿಷತ್ತು, ದೊಡ್ಡಬಳ್ಳಾಪುರ ತಾಲೂಕು ಕಲಾವಿದರ ಸಂಘ, ಹಾಗೂ ಅನಿಕೇತನ ಟ್ರಸ್ಟ್ ಸಹಯೋಗದೊಂದಿಗೆ ನಗರದ ತೇರಿನ ಬೀದಿ ವಿಶ್ವೇಶ್ವರಯ್ಯ ವೃತ್ತದ ಮೈದಾನದಲ್ಲಿ ಮಂಗಳವಾರ ರಾತ್ರಿ ಏರ್ಪಡಿಸಿದ್ದ ನಾಟಕೋತ್ಸವ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳ ಸಮಾರೋಪದಲ್ಲಿ ಮಾತನಾಡಿದರು. ನಾಟಕೋತ್ಸವಗಳನ್ನು ಉಳಿಸಿ ಬೆಳೆಸಿಕೊಂಡು ಹೋಗಬೇಕಾಗಿದೆ ಎಂದರು.

    ಇಂದು ಕಲೆಯನ್ನು ಪ್ರದರ್ಶಿಸುವ ಹಲವಾರು ಕಲಾವಿದರಿದ್ದಾರೆ.ಆದರೆ ಕಲೆಯನ್ನು ಆಸ್ವಾಸುವ ಸಹೃದಯರ ಸಂಖ್ಯೆ ಕಡಿಮೆಯಾಗುತ್ತಿರುವುದು ವಿಷಾದಕರ ಸಂಗತಿ ಎಂದು ಎಂದು ನಗರಸಭೆ ಮಾಜಿ ಅಧ್ಯಕ್ಷ ಕೆ.ಬಿ.ಮುದ್ದಪ್ಪ ಹೇಳಿದರು. ನಾಡಿನ ಸಂಸ್ಕೃತಿಗಳನ್ನು ಪರಿಚಯಿಸುವ ನೈಜ ಕಲೆಯನ್ನು ಪೌರಾಣಿಕ ನಾಟಕೋತ್ಸವಗಳಲ್ಲಿ ಕಾಣಬಹುದು. ಕಲಾ ಪ್ರದರ್ಶನಕ್ಕೆ ಉತ್ತಮ ವೇದಿಕೆಗಳ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟರು.

    ತಾಲೂಕು ಪಂಚಾಯಿತಿ ಸದಸ್ಯ ಸುನಿಲ್ ಕುಮಾರ್ ಮಾತನಾಡಿ, ಕಲಾವಿದರು ಸ್ವಂತ ಹಣ ಹಾಕಿ ನಾಟಕಗಳಲ್ಲಿ ಅಭಿನಯಿಸಬೇಕಾದ ಪರಿಸ್ಥಿತಿಯಿದೆ. ಕಲಾವಿದರಿಗೆ ಸಮುದಾಯದ ನೆರವು, ಪ್ರೋತ್ಸಾಹ ದೊರೆಯಬೇಕಿದೆ ಎಂದರು.

    ತಾಲೂಕಿನ ಸಂಗೀತ ಶಿಕ್ಷಕಿ ವಿದುಷಿ ಶಾರದಾ ಶ್ರೀಧರ್, ರಂಗ ಕಲಾವಿದರಾದ ಚಿನ್ನಣ್ಣ, ಕೆ.ಎನ್.ತಮ್ಮಣ್ಣ, ಚಿಕ್ಕಹನುಮೇಗೌಡ, ಭಜನೆ ಗಾಯಕಎ.ಕೃಷ್ಣಪ್ಪ ಅವರನ್ನು ಸನ್ಮಾನಿಸಲಾಯಿತು.

    ತಾಪಂ ಸದಸ್ಯ ರವಿ ಹಸನ್ ಘಟ್ಟ, ಜೆಡಿಎಸ್ ಜಿಲ್ಲಾಧ್ಯಕ್ಷ ಬಿ.ಮುನೇಗೌಡ, ಬಿರ್ಲಾ ಸೂಪರ್ ಕಾರ್ಖಾನೆಯ ಆಡಳಿತ ವ್ಯವಸ್ಥಾಪಕ ಎಂ.ಎಸ್.ಮಂಜುನಾಥ್, ಲಯನ್ಸ್ ಕ್ಲಬ್ ಅಧ್ಯಕ್ಷ ಕೆ.ಮೋಹನ್ ಕುಮಾರ್, ಖಜಾಂಚಿ ಕೆ.ಜಿ.ಗೋಪಾಲ್, ನಗರಸಭಾ ಮಾಜಿ ಸದಸ್ಯರಾದ ಎಚ್.ಎಸ್.ಶಿವಶಂಕರ್, ಆರ್.ಕೆಂಪರಾಜು, ದೊಡ್ಡತುಮಕೂರು ಗ್ರಾ.ಪಂ. ಮಾಜಿ ಅಧ್ಯಕ್ಷ ಟಿ.ಜಿ.ಮಂಜುನಾಥ್,ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ನಗರ ಅಧ್ಯಕ್ಷ ಎಸ್.ಲಕ್ಷ್ಮೀನಾರಾಯಣ್, ಶ್ರೀ ರಾಮ ಆಸ್ಪತ್ರೆಯ ವೈದ್ಯ ಡಾ.ಎಚ್.ಜಿ.ವಿಜಯ ಕುಮಾರ್, ತಾಲೂಕು ಕಲಾವಿದರ ಸಂಘದ ಪ್ರಧಾನ ಕಾರ್ಯದರ್ಶಿ ಬಿ.ಚಂದ್ರಶೇಖರ್ ಮಲ್ಲಾತಹಳ್ಳಿ, ನಿರ್ದೇಶಕ ಸಿ.ಎಚ್.ಕೃಷ್ಣಮೂರ್ತಿ, ಸಾಂಸ್ಕೃತಿಕ ಸಮಿತಿ ಡಿ.ಶ್ರೀಕಾಂತ,ನಂದ ಕುಮಾರ್, ಪ್ರಕಾಶ್ ರಾವ್, ವೆಂಕಟೇಶ್, ಬಾಲಕೃಷ್ಣ, ಕಲಾವಿದೆ ನಾಗರತ್ಮಮ್ಮ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts