More

    ಜಿಎಸ್‌ಟಿ ವಿರೋಧಿಸಿ ರೈತರಿಂದ ಧರಣಿ

    ಚಾಮರಾಜನಗರ: ರೈತರು ಮತ್ತು ಜನಸಾಮಾನ್ಯರು ದಿನ ನಿತ್ಯ ಬಳಸುವ ಅಗತ್ಯ ವಸ್ತುಗಳ ಮೇಲೆ ಜಿಎಸ್‌ಟಿ ವಿಧಿಸಿರುವುದನ್ನು ಖಂಡಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾ ಶಾಖೆ ವತಿಯಿಂದ ನಗರದಲ್ಲಿ ಗುರುವಾರ ಪ್ರತಿಭಟನೆ ನಡೆಯಿತು.


    ನಗರದ ಶ್ರೀ ಚಾಮರಾಜೇಶ್ವರ ದೇವಸ್ಥಾನದ ಮುಂಭಾಗದ ಆವರಣದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಅಲ್ಲಿಂದ
    ಮೆರವಣಿಗೆ ಹೊರಟು ಶ್ರೀ ಭುವನೇಶ್ವರಿ ವೃತ್ತ, ಬಿ.ರಾಚಯ್ಯ ಜೋಡಿ ರಸ್ತೆ ಮೂಲಕ ಜಿಲ್ಲಾಡಳಿತ ಭವನದ ಆವರಣಕ್ಕೆ ತಲುಪಿದರು. ಕೇಂದ್ರ, ರಾಜ್ಯ ಸರ್ಕಾರದ ವಿರುದ್ಧ ೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.


    ಕೇಂದ್ರ ಮತ್ತು ರಾಜ್ಯ ಸರ್ಕಾರ ರೈತರು ಬಳಸುವ ಉಪಕರಣಗಳು, ರಸಗೊಬ್ಬರ, ಕ್ರಿಮಿನಾಶಕ, ಬಿತ್ತನೆ ಬೀಜಗಳು ಹಾಗೂ
    ಹಾಲು, ಮೊಸರು, ಮಜ್ಜಿಗೆಯಂತಹ ದಿನಬಳಕೆ ಅಗತ್ಯ ಆಹಾರ ವಸ್ತುಗಳ ಮೇಲೆ ಜಿಎಸ್‌ಟಿ ವಿಧಿಸಿವೆ. ಇದರಿಂದ ರೈತರು ಮತ್ತು ಜನ ಸಾಮಾನ್ಯರು ಜೀವನ ನಡೆಸಲು ಕಷ್ಟಕರವಾಗಿದೆ. ಆದ್ದರಿಂದ ಜಿಎಸ್‌ಟಿ ಎಂಬ ತೆರಿಗೆ ಪದ್ಧತಿಯನ್ನು ಸರ್ಕಾರ ಈ ಕೂಡಲೇ ರದ್ದಪಡಿಸಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು.

    ಪ್ರತಿಭಟನೆಯಲ್ಲಿ ರಾಜ್ಯ ರೈತ ಸಂಘದ ಜಿಲಾಧ್ಯಕ್ಷ ಹೊನ್ನೂರು ಪ್ರಕಾಶ್, ಕಡಬೂರು ಮಂಜು, ವಿಜಯ್ ಕುಮಾರ್, ಅಂಬಳೆ ಕುಮಾರ್, ಚಗಂಡಿ ಕರಿಯಪ್ಪ, ರಾಘು ಕಲ್ಪುರ, ಮಹದೇವಪ್ಪ ಸೇರಿದಂತೆ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts