More

    ಜಿದ್ದಾಜಿದ್ದಿನ ಮಧ್ಯೆ ಛತ್ರಪತಿ ಶಿವಾಜಿ ಪ್ರತಿಮೆ ಅನಾವರಣ

    ಬೆಳಗಾವಿ: ಮಾಜಿ ಸಚಿವ ರಮೇಶ ಜಾರಕಿಹೊಳಿ ಮತ್ತು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಮಧ್ಯೆ ರಾಜಕೀಯ ಸಮರಕ್ಕೆ ಕಾರಣವಾಗಿದ್ದ ರಾಜಹಂಸಗಡ ಕೋಟೆಯಲ್ಲಿನ
    ಛತ್ರಪತಿ ಶಿವಾಜಿ ಮಹಾರಾಜ ಪ್ರತಿಮೆ ಲೋಕಾರ್ಪಣೆ ಕಾರ್ಯಕ್ರಮ ಕೊನೆಗೂ ಸರ್ಕಾರದ ವತಿಯಿಂದ ಗುರುವಾರ ಅದ್ದೂರಿಯಾಗಿ ಜರುಗಿತು.

    ತನ್ನ ಕ್ಷೇತ್ರದಲ್ಲಿ ಶಿವಾಜಿ ಪ್ರತಿಮೆ ಸ್ಥಾಪನೆ ಮಾಡಿಸಿದ್ದು ನಾನು ಎಂದು ಲಕ್ಷ್ಮೀ ಹೇಳಿಕೊಂಡರೆ, ಮಾಜಿ ಶಾಸಕ ಸಂಜಯ ಪಾಟೀಲ ಅವರು ನನ್ನ ಅವಧಿಯಲ್ಲಿ ಅನುದಾನ ಕೊಡಿಸಿದ್ದು ನಾನೇ ಎಂದು ಹೇಳಿಕೊಂಡಿದ್ದರು. ಇದು ಕೊನೆಗೆ ಹೆಬ್ಬಾಳ್ಕರ್ ಮತ್ತು ಅವರ ಬದ್ಧ ರಾಜಕೀಯ ವಿರೋಧಿ ರಮೇಶ ಜಾರಕಿಹೊಳಿ ಅವರ ನಡುವಿನ ಜಟಾಪಟಿಯಾಗಿ ಪರಿವರ್ತನೆಯಾಗಿತ್ತು. ಈ ನಡುವೆ, ಮಾ.5ರಂದು ಪ್ರತಿಮೆ ಲೋಕಾರ್ಪಣೆ ಮಾಡುವುದಾಗಿ ಲಕ್ಷ್ಮೀ ಕಾರ್ಯಕ್ರಮ ಆಯೋಜನೆ ಮಾಡಿದ್ದಾರೆ.

    ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿ ಕಾಂಗ್ರೆಸ್‌ನ ಘಟಾನುಘಟಿ ನಾಯಕರಿಗೆ ಆಹ್ವಾನ ನೀಡಿದ್ದಾರೆ. ಈಗ ರಾಜಹಂಸಗಡ ಕೋಟೆಗೆ ತೆರಳುವ ಮಾರ್ಗದಲ್ಲಿ ದೊಡ್ಡ ಮಟ್ಟದಲ್ಲಿ ಪ್ಲೆಕ್ಸ್‌ಗಳು ರಾರಾಜಿಸುತ್ತಿವೆ. ಪೈಪೋಟಿಗೆ ಬಿದ್ದ ರೀತಿಯಲ್ಲಿ ಲಕ್ಷ್ಮೀ, ಸಂಜಯ, ಜಾರಕಿಹೊಳಿ ಬೆಂಬಲಿಗರು ಪ್ಲೆಕ್ಸ್ ಹಾಕಿದ್ದಾರೆ.
    ರಾಜಹಂಸಗಡದ ಶಿವಾಜಿ ಮೂರ್ತಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗುರುವಾರ ನಗಾರಿ ಬಾರಿಸುವ ಮೂಲಕ ಉದ್ಘಾಟಿಸಿದರು. ಇಂತಹ ಅದ್ಭುತ ಜಾಗ ಇರುವುದು ನನಗೆ ಗೊತ್ತೇ ಇರಲಿಲ್ಲ. ಕೆಲವರ ಆಡಳಿತಕ್ಕೆ ಸಿಕ್ಕು ಅಭಿವೃದ್ಧಿ ಮರೀಚಿಕೆಯಾಗಿತ್ತು. ಈ ಕೋಟೆಯನ್ನು ಅಭಿವೃದ್ಧಿಪಡಿಸಿ ಪ್ರವಾಸಿ ತಾಣವನ್ನಾಗಿ ಮಾಡಲಾಗುವುದು ಎಂದರು.

    ಬಿಎಸ್‌ವೈ ಸಿಎಂ ಇದ್ದಾಗ ಹಣ ಬಿಡುಗಡೆ: ರಾಜಹಂಸಗಡ ಕೋಟೆಯ ಅಭಿವೃದ್ಧಿಗೆ 2008ರಲ್ಲಿ ಅಂದಿನ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು 14 ಕೋಟಿ ರೂ. ಮಂಜೂರು ಮಾಡಿದರು. ಜನಾರ್ದನ  ರೆಡ್ಡಿ ಅವರು ಅಂದಿನ ಪ್ರವಾಸೋದ್ಯಮ ಇಲಾಖೆಯ ಸಚಿವರಾಗಿದ್ದರು.

    ಶಾಸಕ ಸಂಜಯ ಪಾಟೀಲ ಅವರ ಪ್ರಯತ್ನದ ಫಲವಾಗಿ ಕೋಟೆ ಆವರಣದಲ್ಲಿ ಮೂಲ ಸೌಕರ್ಯ ಒದಗಿಸಲು ಅನುದಾನ ಬಿಡುಗಡೆ ಮಾಡಲಾಗಿತ್ತು. ಈಗ ಕೋಟೆ ಅಭಿವೃದ್ಧಿಗೆ ನಿಗದಿಯಾಗಿರುವ ಅನುದಾನದ ಜತೆಗೆ ಹೆಚ್ಚುವರಿಯಾಗಿ 5 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗುವುದು ಎಂದರು.

    ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಪ್ರವಾಸೋದ್ಯಮ ಇಲಾಖೆ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ, ಸಂಸದೆ ಮಂಗಲ ಅಂಗಡಿ, ಶಾಸಕರಾದ ರಮೇಶ ಜಾರಕಿಹೊಳಿ, ಅನಿಲ ಬೆನಕೆ, ಅಭಯ ಪಾಟೀಲ, ಪ್ರಾದೇಶಿಕ ಆಯುಕ್ತ  ಎಂ.ಜಿ. ಹಿರೇಮಠ, ಜಿಲ್ಲಾಧಿಕಾರಿ ನಿತೇಶ ಪಾಟೀಲ, ವಿದ್ಯಾವತಿ ಭಜಂತ್ರಿ, ಬಸವರಾಜ ಕುಪ್ಪಸಗೌಡರ ಹಾಗೂ ಗ್ರಾಮಸ್ಥರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts