More

    ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಿದ್ಧತೆ; ನಗರದ ಬಸವ ಭವನದಲ್ಲಿ 16,17ಕ್ಕೆ ಕಾರ್ಯಕ್ರಮ ತ.ನ.ಪ್ರಭುದೇವ್ ಸಮ್ಮೇಳನಾಧ್ಯಕ್ಷ

    ದೊಡ್ಡಬಳ್ಳಾಪುರ: 22ನೇ ಬೆಂ.ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ನಗರದ ಬಸವ ಭವನದಲ್ಲಿ ಮಾ.16 ಮತ್ತು 17ರಂದು ನಡೆಯಲಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷೆ ಪ್ರಮೀಳಾ ಮಹದೇವ್ ತಿಳಿಸಿದರು.

    ನಗರದ ಪ್ರವಾಸಿ ಮಂದಿರದಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ 22ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಚನ ಬಿಡುಗಡೆ ಮಾಡಿ ಮಾತನಾಡಿದರು.

    ಎರಡು ದಿನಗಳ ಕಾಲ ನಡೆಯುವ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರನ್ನಾಗಿ ಹಿರಿಯ ಕನ್ನಡಪರ ಹೋರಾಟಗಾರ, ನಗರಸಭೆ ಮಾಜಿ ಅಧ್ಯಕ್ಷ ತ.ನ.ಪ್ರಭುದೇವ್ ಅವರನ್ನು ಆಯ್ಕೆ ಮಾಡಲಾಗಿದ್ದು, ಮಾ.16ರಂದು ತಹಸೀಲ್ದಾರ್ ಟಿ.ಎಸ್.ಶಿವರಾಜ್ ಧ್ವಜಾರೋಹಣ ನಡೆಸುವ ಮೂಲಕ ಕಾರ್ಯಾಕ್ರಮಕ್ಕೆ ಚಾಲನೆ ನೀಡಲಿದ್ದಾರೆ.
    ನಗರದ ನೆಲದಾಂಜನೇಯ ದೇವಾಲಯದಿಂದ ಪ್ರಮುಖ ಬೀದಿಗಳಲ್ಲಿ ಅಧ್ಯಕ್ಷರ ಮೆರವಣಿಗೆ ನಡೆಯಲಿದ್ದು, ಬಸವ ಭವನದಲ್ಲಿ ನಡೆಯುವ ವೇದಿಕೆ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಆರ್.ಆಶೋಕ್ ಉದ್ಘಾಟಿಸಲಿದ್ದಾರೆ. ನಿವೃತ್ತ ಪ್ರಾಧ್ಯಾಪಕ ಎಂ.ಜಿ.ಚಂದ್ರಶೇಖರಯ್ಯ ಅಧ್ಯಕ್ಷತೆಯಲ್ಲಿ ನಾಡು, ನುಡಿ, ಸಂಸ್ಕೃತಿ ಕುರಿತಾದ ವಿಚಾರಗೋಷ್ಠಿ ನಡೆಯಲಿದೆ. ನಂತರ ಮಾಜಿ ಸಚಿವೆ ರಾಣಿ ಸತೀಶ್ ಅಧ್ಯಕ್ಷತೆಯಲ್ಲಿ ಮಹಿಳಾಗೋಷ್ಠಿ ನಡೆಯಲಿದೆ. ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.

    ಮಾ.17ರಂದು ಶಾಶ್ವತ ನೀರಾವರಿ ಹೋರಾಟ ಸಮಿತಿ ಜಿಲ್ಲಾ ಮುಖಂಡೆ ಸುಲೋಚನಮ್ಮ ವೆಂಕಟರೆಡ್ದಿ ಅಧ್ಯಕ್ಷತೆಯಲ್ಲಿ ಕೃಷಿ, ನೀರಾವರಿ, ನೇಕಾರಿಕೆ ಕುರಿತು ವಿಚಾರಗೋಷ್ಠಿ ನಡೆಯಲಿದೆ. ನಂತರ ಸಮ್ಮೇಳನದ ಅಧ್ಯಕ್ಷ ತ.ನ.ಪ್ರಭುದೇವ್ ಅವರೊಂದಿಗೆ ಸಂವಾದ ಕಾರ್ಯಕ್ರಮ ನಡೆಯಲಿದ್ದು, ಪ್ರೊ.ಚಂದ್ರಪ್ಪ ಅಧ್ಯಕ್ಷತೆಯಲ್ಲಿ ನಡೆಯುವ ಕವಿಗೋಷ್ಠಿಯಲ್ಲಿ ಸ್ವಿಡ್ಜರ್‌ಲ್ಯಾಂಡ್, ಕೀನ್ಯ ದೇಶದ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ, ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಸುಮಾರು 40 ಮಂದಿಯನ್ನು ಸನ್ಮಾನಿಸಲಾಗುತ್ತಿದೆ.
    ಸಾಹಿತಿ ವಿ.ನಾಗೇಂದ್ರ ಪ್ರಸಾದ್ ಅಧ್ಯಕ್ಷತೆಯಲ್ಲಿ ಸಮಾರೋಪ ನಡೆಯಲಿದೆ. ಎರಡು ದಿನಗಳ ಸಮ್ಮೆಳನದಲ್ಲಿ ಚಿತ್ರ ನಟರು, ಸಾಹಿತಿಗಳು, ಕವಿಗಳು, ವಿಚಾರವಾದಿಗಳು ಭಾಗವಹಿಸುತ್ತಿದ್ದು, ಸಾಂಸ್ಕೃತಿಕ ಕಾರ್ಯಕ್ರಮ, ಪುಸ್ತಕ ಮಳಿಗೆ, ಸ್ತ್ರೀ ಶಕ್ತಿ ಗುಂಪುಗಳು ತಯಾರಿಸಿರುವ ಕರಕುಶಲ ವಸ್ತು ಪ್ರದರ್ಶನಕ್ಕೆ ವೇದಿಕೆ ಕಲ್ಪಿಸಲಾಗಿದೆ ಎಂದರು.

    ತಾಪಂ ಅಧ್ಯಕ್ಷ ಡಿ.ಸಿ.ಶಶಿಧರ್, ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಗೌರವ ಕಾರ್ಯದರ್ಶಿ ವಿ.ಸಿ.ಜ್ಯೋತಿಕುಮಾರ್, ಕೋಶಾಧ್ಯಕ್ಷೆ ವಿ.ನಿರ್ಮಲಾ, ಕಾರ್ಯಾಧ್ಯಕ್ಷ ತರಿದಾಳ್ ಶ್ರೀನಿವಾಸ್, ಮಾಜಿ ಅಧ್ಯಕ್ಷ ಖಲೀಲ್ ಉಲ್ಲಾ ಖಾನ್, ಡಾ.ರಾಜ್‌ಕುಮಾರ್ ಅಭಿಮಾನಿಗಳ ಸಂಘ ಅಧ್ಯಕ್ಷ ಸು.ನರಸಿಂಹಮೂರ್ತಿ, ಕರವೇ ಮುಖಂಡರಾದ ರಾಜಘಟ್ಟ ರವಿ, ಎಂ.ಮುನೇಗೌಡ, ಎನ್.ಹನುಮಂತರೆಡ್ಡಿ, ಕನ್ನಡ ಜಾಗೃತ ಪರಿಷತ್ ಅಧ್ಯಕ್ಷ ಡಿ.ವಿ.ಅಶ್ವತ್ಥಪ್ಪ ಮತ್ತಿತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts