More

    ಜಿಲ್ಲಾ ನ್ಯಾಯಾಲಯಕ್ಕೆ ಸಿಜೆ ಭೇಟಿ

    ಧಾರವಾಡ: ನ್ಯಾಯಾಲಯ ಕಲಾಪಗಳು ಅ. 12ರಿಂದ ಪ್ರಾರಂಭವಾಗುವ ಹಿನ್ನೆಲೆಯಲ್ಲಿ ಕರೊನಾ ನಿಯಂತ್ರಣದ ಮಾರ್ಗಸೂಚಿ ಅಳವಡಿಕೆಯನ್ನು ಪರಿಶೀಲಿಸಲು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಅಭಯ ಶ್ರೀನಿವಾಸ ಓಕಾ ಅವರು ನಗರದ ಜಿಲ್ಲಾ ನ್ಯಾಯಾಲಯ, ಸಿವಿಲ್ ನ್ಯಾಯಾಲಯ ಆವರಣ ಹಾಗೂ ವಕೀಲರ ಸಂಘಕ್ಕೆ ಶುಕ್ರವಾರ ಭೇಟಿ ನೀಡಿದರು.

    ನಿಬಂಧನೆಗೊಳಪಟ್ಟು ನಿತ್ಯ ಐದು ಜನ ಸಾಕ್ಷಿಗಳ ವಿಚಾರಣೆ ಕೈಗೊಳ್ಳಲು ಅವಕಾಶವಿರುವುದರಿಂದ ಈ ಹಂತದಲ್ಲಿ ಕೋವಿಡ್ ನಿಯಂತ್ರಣದ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಬೇಕು. ಸಾಕ್ಷಿಗಳು, ಕಕ್ಷಿದಾರರು, ವಕೀಲರು, ಸಿಬ್ಬಂದಿ ಎಲ್ಲರ ಆರೋಗ್ಯ ಮುಖ್ಯವಾಗಿರುವುದರಿಂದ ಮಾರ್ಗಸೂಚಿ ಅನುಸಾರ ನ್ಯಾಯಾಲಯದ ಪ್ರವೇಶ, ಪ್ರಕರಣ ದಾಖಲಿಸುವಿಕೆ, ವಿಚಾರಣೆ ಕೈಗೊಳ್ಳಬೇಕು ಎಂದು ಸೂಚಿಸಿದರು.

    ಹೈಕೋರ್ಟ್​ನ ಮಹಾವಿಲೇಖನಾಧಿಕಾರಿ ರಾಜೇಂದ್ರ ಬಾದಾಮಿಕರ್, ಧಾರವಾಡ ಪೀಠದ ನ್ಯಾಯಮೂರ್ತಿಗಳಾದ ನರೇಂದ್ರಕುಮಾರ್, ವಿ. ಶ್ರೀಶಾನಂದ, ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶ ಉಮೇಶ ಅಡಿಗ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಆರ್.ಎಸ್. ಚಿನ್ನಣ್ಣವರ, ಪೊಲೀಸ್ ಆಯುಕ್ತ ಆರ್. ದಿಲೀಪ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವರ್ತಿಕಾ ಕಟಿಯಾರ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts