More

    ಜಿಲ್ಲಾ ಬಿಜೆಪಿಗೆ ಅಮಿತ್ ಷಾ ಡೋಸ್?

    ಬೆಳಗಾವಿ: ರಾಜ್ಯ ರಾಜಕೀಯ ಪ್ರಮುಖ ಪಾತ್ರ ವಹಿಸಿಕೊಂಡು ಬರುತ್ತಿರುವ ಬೆಳಗಾವಿ ಜಿಲ್ಲೆಯ ರಾಜಕಾರಣದ ಮೇಲೆ ಕಣ್ಣೀಟ್ಟಿರುವ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ಇದೀಗ ಪಕ್ಷದಲ್ಲಿ ಭಿನ್ನಾಭಿಪ್ರಾಯ, ಒಳಜಗಳ ಪರಿಹರಿಸಲು ಪ್ರತ್ಯೇಕ ಸಭೆಗಳನ್ನು ನಡೆಸಲಿದ್ದಾರೆ. ಅಲ್ಲದೆ, ಆರ್‌ಎಸ್‌ಎಸ್ ಪ್ರಮುಖರೊಂದಿಗೆ ಗೌಪ್ಯ ಸಭೆ ಕೂಡ ಆಯೋಜಿಸಿದ್ದಾರೆ.

    ಜಿಲ್ಲೆಯ 18 ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲುವುದು ಬಿಜೆಪಿಗೆ ಅನಿವಾರ್ಯವಾಗಿದೆ. ಅಲ್ಲದೆ, ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ 150 ಸ್ಥಾನಗಳಲ್ಲಿ ಗೆಲುವು ಸಾಧಿಸುವಲ್ಲಿ ಬೆಳಗಾವಿ ಜಿಲ್ಲೆಯ ರಾಜಕಾರಣ ಪ್ರಮುಖ ಪಾತ್ರ ವಹಿಸಲಿದೆ. ಅಲ್ಲದೆ, ಪಕ್ಕದ ರಾಜಕೀಯ ಮೇಲೆ ಪರಿಣಾಮ ಉಂಟು ಮಾಡಲಿದೆ. ಹಾಗಾಗಿ ಜ.28ರಂದು ನಗರದ ಖಾಸಗಿ ಹೋಟೆಲ್‌ನಲ್ಲಿ ಜಿಲ್ಲೆಯ ಹಾಲಿ, ಮಾಜಿ ಸಚಿವರು, ಶಾಸಕರು ಹಾಗೂ ಪಕ್ಷದ ಮುಖಂಡರು, ಕಾರ್ಯಕರ್ತರೊಂದಿಗೆ ಬರೋಬ್ಬರಿ 3 ಗಂಟೆಗಳ ಕಾಲ ಪ್ರತ್ಯೇಕ ಸಭೆ ನಡೆಸಲಿದ್ದಾರೆ. ಕಳೆದ ವರ್ಷ ವಿಧಾನ ಪರಿಷತ್ ಚುನಾವಣೆ ಸಂದರ್ಭ ಪಕ್ಷದ ಮುಖಂಡರ ಮಧ್ಯೆದ ಭಿನ್ನಾಭಿಪ್ರಾಯಗಳಿಂದಾಗಿ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಸೋಲು ಅನುಭವಿಸಬೇಕಾಯಿತು. ಇದು ವಿಧಾನಸಭೆ ಚುನಾವಣೆಯಲ್ಲಿ ಮರುಕಳಿಸಬಾರದು ಎಂಬುದು ಪಕ್ಷದ ಮುಖಂಡರ ಉದ್ದೇಶವಾಗಿದೆ.

    ಈಗಾಗಲೇ ಹುಕ್ಕೇರಿ, ಸವದತ್ತಿ, ಬೈಲಹೊಂಗಲ, ಬೆಳಗಾವಿ ಗ್ರಾಮೀಣ, ಯಮಕನಮರಡಿ, ಅಥಣಿ, ಖಾನಾಪುರ, ರಾಮದುರ್ಗ, ಚಿಕ್ಕೋಡಿ ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿಯಿಂದ ಸ್ಪರ್ಧಿಸಲು ಆಕಾಂಕ್ಷಿಗಳ ಸಂಖ್ಯೆ ಹೆಚ್ಚಾಗಿದೆ. ಅಲ್ಲದೆ, ಕೆಲ ಆಕಾಂಕ್ಷಿತ ಅಭ್ಯರ್ಥಿಗಳು ಚುನಾವಣೆಯ ಪೂರ್ವ ತಯಾರಿ ಕೂಡ ಆರಂಭಿಸಿದ್ದಾರೆ. ಇದು ಪಕ್ಷದಲ್ಲಿನ ಹಾಲಿ, ಮಾಜಿ ಶಾಸಕರು ಹಾಗೂ ಸ್ಥಳೀಯ ಮುಖಂಡರ ನಡುವೆ ವೈಮನಸ್ಸು ಉಂಟು ಮಾಡಿದೆ. ಪಕ್ಷದಲ್ಲಿ ಉಂಟಾಗಿರುವ ಒಳಜಗಳ ಚುನಾವಣೆ ವೇಳೆ ವಿರೋಧಿ ಪಕ್ಷಗಳ ಗೆಲುವಿಗೆ ಅನುಕೂಲ ಕಲ್ಪಿಸಿಕೊಡಬಾರದು ಮತ್ತು ಕಳೆದ ವಿಧಾನಪರಿಷತ್‌ನಲ್ಲಿ ಪಕ್ಷದಲ್ಲಿ ಉಂಟಾದ ಗೊಂದಲ, ಸೋಲು ವಿಧಾನಸಭೆ ಚುನಾವಣೆಯಲ್ಲಿ ಮರುಕಳಿಸಬಾರದು ಎಂಬ ಉದ್ದೇಶದಿಂದ ಮುನ್ನೆಚ್ಚರಿಕೆ ಕ್ರಮವಾಗಿ ಅಮಿತ್ ಷಾ ಅವರು ಪ್ರತ್ಯೇಕ ಸಭೆ ನಡೆಸಿ ಅಭಿಪ್ರಾಯ ಪಡೆದುಕೊಳ್ಳಲಿದ್ದಾರೆ. ಸಭೆ ಬಳಿಕ ಪಕ್ಷದಲ್ಲಿ ಕೆಲ ಬದಲಾವಣೆಗಳಾಗಲಿವೆ ಎಂದು ಜಿಲ್ಲಾ ಮುಖಂಡರು ತಿಳಿಸಿದ್ದಾರೆ.

    ಬಿಜೆಪಿ ವರಿಷ್ಠರು ಹಾಗೂ ಕೇಂದ್ರ ಸಚಿವರಾದ ಅಮಿತ್ ಷಾ ಅವರು ಬೆಳಗಾವಿ ಜಿಲ್ಲೆಯ ಪಕ್ಷದ ಶಾಸಕರು, ಸಂಸದರು ಮತ್ತು ವಕ್ತಾರರು, ಪದಾಧಿಕಾರಿಗಳ ಕುರಿತು ಪ್ರತ್ಯೇಕ ಸಭೆ ನಿಗದಿಪಡಿಸಲಾಗಿದೆ. ಸದ್ಯದ ಜಿಲ್ಲೆಯಲ್ಲಿನ ಪಕ್ಷದ ಸ್ಥಿತಿ-ಗತಿ ಕುರಿತು ಮಾಹಿತಿ ಸಂಗ್ರಹಿಸಿಕೊಳ್ಳಲಿದ್ದಾರೆ. ಪಕ್ಷದಲ್ಲಿ ಸಣ್ಣಪುಟ್ಟ ಭಿನ್ನಾಭಿಪ್ರಾಯ ಸಮಸ್ಯೆಗಳಿರುವುದು ಸಹಜ.
    | ಮಹೇಶ ಟೆಂಗಿನಕಾಯಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts