More

    ಜಿಲ್ಲೆಯನ್ನು ಮಾದರಿಯನ್ನಾಗಿಸಲು ಇಲಾಖೆಗಳ ಸಮನ್ವಯ ಅಗತ್ಯ

    ಶಿಡ್ಲಘಟ್ಟ: ಸ್ಥಳೀಯ ಸಂಸ್ಥೆಗಳ ಸಾಮರ್ಥ್ಯ ವೃದ್ಧಿಸುಕೊಳ್ಳುವ ಜತೆಗೆ ಜನರಿಗೆ ಸೌಲಭ್ಯಗಳನ್ನು ತಲುಪಿಸುವುದು ಅತಿಮುಖ್ಯ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಪಿ.ಶಿವಶಂಕರ್ ಹೇಳಿದರು.

    ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ನರೇಗಾ ತಾಂತ್ರಿಕ ಸಿಬ್ಬಂದಿ, ಗ್ರಾಮ ಪಂಚಾಯಿತಿ ಆಡಳಿತ ಅಧಿಕಾರಿಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.

    ಶಿಕ್ಷಣ, ಅಂಗನವಾಡಿಗಳ ಅಭಿವೃದ್ಧಿ, ನೀರಿನ ಸಂಗ್ರಹಣೆ, ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡಬೇಕಿದೆ. ಗ್ರಾಪಂಮಟ್ಟದಲ್ಲಿ ಯಾವುದೇ ರೀತಿಯ ಹಣದ ಖರ್ಚಿಲ್ಲದೇ ಮಾಡಬಹುದಾದ 80 ಕಾಮಗಾರಿಗಳ ಪಟ್ಟಿ ಸಿದ್ಧಪಡಿಸಿದ್ದು, ಈ ಕೆಲಸಗಳಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಬೇಕೆಂದು ಸೂಚಿಸಿದರು.

    ಗ್ರಾಮಸಭೆ, ಸಾಮಾನ್ಯ ಸಭೆ, ಮಕ್ಕಳ ಸಭೆ, ಮಹಿಳಾ ಸಭೆ, ರೈತರ ಸಭೆ, ಕೆಡಿಪಿ ಸಭೆಗಳನ್ನು ಕಾಲಕಾಲಕ್ಕೆ ನಡೆಸುತ್ತಾ, ಎಲ್ಲ ಇಲಾಖೆಗಳು ಸಮಗ್ರ ಅಭಿವೃದ್ಧಿಯತ್ತ ಚಿಂತನೆ ನಡೆಸಬೇಕು. ಸಮನ್ವಯತೆಯಿಂದ ಕೆಲಸ ಮಾಡುವ ಮೂಲಕ ಜಿಲ್ಲೆಯನ್ನು ಮಾದರಿಯನ್ನಾಗಿ ರೂಪಿಸಬೇಕೆಂದರು.

    ಗ್ರಾಮಾಭಿವೃದ್ಧಿ ಜತೆಗೆ ಉದ್ಯೋಗ ಸೃಷ್ಟಿಸುವುದೇ ನರೇಗಾ ಯೋಜನೆಯ ಮೂಲ ಉದ್ದೇಶ, ಇದರಲ್ಲಿ ಅಕ್ರಮ, ಭ್ರಷ್ಟಾಚಾರದ ಆರೋಪಗಳು ಕೇಳಿಬಂದರೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.
    ಜಿಪಂ ಉಪ ಕಾರ್ಯದರ್ಶಿ ನೋಮೇಶ್ ಕುಮಾರ್, ತಾಪಂ ಇಒ ಶಿವಕುಮಾರ್, ನರೇಗಾ ಸಹಾಯಕ ನಿರ್ದೇಶಕ ಚಂದ್ರಪ್ಪ ಮತ್ತಿತರರು ಇದ್ದರು.

    ಸಮಸ್ಯೆ ಬಗೆಹರಿಸಿ ಘಟಕ ನಿರ್ಮಾಣ: ಸ್ವಚ್ಛ ಭಾರತ್ ಮಿಷನ್ ಅಭಿಯಾನದಲ್ಲಿ ಘನತ್ಯಾಜ್ಯ ವಿಲೇವಾರಿ ಘಟಕಗಳ ನಿರ್ಮಾಣಕ್ಕೆ ಈಗಾಗಲೇ 14 ಪಂಚಾಯಿತಿಗಳಲ್ಲಿ 89 ಎಕರೆ ಜಾಗ ಗುರುತಿಸಲಾಗಿದೆ. ಉಳಿದ 14 ಪಂಚಾಯಿತಿಗಳಲ್ಲಿ ನಿವೇಶನಗಳ ಗುರುತಿಸಿಲ್ಲ, ಇಲ್ಲಿಯೂ ಸಮಸ್ಯೆಗಳನ್ನು ಬಗೆಹರಿಸಿ ಘಟಕಗಳನ್ನು ನಿರ್ಮಾಣ ಮಾಡಲಾಗುವುದು ಸಿಇಒ ಶಿವಶಂಕರ್ ತಿಳಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts