More

    ಜಿಲ್ಲೆಯಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆ ಮುನ್ಸೂಚನೆ

    ಮಂಗಳೂರು: ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಶುಕ್ರವಾರ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ. ಗಡಿಭಾಗದಲ್ಲೂ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

    ಈಗಿನಂತೆ ಮೆ. 17ರಿಂದ ದಕ್ಷಿಣ ಒಳನಾಡು, ಮಲೆನಾಡು ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದ್ದು, ಮೇ 18ರಿಂದ ಕರಾವಳಿ ಭಾಗಗಳಲ್ಲಿಯೂ ಉತ್ತಮ ಮಳೆ ಆರಂಭವಾಗುವ ಲಕ್ಷಣಗಳಿವೆ. ಮುಂಗಾರು ಅಂಡಮಾನ್ ಹಾಗೂ ಕೇರಳಕ್ಕೆ ಅವಧಿಗೆ ಮುನ್ನವೇ ಆಗಮಿಸುವ ವರದಿಗಳಿದ್ದರೂ, ಆರಂಭಿಕ ದುರ್ಬಲತೆ ಇದ್ದರೆ ರಾಜ್ಯಕ್ಕೆ ಮುಂಗಾರು ಪ್ರವೇಶ ತಡವಾಗಬಹುದು ಎಂದು ಎಂದು ರಾಷ್ಟ್ರೀಯ ಹವಾಮಾನ ಮುನ್ಸೂಚನಾ ಕೇಂದ್ರ ಮಾಹಿತಿ ನೀಡಿದೆ.

    *ಅಲ್ಲಲ್ಲಿ ಸಾಧಾರಣ ಮಳೆ

    ದ.ಕ. ಜಿಲ್ಲೆಯಲ್ಲಿ ಗುರುವಾರ ಸರಾಸರಿ 32.7 ಡಿಗ್ರಿ ಗರಿಷ್ಠ, 24.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದ್ದು, ರಾತ್ರಿ 22.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಠಾಂಶ ದಾಖಲಾಗಿರುವುದರಿಂದ ರಾತ್ರಿ ಪೂರ್ತಿ ಒಣ ಚಳಿ ಮುಂದುವರಿದಿತ್ತು. ಸಂಜೆ ಕಡಬ ಸುತ್ತಮುತ್ತ ಭಾಗದಲ್ಲಿ ಸಾಧಾರಣ ಗಾಳಿ ಸಹಿತ ಮಳೆ, ಸಂಜೆ ಕೊಕ್ಕಡ ನೆಲ್ಯಾಡಿ ಭಾಗದಲ್ಲಿ ಕಾರ್ಮೋಡ ಇತ್ತು. ಉಪ್ಪಿನಂಗಡಿ, ಬೆಳ್ತಂಗಡಿ ಭಾಗದಲ್ಲಿ ಸಾಧಾರಣ ಮಳೆ ಸುರಿದಿತ್ತು. ರಾತ್ರಿ ಮಳೆ ಕಾಡು ಹಾಗೂ ಪಶ್ಚಿಮಘಟ್ಟದ ಹಲವಡೆ ಹೆಚ್ಚಿನ ಪ್ರಮಾಣದ ಮೋಡ ಕವಿದ ವಾತಾವರಣ ಕಂಡುಬಂದಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts