More

    ಜಿಲ್ಲೆಯಲ್ಲಿ ಪ್ರತ್ಯೇಕ ಹಾಲು ಒಕ್ಕೂಟ ಸ್ಥಾಪಿಸಿ

    ಹಾವೇರಿ: ಜಿಲ್ಲೆಯಲ್ಲಿಯೇ ಪ್ರತ್ಯೇಕ ಹಾಲು ಒಕ್ಕೂಟ ಸ್ಥಾಪಿಸಿದರೆ ರೈತರಿಗೆ ಅನುಕೂಲವಾಗುತ್ತದೆ. ಸರ್ಕಾರ ಕೂಡಲೆ ಈ ನಿಟ್ಟಿನಲ್ಲಿ ಕ್ರಮ ವಹಿಸಬೇಕು ಎಂದು ರೈತ ಸೇನಾ ಕರ್ನಾಟಕ ಸಂಘಟನೆ ಜಿಲ್ಲಾಧ್ಯಕ್ಷ ಸಿದ್ಧಲಿಂಗೇಶ ಎಂ. ಪಾಟೀಲ ಅವರು ಜಿಲ್ಲಾಧಿಕಾರಿ ಮೂಲಕ ಕೃಷಿ ಸಚಿವ ಬಿ.ಸಿ. ಪಾಟೀಲರಿಗೆ ಶುಕ್ರವಾರ ಮನವಿ ಸಲ್ಲಿಸಿದರು.

    ಜಿಲ್ಲೆಯ ರೈತರು ಕೃಷಿ ಜತೆಗೆ ಹೈನುಗಾರಿಕೆಯನ್ನು ಉಪಕಸುಬನ್ನಾಗಿ ಮಾಡಿಕೊಂಡಿದ್ದಾರೆ. ಧಾರವಾಡ ಹಾಲು ಒಕ್ಕೂಟ ವ್ಯಾಪ್ತಿಯಲ್ಲಿ ಹಾವೇರಿ ಜಿಲ್ಲೆಯಿಂದಲೇ ಅತಿಹೆಚ್ಚು ಹಾಲು ಪೂರೈಕೆಯಾಗುತ್ತಿದೆ. ಅಲ್ಲದೆ, ಇಲ್ಲಿಯ ಹಾಲನ್ನು ನಿತ್ಯ ಧಾರವಾಡಕ್ಕೆ ಸಾಗಿಸಬೇಕಿದೆ. ಜಿಲ್ಲೆಯಲ್ಲಿಯೇ ಹಾಲು ಒಕ್ಕೂಟ ಸ್ಥಾಪನೆಯಾದರೆ ಸಾಗಣೆ ವೆಚ್ಚದ ಜತೆಗೆ ಸಮಯದ ಉಳಿತಾಯವೂ ಆಗಲಿದೆ. ಆಗ ಇನ್ನೂ ಹೆಚ್ಚಿನ ರೈತರು ಹೈನುಗಾರಿಕೆಯತ್ತ ಚಿತ್ತ ಹರಿಸಿ ಆರ್ಥಿಕವಾಗಿ ಸದೃಢವಾಗುತ್ತಾರೆ. ಜಿಲ್ಲೆಯ ಅರ್ಧ ಭಾಗ ಅರೆಮಲೆನಾಡು ಪ್ರದೇಶವಾಗಿದೆ. ಇಲ್ಲಿ ಹೈನುಗಾರಿಕೆಗೆ ಸಾಕಷ್ಟು ಉತ್ತೇಜನವೂ ಸಿಗಬೇಕಿದೆ. ಕೃಷಿ ಸಚಿವರು ರೈತರ ಬಗ್ಗೆ ವಿಶೇಷ ಕಾಳಜಿ ಹೊಂದಿದ್ದು, ಈಗಾಗಲೇ ರೈತರಿಗಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸಿದ್ದಾರೆ. ಹಾಲು ಒಕ್ಕೂಟ ಸ್ಥಾಪನೆಗೆ ಮುಖ್ಯಮಂತ್ರಿಗಳೊಂದಿಗೆ ರ್ಚಚಿಸಿ ಜಿಲ್ಲೆಯ ರೈತರ ನೆರವಿಗೆ ಧಾವಿಸಬೇಕು.

    ಬೆಳೆನಷ್ಟ ಪರಿಹಾರ ನೀಡಿ: ಕಳೆದ ವರ್ಷ ಅತಿವೃಷ್ಟಿ ಹಾಗೂ ನೆರೆಯ ಹೊಡೆತಕ್ಕೆ ಸಿಲುಕಿ ಲಕ್ಷಾಂತರ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ನಷ್ಟವಾಗಿದೆ. ಸರ್ಕಾರ ಈಗಾಗಲೇ ಕೊಟ್ಟಿರುವ ಅಲ್ಪ ಪರಿಹಾರ ರೈತರಿಗೆ ಯಾವುದಕ್ಕೂ ಸಾಲದಾಗಿದೆ. ಅಲ್ಲದೆ ರೈತರ ಹೆಸರಿನಲ್ಲಿ ಬೇರೆಯವರು ಪರಿಹಾರ ಪಡೆದಿದ್ದಾರೆ. ಅರ್ಹ ರೈತರಿಗೆ ಇನ್ನೂ ಪರಿಹಾರ ದೊರೆತಿಲ್ಲ. ಕೃಷಿ ಸಚಿವರು ಸಿಎಂ ಜೊತೆಗೆ ರ್ಚಚಿಸಿ ಪ್ರತಿ ಹೆಕ್ಟೇರ್​ಗೆ 50ಸಾವಿರ ರೂ.ಗಳಂತೆ ಪರಿಹಾರ ಕೊಡಿಸಬೇಕು ಎಂದು ಮನವಿಯಲ್ಲಿ ವಿನಂತಿಸಿದ್ದಾರೆ.

    ಸಂಘಟನೆ ಉಪಾಧ್ಯಕ್ಷ ಪ್ರಶಾಂತ ದುಂಡಿಗೌಡ್ರ, ಶಿಗ್ಗಾಂವಿ ತಾಲೂಕಾಧ್ಯಕ್ಷ ಶಿವಾನಂದ ಹೊಸಮನಿ, ಸದಸ್ಯ ಷರೀಫ ಮಾಕಪ್ಪನವರ ಇತರರು ಮನವಿ ಸಲ್ಲಿಸುವ ಸಮಯದಲ್ಲಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts