More

    ಜಿಲ್ಲೆಯಲ್ಲಿ ಬಿಜೆಪಿ ಸದೃಢ

    ಕುಶಾಲನಗರ: ಜಿಲ್ಲೆಯಲ್ಲಿ ಬಿಜೆಪಿ ಸೃದೃಢವಾಗಿದೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲೂ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಲು ಕಾರ್ಯಕರ್ತರು ಶ್ರಮಿಸಬೇಕು ಎಂದು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಕರೆ ನೀಡಿದರು.

    ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಸವನತ್ತೂರು ಬೂತ್ ವಿಜಯ ಅಭಿಯಾನಕ್ಕೆ ಶುಕ್ರವಾರ ಚಾಲನೆ ನೀಡಿ ಮಾತನಾಡಿದರು. ಈಗಾಗಲೇ ಸಾವಿರಾರು ಬೂತ್ ಕಮಿಟಿಗಳನ್ನು ರಚನೆ ಮಾಡಲಾಗಿದೆ. ವಾಟ್ಸ್‌ಆ್ಯಪ್ ಗ್ರೂಪ್ ಮೂಲಕ ಗ್ರಾಮ, ಜಿಲ್ಲೆ, ರಾಜ್ಯ ಮತ್ತು ದೇಶದಲ್ಲಿ ಆಗುತ್ತಿರುವ ವಿಚಾರಗಳನ್ನು ತಿಳಿಸಲು ಬಳಸಿಕೊಳ್ಳಬೇಕು. ಸಾಮಾಜಿಕ ಜಾಲತಾಣದ ಮೂಲಕ ಸರ್ಕಾರದ ಸೌಲಭ್ಯಗಳನ್ನು ಜನಸಾಮಾನ್ಯರಿಗೂ ತಿಳಿಸಿದರೆ ಉತ್ತಮ ಎಂದು ಕಿವಿಮಾತು ಹೇಳಿದರು.

    ಬಿಜೆಪಿ ಜಿಲ್ಲಾಧ್ಯಕ್ಷ ರಾಬಿನ್ ದೇವಯ್ಯ ಮಾತನಾಡಿ, ಬೂತ್ ಮಟ್ಟದಲ್ಲಿ ಗೆದ್ದಾಗ ಮಾತ್ರ ಎಲ್ಲ ಚುನಾವಣೆ ಗೆಲ್ಲಲು ಸಾಧ್ಯ. ಸಾಮಾನ್ಯ ಕಾರ್ಯಕರ್ತನಿಗೂ ಪಕ್ಷದ ಸಂಘಟನೆಯ ಜವಾಬ್ದಾರಿ ನೀಡಿ ಪಕ್ಷವನ್ನು ಸದೃಢಗೊಳಿಸುತ್ತೇವೆ ಎಂದರು.

    ತಳಮಟ್ಟದಿಂದ ಪಕ್ಷ ಕಟ್ಟುವ ಜವಾಬ್ದಾರಿ ಬೂತ್ ಸಮಿತಿಗಳಿಗಿದ್ದು, ಪಕ್ಷಕ್ಕೆ ಕಾರ್ಯಕರ್ತರೇ ಬೆನ್ನೆಲುಬು. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಜಿಲ್ಲೆ ಸಾಕಷ್ಟು ಅಭಿವೃದ್ಧಿ ಹೊಂದಿದ್ದು, ಪಿಎಂ ಕಿಸಾನ್ ಯೋಜನೆ, ವೃದ್ಧಾಪ್ಯ ವೇತನ, ಅಂಗವಿಕಲ ವೇತನ, ಅನ್ನಭಾಗ್ಯ ಯೋಜನೆ, ಕರೊನಾ ಸಂದರ್ಭದಲ್ಲಿ ಎಲ್ಲರಿಗೂ ಲಸಿಕೆ, ಗ್ರಾಮೀಣ ರಸ್ತೆಗಳ ಅಭಿವೃದ್ಧಿ ಹೀಗೆ ಹಲವಾರು ಯೋಜನೆಗಳ ಬಗ್ಗೆ ಕಾರ್ಯಕರ್ತರು ಮನೆ ಮನೆಗೆ ತಲುಪಿಸುವ ಕಾರ್ಯ ಮಾಡುವಂತೆ ತಿಳಿಸಿದರು.

    ಬೂತ್ ಅಧ್ಯಕ್ಷ ಆರ್.ಕೆ.ಕೃಷ್ಣ ಅಧ್ಯಕ್ಷತೆ ವಹಿಸಿದ್ದರು. ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ, ಕೊಡಗು ಜಿಲ್ಲಾ ಬಿಜೆಪಿಯ ಮಾಜಿ ಅಧ್ಯಕ್ಷ ಬಿ.ಬಿ.ಭಾರತೀಶ್, ಮಂಡಲ ಅಧ್ಯಕ್ಷ ಮನು ಕುಮಾರ್ ರೈ, ರವಿ ಕಾಳಪ್ಪ, ಪ್ರಮುಖರಾದ ಕೆ.ಜಿ.ಮನು, ಎಂ.ಡಿ.ಕೃಷ್ಣಪ್ಪ, ಬೂತ್‌ನ ಪ್ರವೀಣ್, ಮಂಜು, ಕೂಡುಮಂಗಳೂರು ಗ್ರಾಪಂ ಅಧ್ಯಕ್ಷೆ ಇಂದಿರಾ ರಮೇಶ್, ಸದಸ್ಯ ಚಂದ್ರು ಮೂಡ್ಲಿಗೌಡ ಇತರರು ಹಾಜರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts