More

    ಜಿಲ್ಲೆಯಲ್ಲಿ ಮಾಸಿಕ 250 ಯೂನಿಟ್ ರಕ್ತ ಅವಶ್ಯ : ರಕ್ತದಾನ ಶಿಬಿರ ಉದ್ಘಾಟಿಸಿ ವೈದ್ಯ ಡಾ.ಕರುಂಬಯ್ಯ ಅಭಿಮತ



    ಕೊಡಗು : ಜಿಲ್ಲೆಯಲ್ಲಿ ಮಾಸಿಕ 250 ಯೂನಿಟ್ ರಕ್ತದ ಅವಶ್ಯಕತೆಯಿದ್ದು, ಕೊರತೆಯಾಗದಂತೆ ಸಂಘ, ಸಂಸ್ಥೆಗಳು ಸಹಕರಿಸಬೇಕು ಎಂದು ಮಡಿಕೇರಿ ರಕ್ತನಿಧಿ ಕೇಂದ್ರದ ವೈದ್ಯ ಡಾ.ಕರುಂಬಯ್ಯ ಮನವಿ ಮಾಡಿದರು.


    ಸ್ವಾಮಿ ವಿವೇಕಾನಂದ ಯೂತ್ ಮೂವ್‌ಮೆಂಟ್, ಮಡಿಕೇರಿ ರಕ್ತನಿಧಿ ಕೇಂದ್ರ, ರೋಟರಿ ಕ್ಲಬ್, ತಾಲೂಕು ಸಾರ್ವಜನಿಕ ಆಸ್ಪತ್ರೆ, ಪಟ್ಟಣ ಪಂಚಾಯಿತಿ, ತಾಲೂಕು ರಕ್ಷಣಾ ವೇದಿಕೆ, ಆಟೋ ಚಾಲಕರು ಮತ್ತು ಮಾಲೀಕರ ಸಂಘಗಳ ವತಿಯಿಂದ ಶುಕ್ರವಾರ ಸೋಮವಾರಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಆಯೋಜಿಸಿದ್ದ ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿದರು.


    ಕೋವಿಡ್ ನಂತರ ಆಸ್ಪತ್ರೆಗಳಲ್ಲಿ ರೋಗಿಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ರಕ್ತದ ಬೇಡಿಕೆಯೂ ಹೆಚ್ಚಾಗುತ್ತಿದೆ. ಹೀಗಾಗಿ ಜಿಲ್ಲೆಯಲ್ಲಿ ಮಾಸಿಕ 7 ರಿಂದ 8 ಶಿಬಿರಗಳು ನಡೆಯಲೇಬೇಕಾಗಿದೆ. ಈ ನಿಟ್ಟಿನಲ್ಲಿ ಸಂಘ, ಸಂಸ್ಥೆಗಳು ರಕ್ತದಾನ ಶಿಬಿರಗಳನ್ನು ಆಯೋಜಿಸಬೇಕು. ರಕ್ತದಾನ ಮಾಡಿದರೆ ಉತ್ತಮ ಆರೋಗ್ಯ ಹೊಂದಬಹುದು ಎಂದು ಜಾಗೃತಿ ಮೂಡಿಸಬೇಕು ಎಂದು ಸಲಹೆ ನೀಡಿದರು.


    ಸರ್ಕಾರಿ ಆಸ್ಪತ್ರೆಯ ವೈದ್ಯಾಧಿಕಾರಿ ಶಿವಪ್ರಸಾದ್, ಸ್ವಾಮಿ ವಿವೇಕಾನಂದ ಯೂತ್ ಮೂವ್‌ಮೆಂಟ್‌ನ ಜಿಲ್ಲಾ ಸಮಿತಿ ಖಜಾಂಚಿ ಚಂದ್ರಶೇಖರ್, ರೋಟರಿ ಸಂಸ್ಥೆ ಅಧ್ಯಕ್ಷ ಲೋಕೇಶ್, ಆಟೋ ಚಾಲಕರು ಮತ್ತು ಮಾಲೀಕರ ಸಂಘದ ಅಧ್ಯಕ್ಷ ಗಂಗಾಧರ್, ಕರವೇ ತಾಲೂಕು ಅಧ್ಯಕ್ಷ ಕೆ.ಎನ್.ದೀಪಕ್, ಜೇಸಿ ಸಂಸ್ಥೆಯ ಕಾರ್ಯದರ್ಶಿ ರಾಜೇಶ್, ವಕೀಲ ಎಚ್.ಸಿ.ನಾಗೇಶ್ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts