More

    ಜಿಲ್ಲೆಯಲ್ಲಿ 237 ಶಂಕಿತರು ಪತ್ತೆ

    ಧಾರವಾಡ: ಜಿಲ್ಲೆಯಲ್ಲಿ ನಿಗಾವಹಿಸಿದವರ ಸಂಖ್ಯೆಯ ಜತೆಗೆ ಗಂಟಲ ದ್ರವ ಪರೀಕ್ಷೆಗೆ ಒಳಪಟ್ಟವರ ಸಂಖ್ಯೆ 2000 ದಾಟಿದೆ. ಜಿಲ್ಲೆಯಲ್ಲಿ ಮಂಗಳವಾರ ಸಂಜೆವರೆಗಿನ 24 ಗಂಟೆ ಅವಧಿಯಲ್ಲಿ 237 ಶಂಕಿತರು ಪತ್ತೆಯಾಗಿದ್ದು, ಅವರ ಗಂಟಲ ದ್ರವ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಶಂಕಿತರ ಜತೆಗೆ ನಿಗಾ ವಹಿಸಲಾಗಿರುವವರ ಸಂಖ್ಯೆಯಲ್ಲೂ ಏರಿಕೆಯಾಗಿದೆ. ಸೋಮವಾರ ಇದ್ದ 2540 ಶಂಕಿತರ ಸಂಖ್ಯೆ ಮಂಗಳವಾರ 2757ಕ್ಕೆ ಏರಿಕೆಯಾಗಿದೆ. ಈವರೆಗೆ ಜಿಲ್ಲೆಯಲ್ಲಿ 2233 ಶಂಕಿತ ವ್ಯಕ್ತಿಗಳ ಗಂಟಲ ದ್ರವ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಿದ್ದು, 1909 ಜನರ ವರದಿ ನೆಗೆಟಿವ್ ಬಂದಿವೆ. 9 ಪ್ರಕರಣದಲ್ಲಿ ಪಾಸಿಟಿವ್ ಬಂದಿದ್ದು, 7 ಜನರಿಗೆ ಕಿಮ್್ಸ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಧಾರವಾಡ ಹಾಗೂ ಹುಬ್ಬಳ್ಳಿಯ ತಲಾ ಒಬ್ಬರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇನ್ನೂ 317 ವರದಿಗಳು ಬರಬೇಕಿದೆ. ವೈರಸ್ ಭೀತಿ ಹಿನ್ನೆಲೆಯಲ್ಲಿ ಜಿಲ್ಲೆಯ ಆರೋಗ್ಯ ಇಲಾಖೆಯು ವಿದೇಶದಿಂದ ಆಗಮಿಸಿರುವ ಹಾಗೂ ಅವರ ಸಂಪರ್ಕಕ್ಕೆ ಒಳಗಾದ 2757 ಜನರ ಮೇಲೆ ನಿಗಾ ಇಟ್ಟಿದೆ. ಈ ಪೈಕಿ 1976 ಜನರು ಮನೆಯಲ್ಲೇ ಪ್ರತ್ಯೇಕವಾಗಿ (14 ದಿನ) ವಾಸವಾಗಿದ್ದಾರೆ. ಆಸ್ಪತ್ರೆಯ ಪ್ರತ್ಯೇಕ ವಾರ್ಡಗಳಲ್ಲಿ 8 ಜನ ದಾಖಲಾಗಿದ್ದಾರೆ. 70 ಜನರು 14 ದಿನಗಳ ಪ್ರತ್ಯೇಕ ವಾಸ ಪೂರ್ಣಗೊಳಿಸಿದ್ದರೆ, 703 ಜನರು 28 ದಿನಗಳ ಪ್ರತ್ಯೇಕ ವಾಸ ಪೂರ್ಣಗೊಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts