More

    ಜಿಲ್ಲೆಯಾದ್ಯಂತ ದೀಪಾವಳಿ ಸಡಗರ

    ಬಾಗಲಕೋಟೆ: ವರ್ಷದ ದೊಡ್ಡ ಹಬ್ಬವೆಂದೆ ಬಿಂಬಿತವಾಗಿರುವ ಬೆಳಕಿನ ಹಬ್ಬ ದೀಪಾವಳಿ ಜಿಲ್ಲೆಯಾದ್ಯಂತ ಸಂಭ್ರಮ, ಸಂಡಗರದಿಂದ ನಡೆಯುತ್ತಿದೆ. ಮನೆ-ಮನಗಳಲ್ಲಿ ಸಂಭ್ರಮ, ಸಂತಸ ಮನೆ ಮಾಡಿದೆ. ಸಡಗರದಿಂದ ದೀಪಾವಳಿ ಆಚರಣೆ ನಡೆದಿದೆ. ಕೋಟೆನಾಡಿನಲ್ಲಿ ವೈಭವದಿಂದ ದೀಪಾವಳಿ ಆಚರಿಸಲಾಗುತ್ತಿದೆ.

    ಬರಗಾಲದ ಗಾಯದ ನಡುವೆಯೂ ಜಿಲ್ಲೆಯ ಎಲ್ಲ ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ದೀಪಾವಳಿ ಹಬ್ಬದ ಆಚರಣೆ ಜೋರಾಗಿ ನಡೆದಿದೆ. ಭಾನುವಾರ ಬೆಳಗ್ಗೆ ನರಕ ಚುತುದರ್ಶಿ, ಸಂಜೆ ಅಂಗಡಿ, ಮುಂಗಟ್ಟು ಹಾಗೂ ಮನೆಮನಗಳಲ್ಲಿ ಲಕ್ಷ್ಮೀ ಪೂಜೆ ನೆರವೇರಿಸಲಾಯಿತು. ಮಂಗಳವಾರ ಪಾಡ್ಯ ಆಚರಿಸಿ ಮೂರು ದಿನಗಳ ಕಾಲ ಹಬ್ಬದ ಸಂಭ್ರಮ ಇಮ್ಮಡಿಗೊಳಿಸಲಿದೆ.

    ಬಾಗಲಕೋಟೆ ನಗರ ಮಾರುಕಟ್ಟೆ ಸೇರಿದಂತೆ ಮುಧೋಳ, ಜಮಖಂಡಿ, ಬಾದಾಮಿ, ಹುನಗುಂದ, ಇಳಕಲ್ಲ, ಬೀಳಗಿ ಪಟ್ಟಣದ ಮಾರುಕಟ್ಟೆಗಳಲ್ಲಿ ತರಹೇವಾರಿ ಆಕಾಶ ಪುಟ್ಟಿಗಳು, ಪ್ಲಾಸ್ಟಿಕ್, ಮಣ್ಣಿನ ಹಣತೆಗಳು ಮಾರುಕಟ್ಟೆಯಲ್ಲಿ ಆಕರ್ಷಿಸುತ್ತಿವೆ. ಹೊಸ ಮಾದರಿಗಳ ಬಟ್ಟೆಗಳ ಖರೀದಿಗೆ ಜನ ಮುಗಿಬಿದ್ದಿರುವ ದೃಶ್ಯ ಕಂಡು ಬಂದಿತು. ಚಿಕ್ಕಮಕ್ಕಳು ಪಟಾಕಿಗಳ ಖರೀದಿ ಮಾಡಲು ಪಾಲಕರ, ಪೋಷಕರ ದುಂಬಾಲು ಬಿದ್ದಿದ್ದಾರೆ.
    ಅಲ್ಲದೆ ವ್ಯಾಪಕ ಪ್ರಮಾಣದಲ್ಲಿ ಕಬ್ಬು, ಬಾಳೆ ದಿಂಡು, ಚಂಡು ಹೂ, ಬೂದ ಕುಂಬಳಕಾಯಿ ಖರೀದಿ ನಡೆದಿದೆ. ಪಾಡ್ಯ ದಿನ ಬೈಕ್, ಕಾರು ಸೇರಿದಂತೆ ಹೊಸ ವಾಹನಗಳು ರಸ್ತೆಗೆ ಇಳಿಯಲಿವೆ. ಗೃಹ ಉಪಯೋಗಿ ವಸ್ತುಗಳ ವ್ಯಾಪಾರದ ಭರಾಟೆ ನಡೆಯಲಿದೆ.

    ಮನೆಗಿಂತಲೂ ಅಂಗಡಿ, ಮುಂಗುಟ್ಟು ಗಳಲ್ಲಿ ಲಕ್ಷ್ಮೀ ಪೂಜೆಯ ಅದ್ದೂರಿಯಾಗಿ ಜರುಗಲಿದೆ. ದೇವಿಗೆ ವಿಶೇಷ ಅಡುಗೆ ಮಾಡಿ ನೈವೇದ್ಯ ಸಮರ್ಪಿಸಲಾಗುತ್ತದೆ. ಜನರು ಹಳೇ ವಾಹನಗಳನ್ನು ಶುಚಿಗೊಳಿಸಿ, ವಿವಿಧ ರೀತಿಯಲ್ಲಿ ಶೃಂಗಾರಗೊಳಿಸಿ ವಿಶೇಷ ಪೂಜೆ ಮಾಡಲಿದ್ದಾರೆ. ಅಂಗಡಿ, ಮುಂಗಟ್ಟುಗಳು ವಿದ್ಯುತ್ ಅಲಂಕಾರದಿಂದ ಕಂಗೂಳಿಸುತ್ತಿವೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts