More

    ಜಿಲ್ಲೆಯ ಕೆರೆ ತುಂಬಿಸಲು ನೀರು ಬಿಡುಗಡೆ

    ಧಾರವಾಡ: ಮಲಪ್ರಭಾ ಯೋಜನೆಯ ನವಿಲುತೀರ್ಥ ರೇಣುಕಾ ಸಾಗರ ಜಲಾಶಯದ ಬಲದಂಡೆ ಕಾಲುವೆ ಮೂಲಕ ಧಾರವಾಡ ಜಿಲ್ಲೆಯ ಕುಡಿಯುವ ನೀರಿನ ಕೆರೆಗಳನ್ನು ತುಂಬಿಸಿಕೊಳ್ಳಲು ಜೂ. 10ರಿಂದ ನೀರು ಹರಿಸಲಾಗುತ್ತಿದೆ. 20 ದಿನಗಳ ಕಾಲ ನವಲಗುಂದ, ಹುಬ್ಬಳ್ಳಿ, ಕುಂದಗೋಳ, ತಾಲೂಕಿನ ಕುಡಿಯುವ ನೀರಿನ ಕೆರೆಗಳನ್ನು ತುಂಬಿಸಲು ಬೆಳಗಾವಿ ಪ್ರಾದೇಶಿಕ ಆಯುಕ್ತರು ಆದೇಶಿಸಿದ್ದಾರೆ. ಕಾಲುವೆಗಳ ಮೂಲಕ ಹರಿಸಿರುವ ನೀರನ್ನು ಕೆರೆ ತುಂಬಿಸುವ ಉದ್ದೇಶಕ್ಕೆ ಮಾತ್ರ ಬಳಸಿಕೊಳ್ಳಬೇಕು. ಮಲಪ್ರಭಾ ಬಲದಂಡೆ ಕಾಲುವೆ ಆಧುನೀಕರಣಗೊಂಡಿರುವುದರಿಂದ ಕಾಲುವೆಯಲ್ಲಿ ನೀರಿನ ಹರಿವಿನ ವೇಗ ಹೆಚ್ಚಾಗಿದ್ದು, ಕಾಲುವೆ ಬದಿ ಮತ್ತು ನೀರನ್ನು ಉಪಯೋಗಿಸುವ ಸಂದರ್ಭದಲ್ಲಿ ಜನರು ಸುರಕ್ಷತೆ ಬಗ್ಗೆ ಎಚ್ಚರಿಕೆ ವಹಿಸಬೇಕು ಎಂದು ಕರ್ನಾಟಕ ನೀರಾವರಿ ನಿಗಮದ ಮಲಪ್ರಭಾ ಬಲದಂಡೆ ಕಾಲುವೆ ವೃತ್ತದ ಸೂಪರಿಂಟೆಂಡಿಂಗ್ ಇಂಜಿನಿಯರ್ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts