More

    ಜೀವನದಲ್ಲಿ ಗುರು ಮುಖ್ಯ: ನಟ ಶ್ರೀನಿ

    ಮೈಸೂರು: ವಿದ್ಯಾರ್ಥಿ ಜೀವನದಲ್ಲಿ ಸ್ಪಷ್ಟ ಗುರಿ ಇರಬೇಕು ಎಂದು ಚಲನಚಿತ್ರ ನಟ ಶ್ರೀನಿ ಹೇಳಿದರು

    ಮಹಾರಾಜ ಕಾಲೇಜು ಶತಮಾನೋತ್ಸವ ಭವನದಲ್ಲಿ ಶುಕ್ರವಾರ ಆಯೋಜಿಸಿದ್ದ ಪಠ್ಯೇತರ ಚಟುವಟಿಕೆಗಳ ಸಮಾರೋಪ ಹಾಗೂ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.

    ಪ್ರತಿಯೊಬ್ಬ ವಿದ್ಯಾರ್ಥಿ ನಿರ್ದಿಷ್ಟ ಗುರಿ ಹೊಂದಬೇಕು. ಅದನ್ನು ಸಾಧಿಸಲು ಪರಿಶ್ರಮ ಪಡಬೇಕು. ಯಾವ ಬೆಂಚ್‌ನಲ್ಲಿ ಕುಳಿತುಕೊಳ್ಳುತ್ತೇವೆ ಎನ್ನುವುದು ಮುಖ್ಯವಲ್ಲ. ಬದುಕಿನಲ್ಲಿ ಮುಂದೆ ಬರುವುದಕ್ಕಾಗಿ ನಾವೆಷ್ಟು ಯತ್ನ ಪಡುತ್ತೇವೆ ಎನ್ನುವುದು ಮುಖ್ಯವಾಗುತ್ತದೆ. ನಮ್ಮ ಜಯವನ್ನು ನಾವೇ ಕಂಡುಕೊಳ್ಳಬೇಕು. ಅದಕ್ಕಾಗಿ ಶ್ರಮ ಹಾಕಬೇಕು. ಸೋಲಿನ ಬಗ್ಗೆ ಭಯ ಪಡಬಾರದು ಎಂದರು

    ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ(ಮುಡಾ) ಕಾರ್ಯದರ್ಶಿ ಡಾ.ಎನ್.ಸಿ.ವೆಂಕಟರಾಮು ಮಾತನಾಡಿ, ವಿದ್ಯಾರ್ಥಿ ಜೀವನದಿಂದಲೇ ಪಠ್ಯದೊಂದಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೂ ಸಿದ್ಧವಾಗಬೇಕು. ಆದರೆ, ಇತ್ತೀಚಿಗೆ ಬಹಳಷ್ಟು ಪದವೀಧರರು ನಿರುದ್ಯೋಗಿಗಳಾಗಿ ಉಳಿದಿದ್ದಾರೆ. ಇದೆಲ್ಲವೂ ಕಾಲೇಜು ಬಿಟ್ಟು ಹೋದ ಮೇಲೆ ಅರ್ಥವಾಗುತ್ತದೆ. ಕಾಲ ಮಿಂಚಿದ ಮೇಲೆ ಚಿಂತಿಸುವುದಕ್ಕಿಂತ ಈಗಿನಿಂದಲೇ ಎಚ್ಚೆತ್ತುಕೊಳ್ಳಬೇಕು ಎಂದು ಸಲಹೆ ನೀಡಿದರು
    ಖಾಸಗೀಕರಣ, ಜಾಗತೀಕರಣ ಹಾಗೂ ಉದಾರೀಕರಣದಿಂದಾಗಿ ಈಗಿನ ಸ್ಪರ್ಧಾತ್ಮಕ ಯುಗದಲ್ಲಿ ಪೈಪೋಟಿ ಹೆಚ್ಚಾಗಿದೆ. ಹೀಗಾಗಿ, ವಿದ್ಯಾರ್ಥಿಗಳು ಚೆನ್ನಾಗಿ ಅಭ್ಯಾಸ ಮಾಡಲು ಒತ್ತು ನೀಡಬೇಕು ಎಂದರು

    ಮಹಾರಾಜ ಕಾಲೇಜಿಗೆ ಬರುವವರಲ್ಲಿ ಹೆಚ್ಚಿನವರು ಗ್ರಾಮಾಂತರ ಪ್ರದೇಶದವರು. ಕೆಳ ವರ್ಗದವರು, ಶ್ರಮಿಕರು ಹಾಗೂ ಮಧ್ಯಮ ವರ್ಗದವರು ಇರುತ್ತಾರೆ. ಉತ್ತಮ ಶಿಕ್ಷಣ ಪಡೆದರೆ ಮಾತ್ರಉಜ್ವಲ ಬದುಕು ಕಟ್ಟಿಕೊಳ್ಳಲು ಸಾಧ್ಯ ಎಂದರು. ಪ್ರಾಂಶುಪಾಲೆ ಡಾ.ಅನಿಟ ವಿಮ್ಲ ಬ್ರ್ಯಾಗ್ಸ್, ಆಡಳಿತಾಧಿಕಾರಿ ಪ್ರೊ.ಜಿ.ಎಚ್.ನಾಗರಾಜ್ ಸೇರಿದಂತೆ ಇನ್ನಿತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts