More

    ಜುಲೈ ಮಾಸಾಂತ್ಯಕ್ಕೆ ಪ್ರತಿಯೊಬ್ಬರಿಗೂ ಚುಚ್ಚುಮದ್ದು

    ಹುಬ್ಬಳ್ಳಿ: ದೇಶದಲ್ಲಿ ಜೂ. 21ರಂದು 88 ಲಕ್ಷ ಜನರಿಗೆ ಕೋವಿಡ್ ಲಸಿಕೆ ನೀಡಿರುವುದು ವಿಶ್ವದಾಖಲೆಯಾಗಿದೆ. ಬೇಡಿಕೆಯ ಮಟ್ಟಕ್ಕೆ ಲಸಿಕೆ ಉತ್ಪಾದನೆ ಹೆಚ್ಚಿಸಲು ಸಂಬಂಧಿಸಿದ ಕಂಪನಿಗಳು ಕ್ರಮ ಕೈಗೊಂಡಿವೆ. ಜುಲೈ ಅಂತ್ಯದ ವೇಳೆಗೆ ಲಸಿಕೆಯ ಬೇಡಿಕೆ ಹಾಗೂ ಪೂರೈಕೆ ಸರಿದೂಗಲಿದ್ದು, ವ್ಯಾಪಕವಾಗಿ ಎಲ್ಲರಿಗೂ ಲಸಿಕೆ ನೀಡಲಾಗುವುದು ಎಂದು ಕೇಂದ್ರ ಸಂಸದೀಯ ವ್ಯವಹಾರ, ಗಣಿ ಮತ್ತು ಕಲ್ಲಿದ್ದಲು ಸಚಿವ ಪ್ರಲ್ಹಾದ ಜೋಶಿ ಹೇಳಿದರು.

    ನಗರದ ಪ್ರವಾಸಿ ಮಂದಿರ ಆವರಣದಲ್ಲಿ ಸೋಮವಾರ ಏರ್ಪಡಿಸಿದ್ದ ಸರಳ ಕಾರ್ಯಕ್ರಮದಲ್ಲಿ, 2020-21ನೇ ಸಾಲಿನಲ್ಲಿ ಜಿಲ್ಲೆಯಲ್ಲಿ ನೈಸರ್ಗಿಕ ವಿಕೋಪದಿಂದ ಮೃತಪಟ್ಟ 8 ಜನರ ಕುಟುಂಬದವರಿಗೆ ಪ್ರಧಾನ ಮಂತ್ರಿ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ನೀಡಲಾದ ತಲಾ 2 ಲಕ್ಷ ರೂಪಾಯಿಗಳ ಚೆಕ್ ವಿತರಿಸಿ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಪ್ರಕೃತಿ ವಿಕೋಪದಿಂದ ಮೃತಪಟ್ಟವರ ಕುಟುಂಬಕ್ಕೆ ರಾಜ್ಯ ಹಾಗೂ ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿಯಿಂದ ಈಗಾಗಲೇ 4 ಲಕ್ಷ ರೂಪಾಯಿಗಳನ್ನು ಕೊಡಲಾಗಿದೆ. ಈಗ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಸಾಂತ್ವನ ಪರಿಹಾರ ನೀಡಲಾಗಿದೆ ಎಂದರು.

    ಲಸಿಕೆ ಹಂಚಿಕೆ ವಿಚಾರದಲ್ಲಿ ತಾರತ್ಯಮವಿಲ್ಲ. ಧಾರವಾಡ ಜಿಲ್ಲೆಯ ಕೆಲ ಕೇಂದ್ರಗಳಲ್ಲಿ ಲಸಿಕೆ ಪಡೆಯಲು ಜನದಟ್ಟಣೆ ಉಂಟಾಗಿರುವುದು ಕಂಡುಬಂದಿದೆ. ಕಡಿಮೆ ಜನದಟ್ಟಣೆ ಇರುವ ಕೇಂದ್ರಗಳಲ್ಲಿ ಉಳಿದ ಲಸಿಕೆಗಳನ್ನು ಜನದಟ್ಟಣೆ ಇರುವ ಕಡೆ ನೀಡುವಂತೆ ಜಿಲ್ಲಾಧಿಕಾರಿಗೆ ಸೂಚಿಸಿದ್ದೇನೆ. ಬೆಳಗ8ರಿಂದ ಲಸಿಕೆ ನೀಡಿಕೆ ಆರಂಭಿಸಲು ಪ್ರಯತ್ನಿಸಲಾಗುವುದು ಎಂದರು.

    ಸಾವಿನ ಪ್ರಮಾಣ ತಗ್ಗಿಸಲು ಎಲ್ಲ ರೀತಿಯ ಕ್ರಮ ಕೈಗೊಳ್ಳಲಾಗುತ್ತಿದೆ. ಜಿಲ್ಲಾಡಳಿತದ ಮೂಲಕ ಆರೋಗ್ಯ ಇಲಾಖೆ ಸಲ್ಲಿಸಿದ ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸಿದೆ. ಕೆಲವು ಪ್ರಕರಣಗಳಲ್ಲಿ ಅಗತ್ಯವಿದೆ ಎಂದು ತಿಳಿಸಿದ್ದಕ್ಕೆ ಪ್ರತಿಯಾಗಿ ಡಿಆರ್​ಡಿಒ ಸಂಶೋಧಿಸಿದ ಡಿ2 ಔಷಧ ಸಹ ತರಿಸಿಕೊಡಲಾಗಿದೆ ಎಂದರು.

    ಉಪ ವಿಭಾಗಾಧಿಕಾರಿ ಗೋಪಾಲಕೃಷ್ಣ, ತಹಸೀಲ್ದಾರರಾದ ಶಶಿಧರ ಮಾಡ್ಯಾಳ, ಪ್ರಕಾಶ ನಾಸಿ, ಇತರ ಅಧಿಕಾರಿಗಳು ಇದ್ದರು.

    ಫ್ಲೈ ಓವರ್ ಕಾಮಗಾರಿ ತಾಂತ್ರಿಕ ಸಮಸ್ಯೆಗೆ ಪರಿಹಾರ

    ಹುಬ್ಬಳ್ಳಿಯಲ್ಲಿ ನಿರ್ವಿುಸಲಾಗುವ ಫ್ಲೈ ಓವರ್ ವಿಷಯವಾಗಿ ತಾಂತ್ರಿಕ ಸಮಸ್ಯೆ ಕುರಿತು ಅಧಿಕಾರಿಗಳು ಹಾಗೂ ಜನರು ತಿಳಿಸಿದ್ದಾರೆ. ಕೊಪ್ಪಿಕರ ರಸ್ತೆ ಹಾಗೂ ನೆಹರು ಮೈದಾನ ರಸ್ತೆಗಳನ್ನು ಪ್ಲೈ ಓವರ್​ಗೆ ಸಂರ್ಪಸಲು ಅನುವಾಗುವಂತೆ ಕಾಮಗಾರಿಯನ್ನು ಚಿಟಗುಪ್ಪಿ ಆಸ್ಪತ್ರೆಯಿಂದ ಕೈಗೊಳ್ಳುವ ಕುರಿತು ಪರಿಶೀಲಿಸಲಾಗಿವುದು. ಭೂ ಸ್ವಾಧೀನ ಪ್ರಕ್ರಿಯೆಯಲ್ಲಿ ಯಾವುದೇ ತೊಂದರೆಯಿಲ್ಲ. ಫ್ಲೈ ಓವರ್ ಕಾಮಗಾರಿ ಅನುಷ್ಠಾನದ ಸಂಪೂರ್ಣ ಹೊಣೆಗಾರಿಕೆಯನ್ನು ಜಿಲ್ಲಾಧಿಕಾರಿಗೆ ವಹಿಸಲಾಗಿದೆ. ಪೊಲೀಸ್ ಹಾಗೂ ಮಹಾನಗರ ಪಾಲಿಕೆ ವತಿಯಿಂದ ಕಾಮಗಾರಿ ಕುರಿತು ಅಧ್ಯಯನ ನಡೆಯುತ್ತಿದೆ. 2-3 ಸಮಸ್ಯೆಗಳಿದ್ದು, ಬಗೆಹರಿಸಿ ಶೀಘ್ರವಾಗಿ ಕಾಮಗಾರಿಗೆ ಚಾಲನೆ ನೀಡಲಾಗುವುದು ಎಂದು ಸಚಿವ ಪ್ರಲ್ಹಾದ ಜೋಶಿ ಅವರು ಪ್ರಶ್ನೆಗಳಿಗೆ ಉತ್ತರಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts