ಜೂ.19ರಂದು ಸಂತೇಮರಹಳ್ಳಿ ಉಪವಿಭಾಗಗಳ ವ್ಯಾಪ್ತಿಯಲ್ಲಿ ವಿದ್ಯುತ್ ಜನಸಂಪರ್ಕ ಸಭೆ

Published on

ಚಾಮರಾಜನಗರ: ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದಿಂದ ಚಾಮರಾಜನಗರ, ಹರದನಹಳ್ಳಿ ಹಾಗೂ ಸಂತೇಮರಹಳ್ಳಿ ಉಪವಿಭಾಗಗಳ ವ್ಯಾಪ್ತಿಯಲ್ಲಿ ಜೂ.19 ರಂದು ಜನಸಂಪರ್ಕ ಸಭೆ ನಡೆಯಲಿದೆ.

ಜೂ19ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಚಾಮರಾಜನಗರ ಉಪವಿಭಾಗ, ಮಧ್ಯಾಹ್ನ 12.30 ರಿಂದ 1.30 ಗಂಟೆಯವರೆಗೆ ಹರದನಹಳ್ಳಿ ಉಪವಿಭಾಗ ಹಾಗೂ ಮಧ್ಯಾಹ್ನ 3 ರಿಂದ ಸಂಜೆ 4 ಗಂಟೆಯವರೆಗೆ ಸಂತೇಮರಹಳ್ಳಿ ಉಪವಿಭಾಗ ವ್ಯಾಪ್ತಿಯಲ್ಲಿ ಜನಸಂಪರ್ಕ ಸಭೆ ನಿಗದಿಯಾಗಿದೆ. ವಿದ್ಯುತ್ ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ವಿದ್ಯುತ್ ಸಂಬಂಧಿತ ಕುಂದು ಕೊರತೆಗಳಿದ್ದಲ್ಲಿ ಸಭೆಗೆ ತಿಳಿಸುವಂತೆ ನಿಗಮದ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net